Site icon Vistara News

Heart Attack | ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು

ಹಾಸನ: ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದೇವಿಯ ಕಣ್ತುಂಬಿಕೊಳ್ಳಲು ಬಂದ ಭಕ್ತನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವರ್ಷಕ್ಕೊಮ್ಮೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದ್ದು, ಇಲ್ಲಿಗೆ ಆಗಮಿಸಿದ್ದ ಗಿರೀಶ್ (43) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ.

ಹಾಸನ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಗಿರೀಶ್, ಪ್ರತಿ ವರ್ಷದಂತೆ ಈ ವರ್ಷವೂ ಹಾಸನಾಂಬೆ ದೇವಿಯ ದರ್ಶನ ಪಡೆಯುವ ಸಂಬಂಧ ಬೆಳಗ್ಗೆಯೇ ದೇವಾಲಯಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ, ದೇವಾಲಯದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ ಅವರು ಕುಸಿದು ಬಿದ್ದಿದ್ದಾರೆ.

ಕುಸಿದುಬಿದ್ದ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರಿಗೆ ಆಗಲೇ ಪ್ರಜ್ಞೆ ಸಹ ಇರಲಿಲ್ಲ ಎನ್ನಲಾಗಿದೆ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು, ಗಿರೀಶ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಹಾಸನ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಹಾಸನಾಂಬೆ ದೇವಿ ದರ್ಶನಕ್ಕೆ ತನ್ನ ಅರ್ಧಾಂಗಿಯನ್ನು ಹೊತ್ತು ತಿರುಗಿದ ಪತಿ

Exit mobile version