ಬೆಂಗಳೂರು: ರಾಹುಲ್ ಗಾಂಧಿಯನ್ನು ಇ.ಡಿ. ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್‌ನಿಂದ ನಡೆಸಲಾದ ರಾಜಭವನ ಚಲೋ ಪ್ರತಿಭಟನೆ ವೇಳೆ ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ಎಂಬುವವರು ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ.
ಇಂಡಿಯನ್ ಎಕ್ಸ್‌ಪ್ರೆಸ್ ಬಳಿ ಗುರುವಾರ ಪ್ರತಿಭಟನೆ ನಡೆಸುತ್ತಿದ್ದಾಗ ಕುಸಿದುಬಿದ್ದಿದ್ದರಿಂದ ಅವರನ್ನು ತಕ್ಷಣ ಫೋರ್ಟೀಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ನೂಕು ನುಗ್ಗಲು ಸಂಭವಿಸಿದಾಗ ಅಸ್ವಸ್ಥರಾಗಿ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ | Congress protest | ರಾಜಭವನಕ್ಕೆ ತೆರಳುವಾಗ ಅರ್ಧದಲ್ಲೇ ಕೈ ಮುಖಂಡರನ್ನು ವಶಕ್ಕೆ ಪಡೆದ ಖಾಕಿ ಪಡೆ