Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ - Vistara News

ಕರ್ನಾಟಕ

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Heavy Rain: ಬೆಂಗಳೂರು ನಗರದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದೆ. ಶುಕ್ರವಾರ ರಾತ್ರಿಯೂ ನಗರದಲ್ಲಿ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಜತೆಗೆ ಸಂಚಾರ ವ್ಯವಸ್ಥೆಯೂ ಅಸ್ತವ್ಯಸ್ತವಾಗಿದೆ. ಆರ್‌.ಆರ್.ನಗರ, ಜ್ಞಾನ ಭಾರತಿ, ಏರ್‌ಪೋರ್ಟ್‌ ರಸ್ತೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ನೀರು ತುಂಬಿ ಹರಿಯಿತು. ಕೆಲವೆಡೆ ಮರದ ಕೊಂಬೆಗಳು ರಸ್ತೆಗೆ ಉರುಳಿ ಬಿದ್ದವು.

VISTARANEWS.COM


on

Heavy Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದೆ. ಶುಕ್ರವಾರ ರಾತ್ರಿಯೂ ನಗರದಲ್ಲಿ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಜತೆಗೆ ಸಂಚಾರ ವ್ಯವಸ್ಥೆಯೂ ಅಸ್ತವ್ಯಸ್ತವಾಗಿದೆ. ಆರ್‌.ಆರ್.ನಗರ, ಜ್ಞಾನ ಭಾರತಿ, ಏರ್‌ಪೋರ್ಟ್‌ ರಸ್ತೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ನೀರು ತುಂಬಿ ಹರಿಯಿತು. ಕೆಲವೆಡೆ ಮರದ ಕೊಂಬೆಗಳು ರಸ್ತೆಗೆ ಉರುಳಿ ಬಿದ್ದವು (Heavy Rain).

ರಸ್ತೆಯಲ್ಲಿ ಸಿಲುಕಿದ ವಾಹನಗಳು

ಬೆಂಗಳೂರಲ್ಲಿ ಶುಕ್ರವಾರ ಸುರಿದ ಧಾರಾಕಾರ ಮಳೆಯಿಂದ ಮೈಸೂರು ರಸ್ತೆಯಲ್ಲಿ ವಾಹನ ಸವಾರರು ಸಿಲುಕಿ ಹಾಕಿಕೊಂಡಿದ್ದರು. ಆರ್‌.ಆರ್. ನಗರ ಆರ್ಚ್ ಬಳಿ ರಸ್ತೆಯಲ್ಲಿ ನೀರು ಉಕ್ಕಿ ಹರಿದು 25ಕ್ಕೂ ಹೆಚ್ಚು ವಾಹನಗಳು ಸಿಲುಕಿಕೊಂಡು ಸವಾರರು ಪರದಾಡಿದರು. ರಸ್ತೆಯಲ್ಲಿ ಸುಮಾರು ಮೂರು ಅಡಿಯಷ್ಟು ನೀರು ನಿಂತುಕೊಂಡಿತ್ತು.

ಇನ್ನು ನಾಗರಭಾವಿ ಎನ್‌ಜಿಎಫ್‌ ಬಡಾವಣೆಯ 9ನೇ ಕ್ರಾಸ್‌ನಲ್ಲಿ ಬೆಸ್ಕಾಂ ಲೈಟ್ ಕಂಬ ಹಾಗೂ ಬೃಹತ್ ಮರವೊಂದು ಶೆಡ್ ಮನೆಯ ಮುಂದೆ ಬಿದ್ದಿದೆ. ಅದೃಷ್ಟವಶಾತ್‌ ಯಾರಿಗೂ ಗಾಯಗಳಾಗಿಲ್ಲ. ಚಾಮರಾಜಪೇಟೆಯಲ್ಲೂ ಮನೆಗಳಿಗೆ ನೀರು ನುಗ್ಗಿದೆ‌.‌ ಬಿನ್ನಿ ಮಿಲ್ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಿಂದ ಹರಿಯುವ ನೀರು ಗೋಡೆಯಿಂದ ಸೋರಿ ರಾಯಪುರ ಅಕ್ಕಪಕ್ಕದಲ್ಲಿರುವ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು.

ಎಲ್ಲೆಲ್ಲಿ ಎಷ್ಟೆಷ್ಟು ಮಳೆ?

ಕೆಂಗೇರಿ – 89 ಮಿ.ಮೀ.
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ – 62ಮಿ.ಮೀ.
ನಾಯಂಡನಹಳ್ಳಿ – 61.5 ಮಿ.ಮೀ.
ಹೆಮ್ಮಿಗೆಪುರ – 61 ಮಿ.ಮೀ.
ಆರ್ ಆರ್ ನಗರ – 60 ಮಿ.ಮೀ.
ಮಾರುತಿ ಮಂದಿರ – 51.50 ಮಿ.ಮೀ.
ವಿದ್ಯಾಪೀಠ – 50 ಮಿ.ಮೀ.
ಉತ್ತರಹಳ್ಳಿ – 42 ಮಿ.ಮೀ.
ಹಂಪಿನಗರ – 39 ಮಿ.ಮೀ.
ಯಲಹಂಕ – 38.50 ಮಿ.ಮೀ.
ಜಕ್ಕೂರು – 38 ಮಿ.ಮೀ.
ಕೊಟ್ಟಿಗೆಪಾಳ್ಯ – 33 ಮಿ.ಮೀ.
ಕೊಡಿಗೆಹಳ್ಳಿ – 28.50 ಮಿ.ಮೀ.
ನಂದಿನಿ ಲೇಔಟ್ – 28 ಮಿ.ಮೀ.

ಇನ್ನೂ ಮೂರ್ನಾಲ್ಕು ದಿನಗಳ ಕಾಲ ರಾಜಧಾನಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರದಲ್ಲೂ ಮಳೆಯು ಅಬ್ಬರಿಸಲಿದೆ. ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾದರೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾದರೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಇದನ್ನೂ ಓದಿ: Terminal 2: ಭಾರಿ ಮಳೆಗೆ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಸೋರಿಕೆ; ವಿಮಾನ ಹಾರಾಟ ಅಸ್ತವ್ಯಸ್ತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಕಂಜನ್ ದಾಳಿಗೆ ತುತ್ತಾಗಿದ್ದ ಮಾರ್ತಾಂಡ ದುರ್ಮರಣ

VISTARANEWS.COM


on

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ನಿನ್ನೆ ಕಂಜನ್ ಮತ್ತು ಮಾರ್ತಾಂಡ ನಡುವೆ ನಡೆದ ಕಾದಾಟ ನಡೆದಿತ್ತು. ಈ ವೇಳೆ ಆನೆಯ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆ ದುರ್ಮರಣ ಹೊಂದಿದ್ದರು.

ಘಟನೆಯ ಬೆನ್ನಲ್ಲೇ ದುಬಾರೆ ಆನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇದೇ ವೇಳೆ ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಿಗೆ ಹೊಸ SOP ಜಾರಿಗೊಳಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ನೀಡಿದ್ದಾರೆ. ಹೊಸ ಮಾರ್ಗಸೂಚಿಗಳ ಪ್ರಕಾರ ಆನೆಗಳಿಂದ ಕನಿಷ್ಠ 100 ಅಡಿ ದೂರ ಕಾಪಾಡಿಕೊಳ್ಳಬೇಕು, ಆನೆಗಳ ಬಳಿ ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಪ್ರವಾಸಿಗರು ಸಾಕಾನೆಗಳಿಗೆ ಯಾವುದೇ ಆಹಾರ ನೀಡಬಾರದು ಎಂದು ಸೂಚಿಸಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌