ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಮಳೆ ಮುಂದುವರಿದಿದ್ದು, ಮತ್ತೆ ಗುಡ್ಡ ಕುಸಿತ ಉಂಟಾಗಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ. ಸೋಮವಾರ ಸುರಿದಿದ್ದ ಧಾರಾಕಾರ ಮಳೆಯಿಂದಾಗಿ (Heavy Rain) ಗ್ರಾಮದಲ್ಲಿ ಧರೆ ಕುಸಿದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದರು.
ಇದೇ ಭಾಗದಲ್ಲಿ ಮತ್ತೆ ಧರೆ ಕುಸಿದಿದ್ದು ಸುತ್ತಲಿನ ಜನರನ್ನು ಬೇರೆಡೆಗೆ ಅಧಿಕಾರಿಗಳು ಸ್ಥಳಾಂತರ ಮಾಡಿದ್ದಾರೆ. ಗುಡ್ಡ ಕುಸಿತ ಮುಂದುವರಿದ ಬೆನ್ನಲ್ಲೇ ಗ್ರಾಮದ ಹಲವರು ತಮ್ಮ ಮನೆಗಳನ್ನು ತೊರೆದು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತವು ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಗುಡ್ಡ ಕುಸಿತದಿಂದಾಗಿ ಮೇಲ್ಭಾಗದಲ್ಲಿದ್ದ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಈ ಭಾಗದ ಸಂಚಾರವನ್ನು ಪರ್ಯಾಯ ಮಾರ್ಗಕ್ಕೆ ಬದಲಿಸಲಾಗಿದೆ. ಈ ಮಾರ್ಗದ ಮೂಲಕ ಸಬ್ಬತ್ತೆ, ಗೆಂಡೆಮೂಲೆ ಗ್ರಾಮಕ್ಕೆ ತೆರಳುತ್ತಿದ್ದವರಿಗೆ ರೈಲ್ವೇ ಬ್ರಿಡ್ಜ್ ಪಕ್ಕದ ರಸ್ತೆಯಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ | Heavy Rain | ಮಣ್ಣು ತೆರವು ವೇಳೆ ಏಕಾಏಕಿ ಕಂದಕಕ್ಕೆ ಜಾರಿದ ಜೆಸಿಬಿ; ಚಾಲಕ, ಗ್ರಾಪಂ ಸದಸ್ಯೆ ಪಾರು