Site icon Vistara News

Weather Report: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೆರೆಡು ದಿನ ಭಾರಿ ವರುಣ; ಬೆಂಗಳೂರಲ್ಲಿ ಮಳೆ ಹೇಗೆ?

Karnataka rain

ಬೆಂಗಳೂರು: ರಾಜ್ಯದ ಹಲವು ಕಡೆ ಮಳೆ ಆರ್ಭಟ ಮುಂದುವರಿಯಲಿದ್ದು, ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಭಾರಿ ಮಳೆಯಾದರೆ, ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಹವಾಮಾನ ಇನ್ನೂ ಎರಡು ದಿನ ಇರಲಿದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ. ಅಲ್ಲದೆ, ಹಲವು ಕಡೆ ಉಷ್ಣಾಂಶದಲ್ಲಿಯೂ ಏರಿಕೆಯಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶನಿವಾರವೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Eco-Friendly Period Products : ಬಳಸಿ ಎಸೆಯುವ ಪ್ಯಾಡ್‌ಗೆ ಟಾಟಾ ಹೇಳಿ: ಪರಿಸರಸ್ನೇಹಿ ಋತುಚಕ್ರದ ಮಾರ್ಗಗಳಿವು!

ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲಿನ ಆರ್ಭಟ ಇರಲಿದ್ದು, ಹೊರಗೆ ಹೋಗುವಾಗ ಎಚ್ಚರಿಕೆಯನ್ನು ವಹಿಸಲು ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಉಷ್ಣಾಂಶದಲ್ಲೂ ಹೆಚ್ಚಳ

ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾದರೂ, ಮತ್ತು ಕೆಲವು ಕಡೆಗಳಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಬಿರುಗಾಳಿ ಉಂಟಾಗಲಿದೆ. ಗಂಟೆಗೆ 40-45 ಇದ್ದ ಗಾಳಿಯ ವೇಗವು 55 ಕಿ.ಮೀ. ವೇಗದಲ್ಲಿ ಬೀಸುವ ವಾತಾವರಣ ಇದೆ ಎಂದು ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Love Case: ಹಾನಗಲ್‌ ಪೊಲೀಸರ ಟಾರ್ಚರ್‌ಗೆ ಯುವಕ ಬಲಿ?; ಅಣ್ಣನ ಪ್ರೀತಿ ಇವನ ಜೀವಕ್ಕೆ ಮುಳುವಾಯಿತೇ?

ಬೆಂಗಳೂರಲ್ಲಿ ಸಂಜೆಗೆ ಸಾಧಾರಣ ಮಳೆ

ಜೂನ್‌ 4ರ ಭಾನುವಾರ ಸಂಜೆ ಅಥವಾ ರಾತ್ರಿ ವೇಳೆಗೆ ಬೆಂಗಳೂರು ಹಾಗೂ ಸುತ್ತಮುತ್ತ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ವೇಳೆ ಗುಡುಗು, ಸಿಡಿಲಿನ ಸಾಧ್ಯತೆ ದಟ್ಟವಾಗಿದ್ದು, ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಇನ್ನು ಗರಿಷ್ಠ ಉಷ್ಣಾಂಶವು 32 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version