ಮಡಿಕೇರಿ: ಇಲ್ಲಿನ ಬೆಟ್ಟತ್ತೂರು ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೆಟ್ಟದ ಮಣ್ಣನ್ನು ತೆರವುಗೊಳಿಸುವ ವೇಳೆ ಏಕಾಏಕಿ ಮಣ್ಣು ಕುಸಿದು ಜೆಸಿಬಿ ಕಂದಕಕ್ಕೆ ಜಾರಿದೆ. ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದ್ದು (Heavy Rain) ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ನಡುವೆ ಹಲವು ಭಾಗಗಳಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ.
ಗುಡ್ಡ ಕುಸಿದ ರಸ್ತೆಗಳನ್ನು ಜೆಸಿಬಿ ಹಿಟಾಚಿ ಮೂಲಕ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದ ವೇಳೆ ಏಕಾಏಕಿ ಬೆಟ್ಟದ ಮಣ್ಣು ಕುಸಿದು ಜೆಸಿಬಿ ಸಮೇತ ಜಾರಿ ಬಿದ್ದಿದೆ. ಅದೃಷ್ಟವಶಾತ್ ಜೆಸಿಬಿಯಲ್ಲಿದ್ದ ಚಾಲಕ ರವಿ ಹಾಗೂ ಗ್ರಾ.ಪಂ ಸದಸ್ಯೆ ಜಾಜಿ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಸ್ಥಳಕ್ಕೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬಲೆಕಂಡಿ ಎಂಬಲ್ಲಿ ಸುಮಾರು ಮೂವತ್ತು ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಗುಡ್ಡ ಕುಸಿತದಿಂದ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ | Rain News | ಆಗುಂಬೆ ಘಾಟಿಯಲ್ಲಿ ಭಾರಿ ಮಳೆಗೆ ವಾಹನದ ಮೇಲೆ ಬಿದ್ದ ಮರ