Site icon Vistara News

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ವರುಣಾರ್ಭಟ, ಜುಲೈ 15ರವರೆಗೆ ಭಾರಿ ಮಳೆ ಸಾಧ್ಯತೆ

rain update

ನವ ದೆಹಲಿ: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಉತ್ತರ ಭಾರತದ ಭಾಗದಲ್ಲಂತೂ ಮಳೆ ತಂದಿರುವ ಅವಾಂತರಗಳು ಅಷ್ಟಿಷ್ಟಲ್ಲ. ಪ್ರವಾಹ, ಭೂಕುಸಿತದಿಂದ ಜನರು ಹೈರಾಣಾಗಿ ಹೋಗಿದ್ದಾರೆ. ಇತ್ತ ದಕ್ಷಿಣ ಭಾರತದಲ್ಲೂ ಮಳೆಯ ರೌದ್ರ ನರ್ತನ ಮುಂದುವರಿದಿದೆ. ಇನ್ನು ಐದು ದಿನಗಳ ಕಾಲ ಮಳೆ ಹೀಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದೆಹಲಿ, ಮುಂಬೈ, ರಾಜಸ್ಥಾನ, ತೆಲಂಗಾಣ, ಹರಿಯಾಣ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಕೇರಳ ಸೇರಿದಂತೆ ಈ ಎಲ್ಲ ರಾಜ್ಯಗಳಲ್ಲಿ ಇನ್ನು ಐದು ದಿನಗಳ ಕಾಲ ಮಳೆ ಅಬ್ಬರಿಸಲಿದೆ. ಈಗಾಗಲೇ ಕೇರಳದ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನು ಓದಿ| ದೇಶಾದ್ಯಂತ ಮಳೆಯ ಆರ್ಭಟ: ಗುಜರಾತ್‌ ತತ್ತರ, ಮಹಾರಾಷ್ಟ್ರದಲ್ಲಿ 9ಮಂದಿ ಸಾವು

ಮಹಾಮಳೆಗೆ ತತ್ತರಿಸಿದ ಮುಂಬೈ ನಗರಿ

ಮಹಾರಾಷ್ಟ್ರದಲ್ಲಿ ಭೀಕರ ಮಳೆಯಾಗುತ್ತಿದ್ದು, ಅದರಲ್ಲೂ ವಾಣಿಜ್ಯ ನಗರಿ ಮುಂಬೈನಲ್ಲಿ ಮಳೆಯಿಂದಾಗಿ ಸಾಕಷ್ಟು ಸಮಸ್ಯೆಗಳು ಉದ್ಭವವಾಗಿವೆ. ಮುಂಬೈನಲ್ಲಿ ಕಳೆದ ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವು ರಸ್ತೆಗಳು ಜಲಾವೃತವಾಗಿದ್ದು, ಈವರೆಗೂ 800 ಮನೆಗಳು ಮಳೆಯಿಂದ ಹಾನಿಗೊಳಗಾಗಿದೆ. ಸುಮಾರು 4,916 ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಲಾಗಿದೆ. ನಗರದಲ್ಲಿ 35 ನಿರಾಶ್ರಿತ ಕೇಂದ್ರಗಳನ್ನು ತೆರೆಯಲಾಗಿದ್ದು, ಹಲವರು ನಿರಾಶ್ರಿತ ಕೇಂದ್ರಗಳಲ್ಲೇ ಆಶ್ರಯ ಪಡೆಯುತ್ತಿದ್ದಾರೆ. ಮುಂಬೈನ ಮಹಾಮಳೆಗೆ ಈವರೆಗೂ 70 ಮಂದಿ ಸೇರಿದಂತೆ 125ಕ್ಕೂ ಹೆಚ್ಚು ಪ್ರಾಣಿಗಳು ಮೃತಪಟ್ಟಿದ್ದು, ನಗರಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.  

ಜುಲೈ 14ರವರೆಗೆ ಕರ್ನಾಟಕದಲ್ಲಿ ಭಾರಿ ಮಳೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿಯೇ ಇದೆ. ಬೆಂಗಳೂರು, ಕೊಡಗು, ವಿಜಯಪುರ, ಕೊಪ್ಪಳ, ಹಾಸನ, ಉಡುಪಿ, ಹಾವೇರಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಜುಲೈ 14 ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರಿಯಲಿದ್ದು, ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಳೆ ಕುರಿತ ಇಂದಿನ ಅಪ್ಡೇಟ್‌ಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

. Rain News | ಮುಂದುವರಿದ ಮಳೆಯ ಪಿರಿಪಿರಿ, ರೈತರಿಗೆ ಮುಳುವಾದ ಎತ್ತಿನಹೊಳೆ ಕಾಮಗಾರಿ
2
. Rain News | ಜೋಯಿಡಾದ ಅಣಶಿ ಘಟ್ಟದಲ್ಲಿ ಮತ್ತೆ ಭೂಕುಸಿತ, ಪರ್ಯಾಯ ಮಾರ್ಗ ಬಳಸಲು ಸೂಚನೆ
3. Rain News | ಹಾಸನದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮತ್ತೆ ಭೂಕುಸಿತ; ವಾಹನ ಸಂಚಾರಕ್ಕೆ ಅಡಚಣೆ

4. Rain News | ಕಿತ್ತೂರು ತಾಲೂಕಿನಲ್ಲಿ ಮಳೆ ಹಾನಿಗೊಳಪಟ್ಟ ಮನೆಗಳ ಸಂಖ್ಯೆ 30ಕ್ಕೇರಿಕೆ

Exit mobile version