Site icon Vistara News

Weather Report: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಜು.1ರಂದು ಭಾರಿ ಮಳೆ ಸಾಧ್ಯತೆ

bangalore rain

ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರು ಸೇರಿ, ಹಲವು ಜಿಲ್ಲೆಗಳಲ್ಲಿ ಜುಲೈ 1 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿ, ಮಲೆನಾಡು ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕೂಡ ರಾಜ್ಯದ ವಿವಿಧೆಡೆ ಮಳೆಯಾಗಿದೆ.

ಇದನ್ನು ಓದಿ| Weather Report | ರಾಜ್ಯಾದ್ಯಂತ ಗುರುವಾರ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೆಳಗಾವಿ, ಹಾವೇರಿ, ಧಾರವಾಡ, ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲೂ ಕೂಡ ವರುಣ ಅಬ್ಬರಿಸಲಿದ್ದಾನೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಇನ್ನು ಮಂಗಳೂರಿನ ಹೊರವಲಯದಲ್ಲಿರುವ ಕೊಟ್ಟಾರೆ, ಪಡೀಲ್​ ನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರವನ್ನು ಸೃಷ್ಟಿ ಮಾಡಿದೆ. ಶಾಲೆಗಳಲ್ಲಿ, ವಸತಿ ಪ್ರದೇಶಗಳಲ್ಲಿ ಮಳೆ ನೀರು ತುಂಬಿಕೊಂಡಿದ್ದು, ಜನರು ಬುಧವಾರ ರಾತ್ರಿಯಿಂದಲೂ ಮಳೆಯಿಂದಾಗಿ ಪರದಾಟ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು ಗರಿಷ್ಠ ಮತ್ತು ಕನಿಷ್ಟಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ಇಡೀ ದಿನ ವಾತಾವರಣ ತಂಪಿನಿಂದ ಕೂಡಿರಲಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

ಕರ್ನಾಟಕದ ಮಾತ್ರವಲ್ಲದೆ ಬೇರೆ ರಾಜ್ಯಗಳಲ್ಲೂ ವರುಣ ಅಬ್ಬರಿಸುತ್ತಿದ್ದು, ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕೊಂಕಣ, ಗೋವಾ, ಕೇರಳ, ಮಾಹೆ, ಲಕ್ಷದ್ವೀಪ, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉಳಿದಂತೆ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರದಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನು ಓದಿ| Weather Report: ಭಾರಿ ಮಳೆ ಅಲರ್ಟ್‌, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

Exit mobile version