ಮಡಿಕೇರಿ: ಕೊಡುಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗಿದೆ. ಭಾಗಮಂಡಲ ಹಾಗೂ ನಾಪೋಕ್ಲು ಪ್ರದೇಶದಲ್ಲಿ ರಸ್ತೆಗಳು ಜಲಾವೃತವಾಗಿವೆ.
ಮಳೆ ಇನ್ನೂ ಹೆಚ್ಚಿದರೆ, ಭಾಗಮಂಡಲ- ಮಡಿಕೇರಿ ರಸ್ತೆ ಹಾಗೂ ಭಾಗಮಂಡಲ- ನಾಪೋಕ್ಲು ರಸ್ತೆ ಕಡಿತಗೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: Weather Report: ರಾಜ್ಯದಲ್ಲಿ ಜುಲೈ 7ರವರೆಗೆ ಭಾರಿ ಮಳೆ ಮುನ್ಸೂಚನೆ
ಕೊಡಗು ಮತ್ತು ದಕ್ಷಿಣ ಕನ್ನಡದ ಹಲವು ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವೂ ಕೆಲ ದಿನಗಳಿಂದ ಆಗಿದ್ದು, ಜನತೆಯಲ್ಲಿ ಆತಂಕ ಸೃಷ್ಟಿಸಿದೆ.