ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವೆಡೆ ಮಂಗಳವಾರ ಭಾರಿ ಮಳೆಯಾಗಿದೆ. ಮಡಿಕೇರಿ, ಸೋಮವಾರಪೇಟೆ, ಗೋಣಿಕೊಪ್ಪ, ಭಾಗಮಂಡಲ, ಕುಶಾಲನಗರದಲ್ಲಿ ಗುಡುಗು ಸಹಿತ ಮಳೆಯಾಗಿದ್ದು (Heavy Rain in kodagu), ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದಲ್ಲಿ ಸಿಡಿಲ ಹೊಡೆತಕ್ಕೆ ತೆಂಗಿನ ಮರ ಹೊತ್ತಿ ಉರಿದಿರುವುದು ಕಂಡುಬಂದಿದೆ.
ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಮಸೀದಿ ಸಮೀಪ ಸಂಜೆ 7 ಗಂಟೆಗೆ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಇದರಿಂದ ಸುಮಾರು 15 ನಿಮಿಷ ತೆಂಗಿನ ಮರ ಹೊತ್ತಿ ಉರಿದಿದೆ.
ಮಡಿಕೇರಿಯಲ್ಲಿ ಸತತ ಒಂದು ಗಂಟೆ ಮಳೆ ಸುರಿದಿದೆ. ಅಕಾಲಿಕ ಮಳೆಯಿಂದ ವಾಹನ ಸವಾರರು, ಪಾದಚಾರಿ ಪರದಾಡುವಂತಾಯಿತು. ಇನ್ನೂ ಎರಡು ದಿನ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.