Site icon Vistara News

Weather Report: ಮುಂದಿನ 5 ದಿನ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ

Karnataka Rain

ನವ ದೆಹಲಿ : ಮುಂದಿನ ಐದು ದಿನಗಳ ಕಾಲ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಗಾರು ಆರಂಭವಾದ ಹಿನ್ನೆಲೆಯಲ್ಲಿ ಈಗಾಗಲೇ ದಕ್ಷಿಣ ಹಾಗೂ ಉತ್ತರದ ರಾಜ್ಯಗಳಲ್ಲಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಕರ್ನಾಟಕದಲ್ಲಿ ಕೊಂಚ ಬ್ರೇಕ್​ ಕೊಟ್ಟಿದ್ದ ಮಳೆ ಈಗ ಮತ್ತೆ ಅಬ್ಬರಿಸಲು ಮುಂದಾಗಿದ್ದು, ಮುಂದಿನ ಐದು ದಿನ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಇದನ್ನು ಓದಿ | Weather Report | ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉತ್ತರಾಖಂಡ, ಅಸ್ಸಾಂ, ಸಿಕ್ಕಿಂ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಬಿಹಾರ, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಜುಲೈ 1ರವರೆಗೆ ಭಾರಿ ಮಳೆಯಾಗಲಿದೆ. ಗೋವಾ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲೂ ಮುಂದಿನ ಐದು ದಿನಗಳ ಕಾಲ ಭಾರಿ ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರದ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಅಸ್ಸಾಂ ಅಕ್ಷರಶಃ ಪ್ರವಾಹದಲ್ಲಿ ಮುಳುಗಿ ಹೋಗಿದೆ. ಸದ್ಯಕ್ಕೆ ಮಳೆ ನಿಂತರೂ ಪ್ರವಾಹದಿಂದ ಉಂಟಾದ ಅನಾಹುತಗಳು ಮಾತ್ರ ತಪ್ಪಿಲ್ಲ. ಇದರ ನಡುವೆಯೇ ಮತ್ತೆ ಅಸ್ಸಾಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಜನರು ಜೀವ ಉಳಿಸಿಕೊಳ್ಳಲು ಪರದಾಟ ನಡೆಸುತ್ತಿದ್ದಾರೆ. ನಿನ್ನೆ (ಸೋಮವಾರ) 8 ಮಂದಿ ಭೀಕರ ಪ್ರವಾಹಕ್ಕೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 135ಕ್ಕೆ ಏರಿಕೆಯಾಗಿದೆ.

ಇದನ್ನು ಓದಿ| Assam rain: ರಣಭೀಕರ ಮಳೆಗೆ ಅಸ್ಸಾಂ ಅತಂತ್ರ, ಸಾವಿನ ಸಂಖ್ಯೆ 100ಕ್ಕೇರಿಕೆ, ಲಕ್ಷಾಂತರ ಜನರು ಬೀದಿಪಾಲು

Exit mobile version