Site icon Vistara News

Rain News : ಬೆಂಗಳೂರಿನಲ್ಲಿ ಅರ್ಧ ಗಂಟೆಗೂ ಹೆಚ್ಚು ಸುರಿದ ಭಾರಿ ಮಳೆ; ಟ್ರಾಫಿಕ್‌ ಜಾಮ್!

Rain in Bangalore

ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮತ್ತೆ ಶುರುವಾಗಿದೆ. ಕರಾವಳಿ, ಮಲೆನಾಡು ಭಾಗಗಳ (Coastal and Malnad region) ಅಲ್ಲಲ್ಲಿ ಸೋಮವಾರ (ಸೆಪ್ಟೆಂಬರ್‌ 18) ಭಾರಿ ಮಳೆಯಾಗಿದೆ. ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ (Bangalore Rain) ಭರ್ಜರಿ ವರ್ಷಧಾರೆಯಾಗಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬಿಟ್ಟೂ ಬಿಡದೆ ಮಳೆ (Rain News) ಸುರಿದಿದೆ.

ಬೆಂಗಳೂರಿನಲ್ಲಿ ಭಾನುವಾರ ಸಂಜೆ ಮತ್ತು ರಾತ್ರಿ ಹಲವು ಕಡೆ ಮಳೆ ಬಂದಿತ್ತು. ಸೋಮವಾರವೂ ತನ್ನ ಆರ್ಭಟವನ್ನು ಮುಂದುವರಿಸಿರುವ ವರುಣರಾಯನಿಂದ ಪಾದಚಾರಿಗಳು, ಸಂಚಾರಿಗಳು ಕಂಗೆಟ್ಟಿದ್ದಾರೆ.

ಇದನ್ನೂ ಓದಿ: Cauvery water dispute : ತಮಿಳುನಾಡಿಗೆ ಕೂಡಲೇ ನೀರು ನಿಲ್ಲಿಸಿ: ಬಸವರಾಜ ಬೊಮ್ಮಾಯಿ ಗುಡುಗು

Rain in Bangalore Rain News

ನಗರದ ಶಿವಾಜಿನಗರ, ವಸಂತ ನಗರ, ಕೊಲ್ಸ್ ಪಾರ್ಕ್, ಸ್ಯಾಂಕಿ ಟ್ಯಾಂಕ್, ಮೆಜೆಸ್ಟಿಕ್, ಮಾರ್ಕೆಟ್ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ. ವಾಹನ ಚಲಾಯಿಸಲು ಕಾಣದಷ್ಟರ ಮಟ್ಟಿಗೆ ಮಳೆ ಸುರಿದಿದೆ. ಆಗಾಗ ಗುಡುಗು ಸಹ ಬಂದಿದ್ದು, ಜನರು ಸುರಕ್ಷಿತ ಪ್ರದೇಶವನ್ನು ನೋಡಿ ಆಶ್ರಯ ಪಡೆದುಕೊಂಡಿದ್ದಾರೆ.

ಟ್ರಾಫಿಕ್‌ ಜಾಮ್!‌

ಇನ್ನು ಸ್ವಲ್ಪ ಮಳೆಯಾದರೇ ಟ್ರಾಫಿಕ್‌ ಕಿರಿಕಿರಿ ಉಂಟಾಗುವ ಬೆಂಗಳೂರಿನಲ್ಲಿ ಈ ಮಳೆಯು ವಾಹನ ಸವಾರರಿಗೆ ಭಾರಿ ಸಂಕಷ್ಟವನ್ನು ತಂದೊಡ್ಡಿದೆ. ಮಳೆಯಿಂದಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳ ಸಂಚಾರಕ್ಕೆ ಕಷ್ಟವಾಗಿದೆ.

Rain in Bangalore Rain News

ಅಲ್ಲಲ್ಲಿ ಚರಂಡಿಗಳು ತುಂಬಿ ರಸ್ತೆಗಳ ಮೇಲೆ ನೀರು ನುಗ್ಗಿವೆ. ಇನ್ನು ಕೆಲವು ಅಂಡರ್‌ ಪಾಸ್‌ ಬಳಿ ನೀರು ನಿಂತುಕೊಂಡಿವೆ. ಇದರಿಂದ ಸಹ ವಾಹನ ಸವಾರರಿಗೆ ತೊಂದರೆಯಾಗಿದೆ. ಪಾದಚಾರಿಗಳು ಹಾಗೂ ವಾಹನ ಸವಾರರಿಗೆ ಓಡಾಟಕ್ಕೆ ಸಮಸ್ಯೆಯಾಗಿದೆ.

ಬುಧವಾರದವರೆಗೆ ರಾಜ್ಯದ ಹಲವು ಕಡೆ ಸಾಧಾರಣ ಮಳೆ

ಮುಂದಿನ ಎರಡು ದಿನಗಳ ಕಾಳ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather Report) ಉಲ್ಲೇಖಿಸಿದೆ.

ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರಿ ಮಳೆ

ಇನ್ನು ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಬೆಂಗಳೂರು ನಗರದಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಅಲ್ಲದೆ, ಮಧ್ಯೆ ಮಧ್ಯೆ ಬಿಸಿಲೂ ಸಹ ಬರಲಿದೆ. ಆದರೆ, ಸಂಜೆ ಇಲ್ಲವೇ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Cauvery water dispute : ಮತ್ತೆ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್‌ ನೀರು ಬಿಡಲು CWMA ಆದೇಶ!

ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

Exit mobile version