Site icon Vistara News

Bengaluru Rain: ಬೆಂಗಳೂರಿನ ವಿವಿಧೆಡೆ ಭಾರಿ ಮಳೆ; ಸಂಚಾರ ದಟ್ಟಣೆಯಿಂದ ವಾಹನ ಸವಾರರ ಪರದಾಟ

Weather Alert

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದೆ. ಬಸವನಗುಡಿ , ಉತ್ತರಹಳ್ಳಿ, ಲಾಲ್ ಬಾಗ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು (Bengaluru Rain), ತಗ್ಗು ಪ್ರದೇಶದ ರಸ್ತೆಗಳು ಜಲಾವೃತವಾಗಿದ್ದವು. ಇದರಿಂದ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು.

ಅಕಾಲಿಕ ಮಳೆಗೆ ಕೆಳಸೇತುವೆಗಳು ಸೇರಿ ವಿವಿಧ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿತು. ಬೈಕ್‌ ಸವಾರರು ಕೆಲಕಾಲ ರಸ್ತೆಪಕ್ಕದ ಮೇಲ್ಸೇತುವೆ, ಮರಗಳು, ಬಸ್ ತಂಗುದಾಣಗಳ ಕೆಳಗೆ ಆಶ್ರಯ ಪಡೆದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರದಲ್ಲಿ ಮುಂದಿನ 3 ಗಂಟೆಗಳ‌ ಕಾಲ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Weather Report: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಮಂಗಳೂರು, ಚಿತ್ರದುರ್ಗದಲ್ಲಿ ಏರಲಿದೆ ಬಿಸಿಲ ತಾಪಮಾನ

ಏ.5ರವರೆಗೆ ನಾಲ್ಕು ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು ಸೇರಿ ನಾಲ್ಕು ಜಿಲ್ಲೆಗಳಲ್ಲಿ ಏಪ್ರಿಲ್‌ 5ರವರೆಗೆ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆಯಿಂದ ಕೂಡಿರಲಿದೆ.

Exit mobile version