ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಜಿಟಿ ಜಿಟಿ ಮಳೆಯಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.
ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಮುಂದಿನ 24 ಗಂಟೆಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಮುಂದಿನ 48 ಗಂಟೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ | Rain news | ಆಕಳನ್ನು ರಕ್ಷಿಸಲು ನೀರಿಗೆ ಜಿಗಿದ ವ್ಯಕ್ತಿ; ಆಕಳು ನೀರುಪಾಲು, ವ್ಯಕ್ತಿ ಪಾರು
ಮುಂದಿನ 24 ಗಂಟೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ. ಮುಂದಿನ 48 ಗಂಟೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚಿನ ಸಾಧ್ಯತೆ ಇದೆ. ಹಾಗೆಯೇ ಮುಂದಿನ 24 ಗಂಟೆ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಅಕ್ಟೋಬರ್ 19ರವರೆಗೆ ಬೆಂಗಳೂರಿನಲ್ಲಿ ಮಳೆ
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.
ಇದನ್ನೂ ಓದಿ | Deepavali Special Bus | ಬೆಳಕಿನ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ವಿಶೇಷ ಬಸ್