ಮೈಸೂರು: ಅನಾರೋಗ್ಯದಿಂದ ಅಹ್ಮದಾಬಾದ್ನ ಆಸ್ಪತ್ರೆಗೆ ದಾಖಲಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (Heeraben Modi) ಆರೋಗ್ಯ ಚೇತರಿಕೆ ಕಾಣಲಿ ಎಂದು ಮೈಸೂರಿನಲ್ಲಿ ಕುಟುಂಬಸ್ಥರು ಚಾಮುಂಡೇಶ್ವರಿ ದೇವಿ ಮೊರೆ ಹೋದರು.
ಮೋದಿ ಸಹೋದರ ಪ್ರಹ್ಲಾದ್ ಮೋದಿ ಅವರ ಪುತ್ರಿ, ಅಳಿಯ ಸೇರಿ ಕುಟುಂಬ ಸದಸ್ಯರು ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಜ್ಜಿ ಗುಣಮುಖ ಆಗಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
ತಾಯಿ ಆರೋಗ್ಯ ಸ್ಥಿರವಾಗಿದೆ
ನಮ್ಮ ತಾಯಿಯ ಆರೋಗ್ಯ ಸ್ಥಿರವಾಗಿದೆ. ಅವರು ಒಂದೆರಡು ದಿನದಲ್ಲಿ ಸಂಪೂರ್ಣವಾಗಿ ಸುಧಾರಿಸಿಕೊಳ್ಳುತ್ತಾರೆ. ಈಗ ಅಹಮದಬಾದ್‌ಗೆ ಹೊರಟಿದ್ದೇನೆ. ಅಲ್ಲಿಗೆ ಹೋಗಿ ತಾಯಿಯ ಆರೋಗ್ಯ ವಿಚಾರಿಸುತ್ತೇನೆ. ಪ್ರಧಾನ ಮಂತ್ರಿಗಳು ಈಗಾಗಲೇ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ನಾವೆಲ್ಲ ಗಾಯಗೊಂಡಿದ್ದೆವು. ಈಗ ನಮ್ಮ ಕುಟುಂಬದವರೆಲ್ಲ ಆರೋಗ್ಯವಾಗಿದ್ದೇವೆ. ನಮ್ಮನ್ನು ಮೈಸೂರು ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಉತ್ತಮವಾಗಿ ನೋಡಿಕೊಳ್ಳಲಾಗಿದೆ. ಈಗ ಡಿಸ್ಚಾರ್ಚ್ ಆಗಿದ್ದೇವೆ. ನಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪ್ರಧಾನಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಮಾಧ್ಯಮದವರಿಗೆ ಹೇಳಿಕೆ ನೀಡಿದರು. ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಅಹಮದಾಬಾದ್‌ಗೆ ಕುಟುಂಬದವರು ತೆರಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಮೇಯರ್ ಶಿವಕುಮಾರ್, ಮೈಸೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಜೆಎಸ್ಎಸ್ ಆಸ್ಪತ್ರೆಗೆ ಭೇಟಿ ನೀಡಿ ಪ್ಲಹ್ಲಾದ್ ಮೋದಿ ಕುಟುಂಬದ ಆರೋಗ್ಯ ವಿಚಾರಿಸಿ ಬೀಳ್ಕೊಟ್ಟರು.
ಇದನ್ನೂ ಓದಿ | Heeraben Modi | ಅನಾರೋಗ್ಯಕ್ಕೀಡಾದ ತಾಯಿಯನ್ನು ನೋಡಲು ಆಸ್ಪತ್ರೆಗೆ ಆಗಮಿಸಿದ ಪ್ರಧಾನಿ ಮೋದಿ; ರಾಹುಲ್ ಗಾಂಧಿ ಭಾವನಾತ್ಮಕ ಟ್ವೀಟ್