Site icon Vistara News

Honey Bee attack: ಹೆಜ್ಜೇನು ದಾಳಿಯಿಂದ 50ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

hejjenu dali Tibetan Camp Mundagoda

#image_title

ಶಿರಸಿ (ಮುಂಡಗೋಡ): ಹೆಜ್ಜೇನು ದಾಳಿಗೆ (Honey Bee attack) ಐವತ್ತಕ್ಕೂ ಹೆಚ್ಚು ಶಿಬಿರಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1ರಲ್ಲಿ ನಡೆದಿದೆ.

ಟಿಬೇಟಿಯನ್ ಕ್ಯಾಂಪ್‌ನ ಶಿಬಿರಕ್ಕೆ ಬಂದ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ಪದಾಧಿಕಾರಿಗಳು ಗಾಯಗೊಂಡಿದ್ದಾರೆ. ಟಿಬೇಟಿಯನ್ ಕ್ಯಾಂಪ್‌ನಲ್ಲಿ ಎರಡು ದಿನಗಳ ಅಧ್ಯಯನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ಪ್ರತಿ ಜಿಲ್ಲೆಯಿಂದ ಸಮಿತಿಯ 10 ಪದಾಧಿಕಾರಿಗಳು ಸೇರಿದಂತೆ 300ಕ್ಕೂ ಹೆಚ್ಚು ಜನರು ಶಿಬಿರದಲ್ಲಿ ಭಾಗವಹಿಸಿದ್ದರು.

ಶುಕ್ರವಾರ (ಮಾ.3) ದಿಂದ ದಲಿತ ಸಂಘರ್ಷ ಸಮಿತಿಯ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶನಿವಾರ (ಮಾ.4) ಅಧ್ಯಯನ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿಬಿರ ಆರಂಭ ಆಗುವ ವೇಳೆ ಹೆಜ್ಜೇನುಗಳು ದಾಳಿ ನಡೆಸಿವೆ. ಐವತ್ತಕ್ಕೂ ಅಧಿಕ ಶಿಬಿರಾರ್ಥಿಗಳು ಗಾಯಗೊಂಡಿದ್ದು, ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ರವಾನಿಸಲಾಗಿದೆ. ಚಿತ್ರದುರ್ಗದ ಜಿಲ್ಲೆಯ ಶ್ರೀನಿವಾಸ ಎಚ್. ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುಲಾಗಿದೆ. ಉಳಿದವರನ್ನು ಮುಂಡಗೋಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Yuva Film: ಅಪ್ಪು ದಾರಿಯಲ್ಲೇ ನಡೆದರಾ ʻಯುವʼ ರಾಜ್‌ಕುಮಾರ್‌? ಸಿನಿಮಾ ಟೈಟಲ್‌ ಹಿಂದಿರೋ ಸತ್ಯವೇನು?

Exit mobile version