1. Retail Inflation: ಮತ್ತೆ ದುಬಾರಿ ದುನಿಯಾ… 15 ತಿಂಗಳ ಗರಿಷ್ಠ ಮಟ್ಟಕ್ಕೆ ಹಣದುಬ್ಬರ ಏರಿಕೆ!
ನವದೆಹಲಿ: ಭಾರತದ ಆರ್ಥಿಕಾಭಿವೃದ್ಧಿ (Indian Economy) ಏರುಗತಿಯಲ್ಲಿದೆ ಎಂದು ವಿಶ್ಲೇಷಣೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಈ ವಿಶ್ಲೇಷಣೆಗಳಿಗೆ ವಿರುದ್ಧವಾದ ಬೆಳವಣಿಗೆ ಘಟಿಸಿದೆ. ಭಾರತೀಯ ಚಿಲ್ಲರೆ ಹಣದುಬ್ಬರವು (Retail Inflation) ಜುಲೈನಲ್ಲಿ ಶೇ.7.44ಕ್ಕೆ ಏರಿಕೆಯಾಗಿದೆ. ಕಳೆದ 15 ತಿಂಗಳಲ್ಲೇ ಇದು ಗರಿಷ್ಠ ಮಟ್ಟದ ಏರಿಕೆಯಾಗಿದೆ. ಅರ್ಥಾತ್, ಭಾರತದಲ್ಲಿ ಮತ್ತೆ ದುಬಾರಿ ದುನಿಯಾ(Food Prices Spike) ಶುರುವಾಗಿದೆ. ಭಾರತದ ಚಿಲ್ಲರೆ ಹಣದುಬ್ಬರವು ಜೂನ್‌ನಲ್ಲಿ ಶೇ.4.81ರಿಂದ ವಾರ್ಷಿಕ ಆಧಾರದ ಮೇಲೆ ಜುಲೈನಲ್ಲಿ ಶೇ.7.44ಕ್ಕೆ ಏರಿದೆ. ಕೇಂದ್ರ ಸಾಂಖೀಕ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ವರದಿಯಲ್ಲಿ ಈ ಮಾಹಿತಿಯನ್ನು ವಿವರಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. ಎರಡು ವರ್ಷದ ಬಳಿಕ ಬದಲಾಗುತ್ತಾ ಸಿದ್ದರಾಮಯ್ಯ ನಾಯಕತ್ವ? ಹಿರಿಯ ಸಚಿವರಿಗೆ ಪದತ್ಯಾಗದ ಪಾಠ ಮಾಡಿದ ಮುನಿಯಪ್ಪ
ಬೆಂಗಳೂರು: ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರು ಕಾಂಗ್ರೆಸ್ ಪಕ್ಷದ ಸರ್ವ ಸದಸ್ಯರ ಸಭೆಯಲ್ಲಿ ಹೊಸ ಬಾಂಬ್ ಸಿಡಿಸಿದ್ದು, ಹಿರಿಯ ಸಚಿವರ ತಲ್ಲಣಕ್ಕೆ ಕಾರಣವಾಗಿದೆ. ಸಿಎಂ ಹಾಗೂ ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ಆದರೆ, ಹಿರಿಯ ಸಚಿವರು (ಇದೇ ಮೊದಲ ಬಾರಿಗೆ ಸಚಿವರಾದವರು ಬಿಟ್ಟು) ಉಳಿದವರೆಲ್ಲರೂ ಎರಡೂವರೆ ವರ್ಷಕ್ಕೆ ಅಧಿಕಾರವನ್ನು ಇತರರಿಗೆ ಬಿಟ್ಟು ಕೊಟ್ಟು ಮೇಲ್ಪಂಕ್ತಿ ಹಾಕಿ ಕೊಡಬೇಕು. ಈ ಕೆಲಸವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮಾಡಬೇಕು ಎಂದು ಕೆ.ಎಚ್. ಮುನಿಯಪ್ಪ (KH Muniyappa) ಹೇಳಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ (Karnataka Politics) ಹೊಸ ಬದಲಾವಣೆಯನ್ನು ತರಬೇಕು ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3.CM Siddaramaiah : ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು; ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ (Central and state Government) ನಡುವೆ ತಿಕ್ಕಾಟಕ್ಕೆ ಕಾರಣವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (National Education Policy) ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರದ್ದುಗೊಳಿಸಲಾಗುವುದು (NEP Cancelled from Next year) ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Independence Day 2023: ನಾಳೆ ಬೆಳಗ್ಗೆ 7 ಗಂಟೆಗೆ ಕೆಂಪು ಕೋಟೆ ಮೇಲೆ ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವದ ಭಾಷಣ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಆಗಸ್ಟ್ 15, ಮಂಗಳವಾರ ಬೆಳಗ್ಗೆ 7 ಗಂಟೆಗೆ ದಿಲ್ಲಿಯ ಕೆಂಪುಕೋಟೆಯ (Red Fort) ಮೇಲೆ 77ನೇ ಸ್ವಾತಂತ್ರ್ಯೋತ್ಸವದ ಭಾಷಣ (Independence Day Speech) ಮಾಡಲಿದ್ದಾರೆ. 2024ರ ಲೋಕಸಭೆ ಚುನಾವಣೆಯ ಸದ್ಯದಲ್ಲೇ ಇರುವುದರಿಂದ ಈ ಭಾಷಣವು ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ಹಾಗೆಯೇ ಈ ಹಿಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ (Former PM Dr Manmohan Singh) ಅವರ ಭಾಷಣವನ್ನು (10 ಬಾರಿ) ಅವರು ಸರಿ ಗಟ್ಟಲಿದ್ದಾರೆ. ನಾಳೆಯ ಭಾಷಣದ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಸಾಧನೆಗಳು, ಕಾರ್ಯಕ್ರಮಗಳು ಮತ್ತು ದೇಶದ ಪ್ರಗತಿಗೆ ತಮ್ಮ ದೂರದೃಷ್ಟಿಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲುವ ಸಾಧ್ಯತೆಗಳಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Weather report : ಆ.15ರಂದು ಬೆಂಗಳೂರು, ಮೈಸೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು: ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Weather report) ಸಾಧ್ಯತೆ ಇದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Actor Upendra : ನಟ ಉಪೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್, FIRಗೆ ಮಧ್ಯಂತರ ತಡೆ
ಬೆಂಗಳೂರು: ದಲಿತ ಸಮುದಾಯವನ್ನು (Dalit community) ಅಪಮಾನಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಚಿತ್ರ ನಟ ಉಪೇಂದ್ರ (Actor Upedndra) ಅವರಿಗೆ ರಾಜ್ಯ ಹೈಕೋರ್ಟ್ (Karnataka High court) ಬಿಗ್ ರಿಲೀಫ್ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಚಂದನ್ ಗೌಡರ್ ಅವರ ನೇತೃತ್ವದ ನ್ಯಾಯಪೀಠದಿಂದ ಮಧ್ಯಂತರ ತಡೆಯಾಜ್ಞೆ (Stay against FIR) ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Aditya L1 Mission: ಚಂದ್ರನ ಬೆನ್ನಲ್ಲೇ ಸೂರ್ಯನ ಅಂಗಳದಲ್ಲಿ ಇತಿಹಾಸ ಬರೆಯಲು ಇಸ್ರೋ ಸಜ್ಜು; ಏನಿದು ಮಿಷನ್?
8. KRS Dam: ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ; ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿಯಿತೇ ರಾಜ್ಯ ಸರ್ಕಾರ?
9. Mobile Addiction : ಪೋಷಕರೇ ಹಾಕಿಕೊಳ್ಳಿ ಈ ಆ್ಯಪ್, ಮಕ್ಕಳು ಮುಟ್ಟಿದ ತಕ್ಷಣ ಮೊಬೈಲ್ ಆಫ್!
10. ind vs wi : ವಿಂಡೀಸ್ ವಿರುದ್ಧ ಸೋಲಿನ ಬಳಿಕ ಟೀಮ್ ಇಂಡಿಯಾ ಬೆಂಡೆತ್ತಿದ ವೆಂಕಟೇಶ್ ಪ್ರಸಾದ್