ಚಿತ್ರದುರ್ಗ: ಇಬ್ಬರು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾಶರಣರನ್ನು ಬಂಧಿಸಿದ ಹಿನ್ನೆಲೆಯಲ್ಲಿ ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಬಂಧನದ ಬಳಿಕ ಪೊಲೀಸರು ಮುಂದಿನ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
ಮುರುಘಾ ಶರಣರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿರುವ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇದಾದ ಬಳಿಕ ಶ್ರೀಗಳನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಿದ್ದಾರೆ. ವೈದ್ಯಕೀಯ ವರದಿ ಬಂದ ಬಳಿಕವೇ ಅವರನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸುವ ಸಾಧ್ಯತೆ ಇದೆ.
ಶ್ರೀಗಳ ಬಂಧನದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಠ, ಜಿಲ್ಲಾಸ್ಪತ್ರೆ ಹಾಗೂ ನ್ಯಾಯಾಲಯದ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಇದಕ್ಕಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಮಠದಲ್ಲೇ ಮುರುಘಾಶರಣರ ಬಂಧನ