ಬೆಂಗಳೂರು: ಬಿಬಿಎಂಪಿ ಚುನಾವಣೆಗಾಗಿ (Election) ಬಿಡುಗಡೆ ಮಾಡಿರುವ ಮೀಸಲಾತಿ ಪಟ್ಟಿಯನ್ನು ಆಗಸ್ಟ್ 16ರವರೆಗೆ ಅಂತಿಮಗೊಳಿಸದಂತೆ ಹೈಕೋರ್ಟ್ ಏಕಸದಸ್ಯ ಪೀಠವು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ರಾಜ್ಯ ಸರ್ಕಾರ ಜು.14 ರಂದು ಹೊರಡಿಸಿದ ಗೆಜೆಟ್ ನೋಟಿಫಿಕೇಷನ್‌ನ ಮೂರನೇ ಭಾಗ ಹಾಗೂ ಅವೈಜ್ಞಾನಿಕ ವಾರ್ಡ್ ಪುನರ್ವಿಂಗಡಣೆ ರದ್ದು ಮಾಡಲು ಕೋರಿ ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಹೀಗಾಗಿ ಬುಧವಾರ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಹೇಮಾ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ಪೀಠ, ಆ.16 ರವರೆಗೆ ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸದಂತೆ ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದೆ.
ಇದನ್ನೂ ಓದಿ | ಈದ್ಗಾ ಗೋಡೆ ಕೆಡುವುದಾಗಿ ಹೇಳಿಕೆ; ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ ವಿರುದ್ಧ ಎಫ್‌ಐಆರ್
ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಚುನಾವಣಾ ಆಯೋಗವನ್ನೂ ಪ್ರತಿವಾದಿಯಾಗಿಸಲು ಸೂಚನೆ ನೀಡಿದೆ.
ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಯಾವುದೇ ಮಧ್ಯಂತರ ಆದೇಶವನ್ನು ನೀಡಿಲ್ಲ. ಇನ್ನೂ ಸರ್ಕಾರ, ಚುನಾವಣಾ ಆಯೋಗದ ವಾದವನ್ನು ಆಲಿಸಬೇಕಿದೆ. ವಾರ್ಡ್‌ವಾರು ಮತದಾರರ ಪಟ್ಟಿ ಸಿದ್ಧವಾಗಿದೆಯೇ ಎಂದು ಕೇಳಬೇಕಿದೆ. ವಾದಮಂಡನೆ ಬಳಿಕವೇ ಮಧ್ಯಂತರ ಆದೇಶದ ಬಗ್ಗೆ ಕೋರ್ಟ್ ನಿರ್ಧರಿಸಲಿದೆ. ಹೀಗಾಗಿ ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ಪೀಠ ವಿಚಾರಣೆಯನ್ನು ಆ.16ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ | ನಕಲಿ ಡೀಲ್ ರಾಜ V/S ಮಿಸ್ಟರ್ ಬ್ಲ್ಯಾಕ್‌ಮೇಲರ್: ಎಚ್‌ಡಿಕೆ, ಅಶ್ವತ್ಥನಾರಾಯಣ ಸಮರ