Site icon Vistara News

Mysore Dasara 2022 | ಮಹಿಷಾಸುರ ಪ್ರತಿಮೆ ಪೂಜೆಗೆ ಹೈಕೋರ್ಟ್ ನಕಾರ

Mysore Dasara 2023

ಬೆಂಗಳೂರು: ಮೈಸೂರು ದಸರಾ ಉತ್ಸವದಲ್ಲಿ(Mysore Dasara 2022) ಮಹಿಷಾಸುರ ಪ್ರತಿಮೆಗೆ ಅಗ್ರಪೂಜೆ ಪೂಜೆ ಸಲ್ಲಿಸಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ದಸರಾ ಹಬ್ಬದ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆಗೆ ಅಗ್ರಪೂಜೆ ಸಲ್ಲಿಸಲು ಮೈಸೂರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲು ಕೋರಿ, ಮೈಸೂರಿನ ಅಶೋಕಪುರಂನ ವಕೀಲ ಪಿ.ಚಂದ್ರಶೇಖರ್‌ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಅರ್ಜಿ ವಿಚಾರಣೆ ನಡೆಸಿರುವ ನ್ಯಾ. ಕೃಷ್ಣ ಎಸ್.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ಮಧ್ಯಂತರ ಮನವಿಯನ್ನು ತಳ್ಳಿ ಹಾಕಿದೆ.

ಈ ಸಂಬಂಧ ಹೆಚ್ಚಿನ ವಿವರಣೆಗಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ತುರ್ತು ನೋಟಿಸ್ ನೀಡಿರುವ ನ್ಯಾಯಾಧೀಶರು, ‘ಮಹಿಷ ಪ್ರತಿಮೆಗೆ ಪೂಜೆ ಮಾಡಿದ ನಂತರ ಚಾಮುಂಡಿಗೆ ಪೂಜೆ ಸಲ್ಲಿಸಿದ ಬಗ್ಗೆ ಯಾವುದಾದರೂ ವಿವರಗಳಿದ್ದರೆ ಸಲ್ಲಿಸಲು ಸೂಚಿಸಿದ್ದು, ಅಧಿಕೃತ ಮತ್ತು ಪರಿಗಣನಾರ್ಹ ವಿವರಗಳು ಲಭ್ಯವಿದ್ದರೆ ಕೋರ್ಟ್‌ಗೆ ಹಾಜರುಪಡಿಸಲು ಅರ್ಜಿದಾರರ ಪರ ವಕೀಲ ಅಬೂಬಕರ್ ಶಫಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ | Mysore Dasara 2022 | ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಡ್ರೋನ್‌ ಕ್ಯಾಮೆರಾ ಕಣ್ಗಾವಲು

Exit mobile version