ಚಿಕ್ಕಮಗಳೂರು: ಕಾಫಿನಾಡಲ್ಲಿ ಲವ್ ಜಿಹಾದ್ ಪ್ರಕರಣ ಸುದ್ದಿಯಾಗಿದೆ. ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಮದುವೆಯಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿದ್ದಾಗ ಹಿಂದೂ ಸಂಘಟನೆ ಕಾರ್ಯಕರ್ತರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದು, ನೈತಿಕ ಪೊಲೀಸ್ ಗಿರಿ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಲವ್ ಜಿಹಾದ್ ಆರೋಪದ ಹಿನ್ನೆಲೆಯಲ್ಲಿ ತಾಲೂಕಿನ ಲಕ್ಷ್ಮೀಪುರ ಮೂಲದ ಮುಸ್ಲಿಂ ಯುವಕ ಹಾಗೂ ಯುವತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ಸ್ಥಳಕ್ಕೆ ಆಗಮಿಸಿದ ಯುವತಿ ತಾಯಿ ಶೋಭಾ, ನನ್ನ ಮಗಳನ್ನು ನಾನು ನೋಡಬೇಕು. ಒಳಗೆ ಹೋಗಲು ಅನುಮತಿ ನೀಡಿ ಎಂದು ಕಣ್ಣೀರಿಡುತ್ತಾ ಗೋಗರೆದಿದ್ದು ಕಂಡುಬಂದಿತು.
ಮದುವೆಗೆ ಸಂಪೂರ್ಣ ಒಪ್ಪಿಗೆ ಇದೆ ಎಂದ ತಾಯಿ
ಪರಸ್ಪರ ಒಪ್ಪಿಗೆ ಮೇರೆಗೆ ಯುವತಿ-ಯುವಕ ಮದುವೆ ಮಾಡಿಕೊಳ್ಳಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯುವತಿ ತಾಯಿ, ನನ್ನ ಮಗಳ ಜೀವವೇ ನನಗೆ ಮುಖ್ಯ. ಅವರ ಮದುವೆಗೆ ನನ್ನ ಸಂಪೂರ್ಣ ಒಪ್ಪಿಗೆ ಇದೆ. ಮಗಳು ಮತ್ತು ಅಳಿಯನಿಗೆ ತೊಂದರೆ ಆಗಬಾರದು. ಅವರು ಮದುವೆಯಾಗಲಿ, ನನ್ನ ಸಂಪೂರ್ಣ ಒಪ್ಪಿಗೆ ಇದೆ ಎಂದು ತಿಳಿಸಿದ್ದಾರೆ. ಆದರೆ ಯುವತಿಗೆ ಮೋಸ ಮಾಡಿ ಮುಸ್ಲಿಂ ಯುವಕ ಮದುವೆಯಾಗಲು ಹೊರಟಿದ್ದ ಎಂದು ಹಿಂದೂ ಸಂಘಟನೆಗಳು ಆರೋಪ ಮಾಡಿವೆ.
ಇದನ್ನೂ ಓದಿ | ಬಿಎಸ್‌ವೈ ಕುಟುಂಬಕ್ಕೆ ಸಂಕಷ್ಟ | ಲಂಚ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ನಡೆಸಲು ಜನಪ್ರತಿನಿಧಿ ಕೋರ್ಟ್ ಆದೇಶ