Site icon Vistara News

Ganeshotsav | ಶಿವಮೊಗ್ಗದಲ್ಲಿ ಬಿಗಿ ಭದ್ರತೆ ನಡುವೆ ಅದ್ಧೂರಿ ಗಣೇಶ ರಾಜಬೀದಿ ಉತ್ಸವ

Ganeshotsav

ಶಿವಮೊಗ್ಗ: ನಗರದಲ್ಲಿ ಇತಿಹಾಸ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ(Ganeshotsav) ಸಾವಿರಾರು ಜನರ ಸಮ್ಮುಖದಲ್ಲಿ ಶುಕ್ರವಾರ ಪೊಲೀಸ್‌ ಬಿಗಿ ಬಂದೋಬಸ್ತ್‌ ನಡುವೆ ಶಾಂತಿಯುತವಾಗಿ ನಡೆಯಿತು.

ಗಣೇಶನ ರಾಜಬೀದಿ ಉತ್ಸವ ಹಿನ್ನೆಲೆಯಲ್ಲಿ ನಗರ ಸಂಪೂರ್ಣ ಕೇಸರಿಮಯವಾಗಿತ್ತು. ಕೋಟೆ ಪಾರ್ವತಿ ಭೀಮೇಶ್ವರ ದೇವಾಲಯದಿಂದ ರಾಜ ಬೀದಿ ಉತ್ಸವಕ್ಕೆ ಮಧ್ಯಾಹ್ನ ಚಾಲನೆ ನೀಡಲಾಯಿತು. ಕೇಸರಿ ಪೇಟದಲ್ಲಿ ಮಿಂಚುತ್ತಿದ್ದ ಯುವಕ ಹಾಗೂ ಯುವತಿಯರು ಡೊಳ್ಳು ಹಾಗೂ ಡಿಜೆ ಸದ್ದಿಗೆ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದರು. ಮೆರವಣಿಗೆಯಲ್ಲಿ ಹಿಂದು ಕಾರ್ಯಕರ್ತ ಹರ್ಷ, ದಕ್ಷಿಣ ಕನ್ನಡ ಪ್ರವೀಣ್ ನೆಟ್ಟಾರು, ಸಾವರ್ಕರ್‌ ಭಾವಚಿತ್ರಗಳು ಹಾಗೂ ಕೇಸರಿ ಧ್ವಜಗಳು ರಾರಾಜಿಸುತ್ತಿದ್ದವು. ಮೆರವಣಿಗೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕೆ.ಎಸ್‌.ಈಶ್ವರಪ್ಪ, ಎಂಪಿ ರೇಣುಕಾಚಾರ್ಯ ಮತ್ತಿತರ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.

ಗಣೇಶ ಮೆರವಣಿಗೆ ಸಾಗಿದ ಗಾಂಧಿ ಬಜಾರ್‌ನ ಸುನ್ನಿ ಜಾಮಿಯಾ ಮಸೀದಿ ಬಳಿ ಕ್ಷಿಪ್ರ ಕಾರ್ಯಾಚರಣೆ (ಆರ್‌ಎಎಫ್) ನಿಯೋಜನೆ ಮಾಡಿ, ಮೆರವಣಿಗೆ ಮೇಲೆ ಸಿಸಿ ಕ್ಯಾಮೆರಾಗಳ ಮೂಲಕ ನಿಗಾ ಇಡಲಾಗಿತ್ತು. ಇನ್ನುಳಿದಂತೆ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಎಸ್‌ಪಿ ಬಿ.ಎಂ.ಲಕ್ಷ್ಮಿಪ್ರಸಾದ್ ನೇತೃತ್ವದಲ್ಲಿ ಪೊಲೀಸ್‌ ಸರ್ಪಗಾವಲು ಏರ್ಪಡಿಸಲಾಗಿತ್ತು.

ಇದನ್ನೂ ಓದಿ | Banking | ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ 31.14 ಕೋಟಿ ರೂ. ಲಾಭ, ಬೆಂಗಳೂರು ವಿಭಾಗದಲ್ಲೇ ನಂ. 1 ಸ್ಥಾನದ ಗೌರವ

Exit mobile version