Site icon Vistara News

Youth attacked : ಹಿಂದು ಯುವಕನನ್ನು ಬೆನ್ನಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು

Youth attacked in Kadur

ಚಿಕ್ಕಮಗಳೂರು: ಜಿಲ್ಲೆಯ ಕಡೂರಿನಲ್ಲಿ ಹಿಂದು ಯುವಕನೊಬ್ಬನನ್ನು (youth attacked) ಮುಸ್ಲಿಂ ಯುವಕರ ತಂಡವೊಂದು (Muslim youths) ಬೆನ್ನಟ್ಟಿ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕಡೂರು ಪಟ್ಟಣದ ಸಿಪಿಸಿ ಕಾಲೋನಿಯ ನಿವಾಸಿಯಾಗಿರುವ ವಿಘ್ನೇಶ್ ಎಂಬಾತನ ಮೇಲೆ ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಬೆನ್ನಟ್ಟಿ ಹಲ್ಲೆ ಮಾಡಿದೆ ಎಂದು ಆಪಾದಿಸಲಾಗಿದೆ. ಮುಸ್ಲಿಮ್‌ ಯುವಕರ ತಂಡವೊಂದು ಆತನನ್ನು ಬೆನ್ನಟ್ಟಿ ಹಲ್ಲೆ ಮಾಡಿದೆ ಎಂಬ ಆರೋಪಕ್ಕೆ ಪೂರಕವಾಗಿ ಪೊಲೀಸರಿಗೆ ಸಿಸಿ ಟಿವಿ ಫೂಟೇಜ್‌ ಲಭ್ಯವಾಗಿದ್ದು, ಅದರ ಆಧಾರದಲ್ಲಿ ತನಿಖೆ ನಡೆಯುತ್ತಿದೆ.

ಕಡೂರು ಪಟ್ಟಣದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ವಿಘ್ನೇಶ್‌ ಒಬ್ಬನೇ ಹೋಗುತ್ತಿದ್ದಾಗ ಆತನನ್ನು ನಾಲ್ಕಾರು ಯುವಕರು ಮಾರಕಾಯುಧಗಳನ್ನು ಹಿಡಿದು ಬೆನ್ನಟ್ಟಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಹಲ್ಲೆಗೆ ಒಳಗಾದ ವಿಘ್ನೇಶ್‌

ವಿಘ್ನೇಶ್‌ನ ಬೆನ್ನು ಮತ್ತು ಭುಜದ ಭಾಗದಲ್ಲಿ ಹಲವು ಕಡೆ ಚೂರಿಯಿಂದ ಇರಿಯಲಾಗಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಎಸ್ಪಿ ಉಮಾಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಯುವಕ ವಿಜ್ಞೇಶ್ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಿರುವ ವಿಡಿಯೊ ಮತ್ತು ವಿಜ್ಞೇಶ್‌ನನ್ನು ಅಟ್ಟಾಡಿಸಿಕೊಂಡು ಹೋಗುತ್ತಿರುವ ಸಿಸಿಟಿವಿ ಫೂಟೇಜ್‌ ಪೊಲೀಸರಿಗೆ ಲಭ್ಯವಾಗಿದೆ. ಇದರ ಆಧಾರದಲ್ಲಿ ಪೊಲೀಸರು ಆರೋಪಿಗಳ ಬಂಧನಕ್ಕೆ ಪ್ರಯತ್ನಿಸುತ್ತಿದ್ದಾರೆ. ಆಗ ಈ ಕೊಲೆ ಯತ್ನದ ಹಿಂದಿನ ನಿಜವಾದ ಕಾರಣ ಬಯಲಾಗುವ ನಿರೀಕ್ಷೆ ಇದೆ.

ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಬ್ಬೂರು – ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಶಿರಹಟ್ಟಿಕೇಡಿ ನಿವಾಸಿ ಭೀಮಣ್ಣ ಕಲ್ಲಪ್ಪ ಮುನ್ನೋಳಿ(51) ಮೃತದೇಹ ಪತ್ತೆಯಾಗಿದೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಶಿರಹಟ್ಟಿಕೇಡಿ ಗ್ರಾಮದಲ್ಲಿ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಮಣ್ಣ ಅವರನ್ನು ಕೊಲೆ ಮಾಡಿರುವ ಸಾಧ್ಯತೆಗಳಿವೆ. ಸ್ಥಳಕ್ಕೆ ಚಿಕ್ಕೋಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Rowdysheeter Murder : ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಮರ್ಡರ್‌

Exit mobile version