Site icon Vistara News

Hiriyur News: ಪಿಡಿ ಕೋಟೆ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3 ಲಕ್ಷ ರೂ. ವಶ

cash Seized Hiriyur PD Kote check post

#image_title

ಹಿರಿಯೂರು: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 3 ಲಕ್ಷ ರೂ. ವನ್ನು ಚುನಾವಣಾ ಅಧಿಕಾರಿಗಳು (Election officials) ವಶಪಡಿಸಿಕೊಂಡ ಘಟನೆ ತಾಲೂಕಿನ ಪಿಡಿ ಕೋಟೆ ಚೆಕ್‌ ಪೋಸ್ಟ್ ಬಳಿ ನಡೆದಿದೆ.

ಚೆಕ್‌ ಪೋಸ್ಟ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿನಲ್ಲಿದ್ದ ಮೂರು ಲಕ್ಷ ಹಣ ಇರುವುದು ಕಂಡುಬಂದಿದೆ. ಆಂಧ್ರಪ್ರದೇಶ ಮೂಲದ ಮಾರುತಿ ಎಂಬಾತ ಈ ಹಣವನ್ನು ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ. ಅಬ್ಬಿನ ಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.‌

ದಾಖಲೆ ಇಲ್ಲದೆ 3.39 ಲಕ್ಷ ರೂ. ಸಾಗಿಸುತ್ತಿದ್ದ‌ ವೇಳೆ ವಶಕ್ಕೆ ಪಡೆದ ಅಧಿಕಾರಿಗಳ ತಂಡ

ಮುಂಡಗೋಡ: ದಾಖಲೆ ಇಲ್ಲದೆ 3.39 ಲಕ್ಷ ರೂಪಾಯಿಯನ್ನು ಸಾಗಿಸುತ್ತಿದ್ದ‌ ವೇಳೆ ಅಧಿಕಾರಿಗಳ ತಂಡ ತಾಲೂಕಿನ‌ ಅಗಡಿ ಚೆಕ್‌ಪೋಸ್ಟ್‌ನಲ್ಲಿ (Agadi Check Post) ಶುಕ್ರವಾರ (ಮಾ.31) ವಶಕ್ಕೆ ಪಡೆದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಾಲೂಕಿನ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿತ್ತು. ಪಟ್ಟಣದ ನಿವಾಸಿ ಹಸನಸಾಬ ಎಂಬುವವರು ತಮ್ಮ ಸ್ಕೂಟಿಯಲ್ಲಿ ದಾಖಲೆ ಇಲ್ಲದೆ 3.39 ಲಕ್ಷ ರೂ. ವನ್ನು ತೆಗೆದುಕೊಂಡು ಹುಬ್ಬಳ್ಳಿಯಿಂದ ಮುಂಡಗೋಡಕ್ಕೆ ಬರುತ್ತಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ತಂಡ ಅಗಡಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಹಣ ಪತ್ತೆಯಾಗಿದೆ. ಯಾವುದೇ ದಾಖಲೆ ಇಲ್ಲದ ಕಾರಣ 3.39 ಲಕ್ಷ ರೂ.ವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: IPL 2023: ಐಪಿಎಲ್​ ಕ್ರಿಕೆಟ್‌ ಹಬ್ಬಕ್ಕೆ ರಂಗು ತುಂಬಿದ ರಶ್ಮಿಕಾ ಮಂದಣ್ಣ; ಅದ್ಧೂರಿಯಾಗಿ ನಡೆದ ಉದ್ಘಾಟನಾ ಸಮಾರಂಭ

ಇಲ್ಲಿನ ಸಿಪಿಐ ಎಸ್.ಎಸ್. ಸಿಮಾನಿ ಹಾಗೂ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳ ತಂಡ ಕಟ್ಟುನಿಟ್ಟಾಗಿ ವಾಹನಗಳ ತಪಾಸಣೆ ನಡೆಸುತ್ತಿದೆ.

Exit mobile version