ಉತ್ತರ ಕನ್ನಡ
Holi 2023: ಕಾರವಾರದಲ್ಲಿ ಹೋಳಿ-ಸುಗ್ಗಿ ಕುಣಿತದ ಸಂಭ್ರಮ; ಎಲ್ಲೆಲ್ಲಿಯೂ ಕೋಲಾಟ, ಗುಮಟೆ ಪಾಂಗಿನ ಸದ್ದು
Holly Suuggi Kunitha: ಹಾಲಕ್ಕಿ, ಕೋಮಾರಪಂಥ, ಕರೆ ಒಕ್ಕಲಿಗ, ನಾಮಧಾರಿ, ಅಂಬಿಗ, ಗುನಗಿ ಸಮಾಜದವರು ತಮ್ಮ ಸಾಂಪ್ರದಾಯಿಕ ಕಲೆಯಾದ ಸುಗ್ಗಿ ಕುಣಿತವನ್ನು ಪ್ರಾರಂಭಿಸಿದ್ದಾರೆ.
ಸಂದೀಪ ಸಾಗರ, ಕಾರವಾರ
ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಕಂಡುಬರುವ ವಿಶೇಷ ಆಚರಣೆಗಳ ಪೈಕಿ ಹೋಳಿ ಸುಗ್ಗಿ ಕುಣಿತ (Holly Suuggi Kunitha) ಸಹ ಒಂದು.
ಹೋಳಿ ಹಬ್ಬ ಸಮೀಪಿಸುತ್ತಿದ್ದಂತೆ ಎಲ್ಲಿ ನೋಡಿದರೂ ಬಗೆ ಬಗೆಯ ವೇಷಧಾರಿಗಳು, ಕೋಲಾಟ, ಗುಮಟೆ ಪಾಂಗಿನ ಸಡಗರದ ಸಂಭ್ರಮ ಕಾಣುತ್ತದೆ. ಈ ಬಾರಿ ಸಹ ವಿವಿಧ ಸಮುದಾಯಗಳ ಹೋಳಿ ಸುಗ್ಗಿ ಕುಣಿತ ಆರಂಭಗೊಂಡಿದೆ. ಭಿನ್ನ ವಿಭಿನ್ನವಾದ ತುರಾಯಿಗಳನ್ನು ಹೊತ್ತವರು ಸಮುದಾಯದ ಮನೆಗಳ ಬಳಿ ತೆರಳಿ ಕುಣಿಯುವ ಮೂಲಕ ತಮ್ಮ ಸಂಪ್ರದಾಯವನ್ನು ಪ್ರದರ್ಶನ ಮಾಡುತ್ತಿದ್ದಾರೆ.
ಜಿಲ್ಲೆಯ ಹಾಲಕ್ಕಿ, ಕೋಮಾರಪಂಥ, ಕರೆ ಒಕ್ಕಲಿಗ, ನಾಮಧಾರಿ, ಅಂಬಿಗ, ಗುನಗಿ ಸೇರಿದಂತೆ ಅನೇಕ ಸಮಾಜದವರು ತಮ್ಮ ಸಾಂಪ್ರದಾಯಿಕ ಕಲೆಯಾದ ಸುಗ್ಗಿ ಕುಣಿತವನ್ನು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಾರಂಭಿಸುತ್ತಾರೆ. ಹಬ್ಬಕ್ಕೂ ಏಳೆಂಟು ದಿನಗಳ ಮುನ್ನ ಸುಗ್ಗಿ ಕುಣಿತ ಪ್ರಾರಂಭಿಸಿ ಊರೂರು ತಿರುಗಿ ತಮ್ಮ ಸಮಾಜದವರ ಮನೆಗೆ ತೆರಳಿ ಕುಣಿತವನ್ನು ಪ್ರದರ್ಶಿಸುತ್ತಾರೆ. ಈ ಬಾರಿ ಸಹ ಕಾರವಾರ ತಾಲೂಕಿನ ಗುನಗಿ ಸಮಾಜದ ಸುಗ್ಗಿ ಕುಣಿತಕ್ಕೆ ಚಾಲನೆ ಸಿಕ್ಕಿದ್ದು ತಮ್ಮ ಸಮುದಾಯದವರು ಇರುವಲ್ಲಿಗೆ ತೆರಳಿ ಸುಗ್ಗಿ ಕುಣಿತವನ್ನು ಪ್ರದರ್ಶಿಸುತ್ತಿದ್ದಾರೆ.
ತಾಲೂಕಿನ ಚೆಂಡಿಯಾ ಗ್ರಾಮದ ಕರಿ ದೇವರಿಗೆ ಪೂಜೆ ಮಾಡಿ ಹೊರಟಿರುವ ಸುಗ್ಗಿ ಕುಣಿತದ ತಂಡದವರು ಮನೆ ಮನೆಗೆ ತೆರಳಿ ತಮ್ಮ ಕಲೆಯನ್ನು ಪ್ರದರ್ಶಿಸುತ್ತಿದ್ದಾರೆ. ಹೋಳಿ ಹುಣ್ಣಿಮೆಗೂ ಏಳು ದಿನಗಳ ಮುಂಚೆ ಸುಗ್ಗಿ ಕುಣಿತವನ್ನು ಪ್ರಾರಂಭಿಸುವುದು ಗುನಗಿ ಸಮಾಜದವರಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ತಮ್ಮ ಜನಾಂಗದವರು ನೆಲೆಸಿರುವ ಮನೆಗಳ ಮುಂದೆ ತೆರಳಿ ಸುಗ್ಗಿ ಕುಣಿತ ಮಾಡುವುದರಿಂದ ಜನರಿಗೆ ಎದುರಾಗಿರುವ ತೊಂದರೆಗಳು ಬಗೆಹರಿಯುವುದರ ಜತೆಗೆ ಯಾವುದೇ ಕಾಯಿಲೆಗಳೂ ಮನೆಯವರಿಗೆ ಬರದಂತೆ ತಡೆಯುತ್ತದೆ ಅನ್ನೋದು ಹಾಲಕ್ಕಿ ಸಮುದಾಯದವರ ನಂಬಿಕೆಯಾಗಿದೆ.
ಇದನ್ನೂ ಓದಿ: Allu Arjun: ಚಿರಕಾಲ ನೆನಪಿನಲ್ಲಿ ಉಳಿಯುವಂಥ ಚಿತ್ರ ನೀಡುತ್ತೇವೆ: ಹೊಸ ಸಿನಿಮಾ ಬಗ್ಗೆ ಅಲ್ಲು ಅರ್ಜುನ್ ಹೇಳಿದ್ದೇನು?
ಈ ಸುಗ್ಗಿ ಕುಣಿತಕ್ಕೆ ತನ್ನದೇ ಆದ ವಿಶೇಷವಿದೆ. ಇಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು, ತಲೆಗೆ ಬಣ್ಣ ಬಣ್ಣದ ತುರಾಯಿ, ಪೇಟವನ್ನು ಕಟ್ಟಿ, ಪೊಗಡೆ ವೇಷಭೂಷಣ ಧರಿಸಿ ಸುಗ್ಗಿ ಕುಣಿಯುವುದು ಎಲ್ಲರ ಮನಸೆಳೆಯುತ್ತದೆ. ಇದರೊಂದಿಗೆ ಗುಮಟೆ, ಜಾಗಟೆಯ ಸದ್ದು, ವಾದ್ಯಗಳ ಹಿಮ್ಮೇಳ ಸುಗ್ಗಿ ಕುಣಿತಕ್ಕೆ ಇನ್ನಷ್ಟು ಮೆರುಗು ನೀಡುತ್ತದೆ. ಒಮ್ಮೆ ವೇಷ ತೊಟ್ಟು ಹಣೆಗೆ ಗಂಧವನ್ನು ಇಟ್ಟುಕೊಂಡು ಹೊರಟರೆ ಸುಗ್ಗಿ ಕುಣಿತ ಮುಗಿಸುವ ಏಳು ದಿನಗಳವರೆಗೂ ವಾಪಸ್ ಮನೆಗೆ ತೆರಳುವಂತಿಲ್ಲ. ಜತೆಗೆ ಸಮಾಜದವರ ಮನೆಗಳ ಅಂಗಳದಲ್ಲಿ ಸುಗ್ಗಿ ಕುಣಿತ ಮಾಡಿದಾಗ ಅವರು ನೀಡುವ ಹಣ, ಊಟ, ತಿಂಡಿ ಸ್ವೀಕರಿಸುವ ಪ್ರತೀತಿ ಇದೆ.
ಇದನ್ನೂ ಓದಿ: ವಿಸ್ತಾರ Money Guide : Sovereign Gold Bond : ಸಾವರಿನ್ ಗೋಲ್ಡ್ ಬಾಂಡ್ ಮಾರಾಟ ಇಂದಿನಿಂದ ಶುರು
ಸುಗ್ಗಿ ಆಡುವ ತಂಡದವರು ಒಂದು ತಿಂಗಳ ಮೊದಲೇ ತಯಾರಿಯನ್ನು ಆರಂಭಿಸುತ್ತಾರೆ. ಸುಗ್ಗಿ ಆಡುವಾಗ ತಲೆಯ ಮೇಲೆ ಹೊರುವ ತುರಾಯಿಗಳು ಎಷ್ಟಿರಬೇಕು ಎಂದು ನಿಗದಿಪಡಿಸಿಕೊಂಡು ಬಳಿಕ ಅವುಗಳನ್ನು ಸಿದ್ಧಪಡಿಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಇದಾದ ಬಳಿಕ ಹೋಳಿ ಆಚರಣೆಗೆ ಎಂಟು ದಿನಗಳಿಗೆ ಮುನ್ನ ಸುಗ್ಗಿ ತಂಡದೊಂದಿಗೆ ಹೊರಟು ಸಮುದಾಯದ ಮನೆಗಳವರು ತಮ್ಮನ್ನು ಆಹ್ವಾನಿಸಿದಲ್ಲಿಗೆ ತೆರಳಿ ಕುಣಿತವನ್ನು ಪ್ರದರ್ಶನ ಮಾಡಲಾಗುತ್ತದೆ. ಹೋಳಿಯ ದಿನದಂದು ಸುಗ್ಗಿ ಪ್ರಾರಂಭಿಸಿದಲ್ಲಿಗೇ ವಾಪಸಾಗಿ ಕರಿ ದೇವರಿಗೆ ಪೂಜೆ ಸಲ್ಲಿಸಿ, ತುರಾಯಿಗಳನ್ನು ದೇವರಿಗೆ ಅರ್ಪಿಸಿದ ಬಳಿಕವೇ ಸುಗ್ಗಿ ಕುಣಿತವನ್ನು ಕೊನೆಗೊಳಿಸಲಾಗುತ್ತದೆ.
ಇದನ್ನೂ ಓದಿ: WPL 2023: ಎರಡನೇ ಗೆಲುವಿನ ನಿರೀಕ್ಷೆಯಲ್ಲಿ ಮುಂಬೈ ಇಂಡಿಯನ್ಸ್
ಒಟ್ಟಿನಲ್ಲಿ ಜಾನಪದ ಕಲೆಗಳು ವಿನಾಶದ ಅಂಚಿನಲ್ಲಿರುವ ಈ ದಿನಗಳಲ್ಲಿ ತಲೆ ತಲಾಂತರಗಳಿಂದ ಬಂದಿರುವ ಸಾಂಪ್ರದಾಯಿಕ ಸುಗ್ಗಿ ಕುಣಿತದ ಕಲೆಯನ್ನು ಇಂದಿಗೂ ನಡೆಸಿಕೊಂಡು ಬರಲಾಗುತ್ತಿದೆ. ಸುಗ್ಗಿಯಲ್ಲಿ ಮಕ್ಕಳು, ಯುವಕರು ಸಹ ಹಿರಿಯರೊಂದಿಗೆ ಒಟ್ಟಾಗಿ ಪಾಲ್ಗೊಳ್ಳುವುದರಿಂದ ಮುಂದಿನ ಪೀಳಿಗೆಗೂ ಆಚರಣೆಗಳನ್ನು ತಿಳಿಸಿಕೊಡುವಲ್ಲಿ ಸುಗ್ಗಿ ಕುಣಿತ ಸಹಕಾರಿಯಾಗಿದೆ.
ಇದನ್ನೂ ಓದಿ: ಮಂಗಳೂರು ಸ್ಫೋಟಕ್ಕೆ ಸಾದಾ ಕುಕ್ಕರ್ ಎಂದು ಹೇಳಿದ್ದ ಡಿ.ಕೆ. ಶಿವಕುಮಾರ್ ಈಗ ಏನು ಹೇಳ್ತಾರೆ: ಸಿಎಂ ಬೊಮ್ಮಾಯಿ ಪ್ರಶ್ನೆ
ಉತ್ತರ ಕನ್ನಡ
Uttara Kannada News: ವಾಕ್ಪ್ರತಿಯೋಗಿತಾ ಸ್ಪರ್ಧೆ; ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆ ಉತ್ತಮ ಸಾಧನೆ
Uttara Kannada News: ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಶ್ರೀ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆಯ ಐವರು ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಉತ್ತರ ಕನ್ನಡ: ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಮಾ.22ರಿಂದ 25ರವರೆಗೆ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ (Uttara Kannada News) ಉಮ್ಮಚಗಿಯ ಶ್ರೀ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿವಿಧ ವಿಭಾಗಗಳಲ್ಲಿ ಮೂವರು ಪ್ರಥಮ ಸ್ಥಾನ ಹಾಗೂ ಇಬ್ಬರು ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಾಕ್ಪ್ರತಿಯೋಗಿತಾ ಸ್ಪರ್ಧೆಯ ಸಾಹಿತ್ಯ ಭಾಷಣದಲ್ಲಿ ನಾಗರಾಜ ಭಟ್ಟ ಪ್ರಥಮ, ಜ್ಯೋತಿಷ್ಯ ಶಲಾಕಾ ಸ್ಪರ್ಧೆಯಲ್ಲಿ ಗಣೇಶ ಪ್ರಸಾದ ಭಟ್ಟ ಪ್ರಥಮ, ಜ್ಯೋತಿಷ್ಯ ಭಾಷಣ ಸ್ಪರ್ಧೆಯಲ್ಲಿ ವಿನಾಯಕ ಭಟ್ಟ ದ್ವಿತೀಯ, ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ಸುಮಂತ್ ಜೋಶಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹಾಗೆಯೇ ಇದೇ ಶಾಲೆಯಲ್ಲಿ ಅಧ್ಯಯನ ಮಾಡಿದ ಪಿಎಚ್‌ಡಿ ವಿದ್ಯಾರ್ಥಿ ಕುಮಾರ ಹೆಗಡೆ ಅಕ್ಷರಶ್ಲೋಕಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 14 ಚಿನ್ನದ ಪದಕ ಪಡೆದು ಕರ್ನಾಟಕ ರಾಜ್ಯವು ಸತತ 41ನೇ ಬಾರಿ ವಿಜಯ ವೈಜಯಂತೀ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಇದನ್ನೂ ಓದಿ | ತಾತಯ್ಯ ತತ್ವಾಮೃತಂ : ಶಿಷ್ಯನು ಸಿಗುವುದು ಗುರುವಿನ ಪರಮಭಾಗ್ಯ!
ವೇದಭಾಷ್ಯ ಭಾಷಣದಲ್ಲಿ ಮಹೇಶ ಭಟ್ಟ ಹಿತ್ಲಕಾರಗದ್ದೆ ಪ್ರಥಮ
ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಶ್ರೀ ರಾಜರಾಜೇಶ್ವರೀ ಸಂಸ್ಕೃತ ಮಹಾಪಾಠಶಾಲೆಯ ಕೃಷ್ಣ ಯಜುರ್ವೇದ ವಿದ್ಯಾರ್ಥಿಯಾದ ಮಹೇಶ ಭಟ್ಟ ಹಿತ್ಲಕಾರಗದ್ದೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಕ್ಕೆ ಮತ್ತು ಪಾಠಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಇವರು ವಿ.ಪ್ರಸಾದ ಜೋಶಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಸ್ವರ್ಣವಲ್ಲೀ ಶ್ರೀಗಳು, ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಉತ್ತರ ಕನ್ನಡ
Karnataka Elections 2023 : ಚುನಾವಣೆ ನೀತಿ ಸಂಹಿತೆ ಜಾರಿಗೂ ಮೊದಲು ಬ್ಯಾನರ್, ಹೋರ್ಡಿಂಗ್ಸ್, ಬಂಟಿಂಗ್ಸ್ ತೆರವು
Karnataka Elections 2023; ಚುನಾವಣೆಯ ನೀತಿ ಸಂಹಿತೆ ಜಾರಿಗೂ ಮುನ್ನ ಬ್ಯಾನರ್, ಹೋರ್ಡಿಂಗ್ಸ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ಕಾರವಾರ: ಮುಂಬರುವ ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಈಗಾಗಲೇ ಉತ್ತರ ಕನ್ನಡ ಜಿಲ್ಲಾಡಳಿತ ಸಕಲ ತಯಾರಿಗಳೊಂದಿಗೆ ಚುನಾವಣೆ ಕಾರ್ಯದಲ್ಲಿ ನಿರತವಾಗಿದೆ.
ಜಿಲ್ಲಾದ್ಯಂತ ವಿವಿಧ ಭಾಗಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಕುರಿತು ಅಳವಡಿಸಲಾಗಿರುವ ಬ್ಯಾನರ್, ಹೋರ್ಡಿಂಗ್ಸ್ ಹಾಗೂ ಬಂಟಿಂಗ್ಸ್ ಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗಿಯಾಗಿದ್ದಾರೆ.
“ಈಗಾಗಲೇ ಶಿರಸಿ ತಾಲೂಕು, ಚಿಪಗಿ ಚೆಕ್ ಪೋಸ್ಟ್, ಹೊನ್ನಾವರ ತಾಲೂಕು ಹೀಗೆ ಅನೇಕ ಭಾಗಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಅಳವಡಿಸಿರುವ ಬ್ಯಾನರ್‌ಗಳನ್ನು ತೆರವುಗೊಳಿಸಲು ಕ್ರಮ ವಹಿಸಲಾಗಿದೆ” ಎಂದು ಚುನಾವಣೆ ಶಿರಸ್ತೇದಾರರು ತಿಳಿಸಿದ್ದಾರೆ.
ಇದನ್ನೂ ಓದಿ: Modi in Karnataka: ದಾವಣಗೆರೆ ಮಹಾ ಸಂಗಮದ ಆವರಣದಲ್ಲೇ ಮೋದಿ ರೋಡ್ ಶೋ ನಡೆಸಿದ್ದೇಕೆ?
ಉತ್ತರ ಕನ್ನಡ
Sirsi News: ಮನಸ್ಸಿದ್ದರೆ ಮಾರ್ಗ ಅನ್ನುವುದಕ್ಕೆ ಶ್ರೀನಿವಾಸ್ ಹೆಬ್ಬಾರ್ ಅವರೇ ಉದಾಹರಣೆ: ಹರಿಪ್ರಕಾಶ್ ಕೋಣೆಮನೆ
Sirsi News: ಶಿರಸಿ ತಾಲೂಕಿನಲ್ಲಿರುವ ಕೆರೆಗಳು ಜೀವಂತವಾಗಿವೆ ಎಂದರೆ ಅದಕ್ಕೆ ಕಾರಣ ಶ್ರೀನಿವಾಸ ಹೆಬ್ಬಾರ್ ಎಂದು ಹರಿಪ್ರಕಾಶ್ ಕೋಣೆಮನೆ ಶ್ಲಾಘಿಸಿದರು.
ಶಿರಸಿ: “ಮನುಷ್ಯನಿಗೆ ಹಣ-ಅಧಿಕಾರ ಪ್ರಧಾನವಾದಾಗ ಬೇರೇನೂ ಕಾಣುವುದಿಲ್ಲ. ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದರೆ ಹಣ, ಅಧಿಕಾರ ಎಲ್ಲವೂ ಬರುತ್ತದೆ. ವಿಶ್ವಾಸ, ಒಡನಾಟ, ಪ್ರೀತಿ ಉದಾತ್ತವಾದ ಆಲೋಚನೆ ಬೇಕು. ಮನಸ್ಸಿದ್ದರೆ ಮಾರ್ಗ ಇದೆ ಅನ್ನುವುದಕ್ಕೆ ಉದ್ಯಮಿ ಶ್ರೀನಿವಾಸ್ ಹೆಬ್ಬಾರ್ (Srinivas Hebbar) ಅವರೇ ಒಂದು ಉದಾಹರಣೆ” ಎಂದು ವಿಸ್ತಾರ ನ್ಯೂಸ್ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ಅಭಿಪ್ರಾಯಪಟ್ಟರು.
ಶಿರಸಿ ಜೀವಜಲ ಕಾರ್ಯಪಡೆ ವತಿಯಿಂದ ಶನಿವಾರ (ಮಾ.25) ಆಯೋಜಿಸಲಾಗಿದ್ದ ತಾಲೂಕಿನ ಕರಸುಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
“ಶಿರಸಿ ತಾಲೂಕಿನಲ್ಲಿರುವ ಕೆರೆಗಳು ಜೀವಂತವಾಗಿವೆ ಎಂದರೆ ಅದಕ್ಕೆ ಕಾರಣ ಶ್ರೀನಿವಾಸ ಹೆಬ್ಬಾರ್ ಅವರೇ ಹೊರತು ಸರ್ಕಾರವಲ್ಲ. ಸರ್ಕಾರ ಅತೀ ಹೆಚ್ಚು ಹಣವನ್ನು ನೀರಾವರಿಗೆ ವ್ಯಯ ಮಾಡುತ್ತಿದೆ. ಎತ್ತಿನ ಹೊಳೆ ಯೋಜನೆಯಿಂದ ಹನಿ ನೀರು ಬಾರದಿದ್ದರೂ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ಕಾಮಗಾರಿ ನಡೆಸುತ್ತಿದೆ. ಆದರೆ ಶ್ರೀನಿವಾಸ ಹೆಬ್ಬಾರ್ ಅವರು ಸ್ವತಃ ಸಾಕಷ್ಟು ಕೆರೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಜಲಮೂಲಗಳ ಸಂರಕ್ಷಣೆ ಮಾಡುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗುತ್ತಿದೆ. ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲ ಮೂಲಗಳ ಸಂರಕ್ಷಣೆ ಮಾಡುವುದು ನಮಗೆ ಅನಿವಾರ್ಯವಾಗುತ್ತಿದೆ. ಜಲ ಮೂಲಗಳ ಸಂರಕ್ಷಣೆಗೆ ಶ್ರೀನಿವಾಸ್ ಹೆಬ್ಬಾರ್ ಕೊಡುಗೆ ಅಪಾರ” ಎಂದು ಶ್ಲಾಘಿಸಿದರು.
ಶಿರಸಿ ತಾಲೂಕಿನಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಶ್ರೀನಿವಾಸ್ ಹೆಬ್ಬಾರ್ ಅವರ ಚುನಾವಣೆ ಸ್ಪರ್ಧೆಯ ವಿಚಾರ ಸ್ಪಷ್ಟಪಡಿಸಿದ ಹರಿಪ್ರಕಾಶ್ ಕೋಣೆಮನೆ, “ಹೆಬ್ಬಾರ್ ಅವರು ಚುನಾವಣೆಗೆ ಸ್ಪರ್ಧಿಸಲು ತಯಾರಿಲ್ಲ. ಬಹಳ ಒತ್ತಡ ಬಂದರೂ ಒಪ್ಪದೇ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕೆರೆಯೆಂದರೆ ಒಂದು ಊರಿನ ಇತಿಹಾಸವಾಗಿರುತ್ತದೆ. ಅಧಿಕಾರವನ್ನು ಬೆನ್ನತ್ತಿ ಹೋಗುವವರ ಹಿಂದೆ ಹೋಗುವ ಬದಲು ಸಾಮಾಜಿಕ ಕೆಲಸ ಮಾಡುವವರ ಹಿಂದೆ ಹೋಗಬೇಕು” ಎಂದರು.
ಇದನ್ನೂ ಓದಿ: Swiss Open: ಸ್ವಿಸ್ ಓಪನ್ ಬ್ಯಾಡ್ಮಿಂಟನ್: ಸೆಮಿಫೈನಲ್ಗೆ ಲಗ್ಗೆಯಿಟ್ಟ ಚಿರಾಗ್-ಸಾತ್ವಿಕ್ ಜೋಡಿ
ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಮಾತನಾಡಿ “ಯುಗಾದಿಯಂದು ನಮ್ಮ ಜೀವಜಲ ಕಾರ್ಯಪಡೆಗೆ ಆರು ವರ್ಷಗಳು ತುಂಬಿವೆ. ಈ ಮೊದಲು ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡುತ್ತಿದ್ದೆವು. ಶಿರಸಿಯ ಸುತ್ತಮುತ್ತ ಇರುವ ಬಹುತೇಕ ಎಲ್ಲ ಕೆರೆಗಳನ್ನು ಜೀವಜಲ ಕಾರ್ಯಪಡೆ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಅತಿಕ್ರಮಣ ಮಾಡಿಕೊಂಡ ಕೆರೆಯ ಜಾಗವನ್ನು ಬಿಡಿಸಿ ಅಭಿವೃದ್ಧಿ ಮಾಡಿದ್ದೇವೆ. ಆಹಾರವಿಲ್ಲ ಎಂದರೂ ಬದುಕಬಹುದು, ಆದರೆ ನೀರು ಇಲ್ಲದೆ ಒಂದು ಕ್ಷಣವೂ ಬದುಕಲು ಸಾಧ್ಯವಿಲ್ಲ. ಇದೀಗ ಎಂಟು ದಿಕ್ಕುಗಳಲ್ಲಿ 16 ಕೆರೆಗಳನ್ನು ಅಭಿವೃದ್ಧಿ ಮಾಡಿದ್ದೇವೆ. ಕೆರೆಗಳ ಅಭಿವೃದ್ಧಿ ಮಾಡುವುದರಿಂದ ಜಲಮೂಲಗಳ ಅಭಿವೃದ್ಧಿಯಾಗುತ್ತದೆ. ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ. ಇದುವರೆಗೂ ಯಾವ ಸರ್ಕಾರದಿಂದಲೂ ಒಂದೇ ಒಂದು ರೂಪಾಯಿಯನ್ನು ತೆಗೆದುಕೊಂಡಿಲ್ಲ. ಮುಂದೆಯೂ ತೆಗೆದುಕೊಳ್ಳುವುದಿಲ್ಲ. ನಮ್ಮ ಕೆಲಸಕ್ಕೆ ಸಹಕಾರ ನೀಡಿ” ಎಂದರು.
ಇದನ್ನೂ ಓದಿ: World Cup 2023 : ಟೀಕೆ ನಿಲ್ಲಿಸಿ, ವಿಶ್ವ ಕಪ್ ಗೆಲ್ಲಲಿದೆ ಭಾರತ ತಂಡ ಎಂದಿದ್ದಾರೆ ಮಾಜಿ ಹೆಡ್ ಕೋಚ್
ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮಸ್ಥ ಗಿರೀಶ್ ಭಟ್, “ಹಾಳುಬಿದ್ದ ಕೆರೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಬಹಳ ವರ್ಷಗಳಿಂದ ಊರಿನವರು ತಿರ್ಮಾನಿಸಿದ್ದೆವು. ಈ ಕೆರೆ ಕುಡಿಯುವ ನೀರಿನ ಕೆರೆ ಎಂದು ನಮಗೆ ತಿಳಿದು ಬಂತು. ಸುಮಾರು 2.5 ಎಕರೆ ಪ್ರದೇಶದಲ್ಲಿರುವ ಕೆರೆಯನ್ನು ಅಭಿವೃದ್ಧಿಪಡಿಸಲು ಶ್ರೀನಿವಾಸ ಹೆಬ್ಬಾರ್ ಅವರು ಮುಂದೆ ಬಂದಿರುವುದು ಸಂತಸದ ಸಂಗತಿ” ಎಂದರು.
ಈ ಸಂದರ್ಭದಲ್ಲಿ ಕಿರಣ್ ಚಿತ್ರಕಾರ, ಡಿ ಆರ್ ಭಟ್ , ಪಂಚಾಯತಿ ಉಪಾಧ್ಯಕ್ಷ, ರವೀಶ ಹೆಗಡೆ, ಸಾಮಾಜಿಕ ಕಾರ್ಯಕರ್ತ ವಿ ಪಿ ಹೆಗಡೆ ವೈಶಾಲಿ, ಪ್ರದೀಪ ಶೆಟ್ಟಿ, ಸಂತೋಷ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Documents Digitalization: ಶ್ರೀನಿವಾಸ್ ಹೆಬ್ಬಾರ್ ಮತ್ತೊಂದು ಸಾಹಸ; ಶಿರಸಿ ಉಪ ವಿಭಾಗದ ದಾಖಲೆ ಸಂಪೂರ್ಣ ಡಿಜಿಟಲೀಕರಣ
ಉತ್ತರ ಕನ್ನಡ
Karwar News : 11 ಲಕ್ಷ ರೂ. ಮೌಲ್ಯದ 47 ಕೆಜಿಯಷ್ಟು ಮಾದಕ ದ್ರವ್ಯ ನಾಶ
Karwar News: ಮಾದಕ ವಸ್ತು ಪೂರೈಸುವವರ ವಿರುದ್ಧ ತೀವ್ರ ನಿಗಾ ಇರಿಸಲಾಗಿದ್ದು ಇನ್ನಷ್ಟು ಪ್ರಕರಣಗಳನ್ನು ಪತ್ತೆ ಹಚ್ಚುವ ವಿಶ್ವಾಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ವ್ಯಕ್ತಪಡಿಸಿದ್ದಾರೆ.
ಕಾರವಾರ: ಜಿಲ್ಲೆಯ (Karwar News) ವಿವಿಧ ಠಾಣೆಗಳಲ್ಲಿ ಒಟ್ಟು 51 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸುಮಾರು 11 ಲಕ್ಷ ರೂ. ಮೌಲ್ಯದ 47 ಕೆಜಿಯಷ್ಟು ಮಾದಕ ದ್ರವ್ಯಗಳನ್ನು ನ್ಯಾಯಾಲಯದ ಅನುಮತಿಯ ಮೇರೆಗೆ ನಾಶಪಡಿಸಲಾಯಿತು. ಅಂಕೋಲಾ ತಾಲೂಕಿನ ಬೊಗ್ರಿಬೈಲ್‌ನ ಕೆನರಾ ಐ.ಎಮ್.ಎ.(ಯು.ಕೆ) ಕಾನ್ ಗ್ರೀಟ್‌ಮೆಂಟ್ ಫೆಸಿಲಿಟಿಯ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರ ಸಮ್ಮುಖದಲ್ಲಿ ಮಾದಕ ವಸ್ತುಗಳನ್ನು (Drugs Destroyed) ನಾಶಪಡಿಸಲಾಯಿತು.
ಮಾದಕ ವಸ್ತುಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆಯು ಕಾರ್ಯಾಚರಣೆಯನ್ನು ಕೈಗೊಳ್ಳುತ್ತಿದ್ದು, ಇದೇ ರೀತಿ ಮುಂದಿನ ದಿನಗಳಲ್ಲೂ ಮಾದಕ ವಸ್ತುಗಳ ಸಾಗಾಟ ಪ್ರಕರಣಗಳ ವಿರುದ್ಧ ಎಚ್ಚರಿಕೆ ವಹಿಸಲಾಗುವುದು. ಇನ್ನೂ ಹೆಚ್ಚಿನ ಪ್ರಕರಣಗಳನ್ನು ದಾಖಲಿಸುವ ಮೂಲಕ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ, ಸೇವನೆಯನ್ನು ಸಂಪೂರ್ಣ ಬುಡಸಮೇತ ಕಿತ್ತು ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸನ್ನದ್ಧವಾಗಿದೆ. ಮಾದಕ ವಸ್ತುಗಳನ್ನು ಪೂರೈಸುವವರ ವಿರುದ್ಧ ತೀವ್ರ ನಿಗಾ ಇರಿಸಲಾಗಿದ್ದು ಇನ್ನಷ್ಟು ಪ್ರಕರಣಗಳನ್ನು ಪತ್ತೆ ಹಚ್ಚುವ ವಿಶ್ವಾಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Sanskrit Yuvajanotsavah: ಮಾ. 26ರಂದು ಮಲ್ಲೇಶ್ವರದಲ್ಲಿ ‘ಸಂಸ್ಕೃತ ಯುವಜನೋತ್ಸವಃ’ ಕಾರ್ಯಾಗಾರ
ಒಂದು ತಿಂಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಒಟ್ಟು 24 ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿದ್ದು, ಗಾಂಜಾ ಇರಿಸಿಕೊಂಡಿದ್ದಂತಹ ಹತ್ತರಿಂದ ಹನ್ನೆರಡು ಪ್ರಕರಣಗಳು ದಾಖಲಾಗಿದ್ದವು. ಈ ನಿಟ್ಟಿನಲ್ಲಿ ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಪೊಲೀಸರ ತಂಡವನ್ನು ರೂಪಿಸಿಕೊಂಡ ಗಾಂಜಾ ಸಾಗಾಟ, ಸೇವನೆ ಮಾಡುವವರ ಮಾಹಿತಿ ಕಲೆ ಹಾಕಿ ಅಂತಹವರನ್ನು ಮಟ್ಟ ಹಾಕುವ ಕೆಲಸವನ್ನು ಸಿಬ್ಬಂದಿ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲೂ ಇದೇ ರೀತಿ ಮಾದಕ ವಸ್ತು ಸಾಗಾಟದಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಎಸ್ಪಿ ವಿಷ್ಣುವರ್ಧನ್ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಾರವಾರ ಡಿವೈಎಸ್ಪಿ ವ್ಯಾಲೆಂಟೈನ್ ಡಿಸೋಜಾ, ಭಟ್ಕಳ ಡಿವೈಎಸ್ಪಿ ಶ್ರೀಕಾಂತ, ಡಿಸಿಆರ್‌ಬಿ ಡಿವೈಎಸ್ಪಿ ವಿಜಯ ಪ್ರಸಾದ್ ಹಾಗೂ ಜಿಲ್ಲೆಯ ವಿವಿಧ ಠಾಣೆಗಳ ಸಿಪಿಐ ಹಾಗೂ ಪಿಎಸೈ ಸಿಬ್ಬಂದಿ ಹಾಜರಿದ್ದರು.
ಇದನ್ನೂ ಓದಿ: Wall collapse: ತಡೆಗೋಡೆ ನಿರ್ಮಾಣ ವೇಳೆ ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ್ಯು
-
ಅಂಕಣ17 hours ago
Ramzan Fasting : ರಂಜಾನ್ ವ್ರತಾಚರಣೆಗಿದೆ ವೈಜ್ಞಾನಿಕ ದೃಷ್ಟಿಕೋನ; ಆರೋಗ್ಯ ವರ್ಧನೆಗೆ ಇದು ಎಷ್ಟು ಸಹಕಾರಿ?
-
ಅಂಕಣ18 hours ago
ರಾಜ ಮಾರ್ಗ ಅಂಕಣ : ಎಸೆಸೆಲ್ಸಿ ವಿದ್ಯಾರ್ಥಿಗಳು ಇನ್ನು ಆರೇ ದಿನ ಓದಿದರೂ ಪಾಸ್ ಆಗಬಹುದು! ಹಾಗಿದ್ರೆ ಏನು ಮಾಡಬೇಕು?
-
ಕರ್ನಾಟಕ17 hours ago
Modi In Karnataka: ಕೆಆರ್ ಪುರ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ; ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?
-
ಅಂಕಣ19 hours ago
ವಿಸ್ತಾರ ಅಂಕಣ: ಭಾರತಕ್ಕೆ ಈಗ ಬೇಕಿರುವುದು ʼಈಸ್ ಆಫ್ ಡೂಯಿಂಗ್ ಪಾಲಿಟಿಕ್ಸ್ʼ ಸೂಚ್ಯಂಕ
-
ಕರ್ನಾಟಕ16 hours ago
Congress Ticket list : ಸಿದ್ದರಾಮಯ್ಯ ವರುಣ ಕೇಳಿದ್ರು ಕೊಟ್ವಿ, ಕೋಲಾರ ಕೇಳಿದ್ದರೆ ಅದನ್ನೇ ಕೊಡುತ್ತಿದ್ದೆವು; ಡಿ.ಕೆ. ಶಿವಕುಮಾರ್
-
ಕರ್ನಾಟಕ11 hours ago
Modi in Karnataka: ಮೆಟ್ರೊ ರೈಲು ಮಾರ್ಗ ಉದ್ಘಾಟಿಸಿ ಸಾಮಾನ್ಯರಂತೆ ಪ್ರಯಾಣಿಸಿದ ಪ್ರಧಾನಿ ಮೋದಿ
-
ಕರ್ನಾಟಕ15 hours ago
Modi In Karnataka: ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ; ಪ್ರವಾಸದ ಇಂಚಿಂಚು ಮಾಹಿತಿ ಇಲ್ಲಿದೆ
-
ಅಂಕಣ12 hours ago
ಹೊಸ ಅಂಕಣ: ಸೈಬರ್ ಮಿತ್ರ: ಜಾಣರಾಗಿ, ಜಾಗರೂಕರಾಗಿರಿ!