Home loan: ಮನೆಕೊಳ್ಳಲು ಇದು ಸೂಕ್ತ ಸಮಯ, ಆದರೆ ಈ ವಿಷಯಗಳನ್ನು ಮರೆಯಬೇಡಿ! - Vistara News

ಕರ್ನಾಟಕ

Home loan: ಮನೆಕೊಳ್ಳಲು ಇದು ಸೂಕ್ತ ಸಮಯ, ಆದರೆ ಈ ವಿಷಯಗಳನ್ನು ಮರೆಯಬೇಡಿ!

ಗೃಹಸಾಲದ (Home loan) ಮೇಲಿನ ಬಡ್ಡಿದರ ಕಡಿಮೆ ಇರುವುದರಿಂದ ಮನೆ ಖರೀದಿಗೆ ಇದು ಸೂಕ್ತ ಸಮಯ ಎಂದು ತಜ್ಞರು ಹೇಳುತ್ತಿದ್ದಾರೆ. ಈ ನಿರ್ಧಾರ ಕೈಗೊಳ್ಳುವ ಮುನ್ನ ಗಮನಿಸಬೇಕಾದ ವಿಷಯಗಳ ಮಾಹಿತಿ ಇಲ್ಲಿದೆ

VISTARANEWS.COM


on

home loan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಸ್ವಂತ ಮನೆ ಹೊಂದಬೇಕೆಂಬುದು ನಗರಗಳಲ್ಲಿ ವಾಸಿಸುವ ಬಹುತೇಕರ ಕನಸು. ಕೊರೊನಾ ಕಾಲಘಟ್ಟದಲ್ಲಿನ ಲಾಕ್‌ಡೌನ್‌ ಮತ್ತು ವರ್ಕ್‌ ಫ್ರಮ್‌ ಹೋಮ್‌ ಬಹುತೇಕರಿಗೆ ಸ್ವಂತ ಮನೆಯ ಅವಶ್ಯಕತೆಯನ್ನು ಮನದಟ್ಟು ಮಾಡಿಸಿದೆ. ಅಲ್ಲದೆ ಬ್ಯಾಂಕುಗಳು ಗೃಹಸಾಲದ (home loan) ಮೇಲಿನ ಬಡ್ಡಿದರವನ್ನು ದಾಖಲೆ ಪ್ರಮಾಣದಲ್ಲಿ ಇಳಿಸಿ ಹಾಗೂ ಸರ್ಕಾರ ಮುದ್ರಾಂಕ ಶುಲ್ಕವನ್ನು ಕಡಿತಮಾಡಿ ಮನೆಕೊಳ್ಳುವವರಿಗೆ ಉತ್ತೇಜನ ನೀಡುತ್ತಿವೆ.

ʼʼಕೊರೊನಾ ನಂತರ ದೇಶದ ಆರ್ಥಿಕತೆ ಮತ್ತೆ ಹಳಿಗೆ ಮರಳಿದ್ದು, ಬಹುತೇಕ ವ್ಯವಹಾರಗಳು ಈ ಹಿಂದಿನಂತೆ ನಡೆಯುತ್ತಿವೆ. ರಿಯಾಲ್ಟಿ ಚಟುವಟಿಕೆ ಕೂಡ ಗರಿಗೆದರಿವೆ. ಉದ್ಯೋಗಾವಕಾಶಗಳು ಹೆಚ್ಚಿದ್ದು, ವೇತನ ಕೂಡ ನಿರೀಕ್ಷೆಗೂ ಮೀರಿ ಹೆಚ್ಚಳವಾಗುತ್ತಿದೆ. ಹೀಗಾಗಿ ಮನೆ ಖರೀದಿಗೆ  ಇದು ಸೂಕ್ತ ಸಮಯʼʼ ಎನ್ನುತ್ತಾರೆ ರಿಯಾಲ್ಟಿ ತಜ್ಞ ಅನುರೂಪ್‌ ಕೆ. ವಿ.

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ರೆಪೊ ದರವನ್ನು ಈಗಾಗಲೇ ಹೆಚ್ಚಿಸಲು ಆರಂಭಿಸಿದೆ. ಮುಂದೆ ಕೂಡ ಹಣದುಬ್ಬರವನ್ನು ಇಳಿಸುವ ಉದ್ದೇಶದಿಂದ ಇನ್ನಷ್ಟು ಹೆಚ್ಚಿಸಬಹುದು. ಆಗ ಸಹಜವಾಗಿ ಗೃಹ ಸಾಲದ (home loan) ಮೇಲಿನ ಬಡ್ಡಿದರವೂ ಹೆಚ್ಚಲಿದೆ. ಹೀಗಾಗಿ ತಡ ಮಾಡದೆ ಈಗಲೇ ನಿರ್ಧಾರ ತೆಗೆದುಕೊಂಡರೆ ಹೆಚ್ಚು ಲಾಭವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸರಿಯಾಗಿ ಪ್ಲಾನ್‌ ಮಾಡಿ

ನಿಮಗೂ ತಜ್ಞರ ಈ ಮಾತು ಸತ್ಯ ಎನಿಸಿರಬಹುದು. ಸ್ವಂತ ಮನೆ ಖರೀದಿಗೆ ನೀವು ನಿರ್ಧರಿಸಿದ್ದೀರಿ ಎಂದಾದರೆ ಮೊದಲು ಹಣಕಾಸಿನ ಬಗ್ಗೆ ಸರಿಯಾಗಿ ಪ್ಲಾನ್‌ ಮಾಡಿಕೊಳ್ಳಿ. ಸ್ವಂತ ಮನೆ ಅಥವಾ ಅಪಾರ್ಟ್‌ಮೆಂಟ್‌ ಖರೀದಿಗೆ ಎಷ್ಟು ಹಣ ಬೇಕಾಗಬಹುದು, ಈ ಹಣವನ್ನು ಹೊಂದಿಸುವುದು ಹೇಗೆ? ಉಳಿತಾಯ ಮಾಡಿದ ಹಣ ಎಷ್ಟಿದೆ ಎಂದೆಲ್ಲಾ ಲೆಕ್ಕಾಚಾರ ಹಾಕಿ. ಎಷ್ಟು ಸಾಲಮಾಡಿದರೆ ತೀರಿಸಲು ಸಾಧ್ಯ , ಮುಂದೆ  ಏನೆಲ್ಲಾ ಖರ್ಚುಗಳು (ಮಕ್ಕಳ ವಿದ್ಯಾಭ್ಯಾಸ, ಮದುವೆ ಇತ್ಯಾದಿ) ಹೆಚ್ಚುವರಿಯಾಗಿ ಬರುತ್ತವೆ, ಅನಾರೋಗ್ಯದ ಸಮಸ್ಯೆ ಎದುರಾದರೆ ಖರ್ಚಿಗೆ ಹಣ ಹೊಂದಿಸಲು ಸಾಧ್ಯವೇ… ಹೀಗೆ ಎಲ್ಲವನ್ನೂ ಯೋಚಿಸಿಯೇ ಮುಂದುವರಿಯಿರಿ.

ನಿಮಗೆ ಗೃಹಸಾಲ ಸಿಗದಿರಬಹದು!

ಹೌದು, ನೀವು ಮನೆ ಖರೀದಿಯ ತೀರ್ಮಾನ ತೆಗೆದುಕೊಂಡು ಒಂದೊಳ್ಳೆಯ ಮನೆ ನೋಡಿ, ಡೀಲ್‌ ಕೂಡ ಫೈನಲ್‌ ಹಂತಕ್ಕೆ ಬಂದಿದೆ ಎಂದಿಟ್ಟುಕೊಳ್ಳಿ. ನಿಮ್ಮ ಜೀವನದ ಕನಸು ನನಸಾಗುವ ದಿನಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಸಮಯದಲ್ಲಿ ಬ್ಯಾಂಕ್‌ ನಿಮಗೆ ಗೃಹ ಸಾಲ ನೀಡಲು ನಿರಾಕರಿಸುವ ಸಾಧ್ಯತೆಗಳೂ ಇವೆ.

Home loan

ಏಕೆ ಹೀಗಾಗುತ್ತದೆ ಎಂದರೆ ಗೃಹಸಾಲಕ್ಕೆ ಅರ್ಹತೆ ಇದೆಯೇ ಇಲ್ಲವೇ ಎಂದು ತಿಳಿದುಕೊಳ್ಳದೇ ನೀವು ಮುಂದವರಿದಿದ್ದೀರಿ. ಕೆಲವರಿಗೆ ಈ ಹಂತದಲ್ಲಿ ಕ್ರೆಡಿಟ್‌ ಅಥವಾ ಸಿಬಿಲ್‌ ಸ್ಕೋರ್‌ ಕಡಿಮೆ ಇರುವ ಕಾರಣಕ್ಕೆ ಸಾಲದ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ. ಈ ಬಗ್ಗೆಯು ನೀವು ಪರಿಶೀಲಿಸಿಕೊಳ್ಳಿ. ಈ ಹಿಂದೆ ನಾನು ಮಾಡಿದ್ದ ಸಾಲಗಳನ್ನು ಸರಿಯಾಗಿ ಪಾವತಿಸಿದ್ದೇನೆಯೇ? ಕ್ರಿಡಿಟ್‌ ಕಾರ್ಡ್‌ ಬಿಲ್‌ಗಳನ್ನು ನಿಗದಿತ ಸಮಯದಲ್ಲಿ ಪಾವತಿಸಿದ್ದೇನೆಯೇ? ನನ್ನ ಕ್ರೆಡಿಟ್‌ ಸ್ಕೋರ್‌ ಎಷ್ಟಿದೆ ಎಂಬುದುನ್ನು ನೋಡಿಕೊಂಡೇ ಸಾಲದ ಕುರಿತು ಯೋಚಿಸಿ. ಒಂದು ವೇಳೆ ಕ್ರೆಡಿಟ್‌ ಸ್ಕೋರ್‌ ಕಡಿಮೆ ಇದ್ದರೆ ಅದನ್ನು ಉತ್ತಮಪಡಿಸಿಕೊಂಡು ಸಾಲಕ್ಕೆ ಅರ್ಜಿ ಸಲ್ಲಿಸುವುದೇ ಇದಕ್ಕಿರುವ ಪರಿಹಾರ.

ಇನ್ನು ಸೂಕ್ತವಾದ ದಾಖಲೆಪತ್ರಗಳನ್ನು ನೀಡದೇ ಇದ್ದರೂ ನಿಮ್ಮ ಅರ್ಜಿ ತಿರಸ್ಕೃತವಾಗಬಹುದು. ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲೇ ಯಾವೆಲ್ಲ ದಾಖಲೆಗಳು ಬೇಕಾಗಬಹುದು ಎಂದು ತಿಳಿದುಕೊಂಡು, ಅರ್ಜಿಯೊಂದಿಗೆ ಅವುಗಳನ್ನು ಲಗತ್ತಿಸಿ. ಕೆಲವು ಮನೆಗಳಿಗೆ ಸಂಬಂಧಿಸಿದ ದಾಖಲೆಗಳು ಸರಿಯಾಗಿರದಿರಬಹುದು. ಹೀಗಾಗಿ ಮನೆಯೊಂದನ್ನು ಕೊಳ್ಳುವ ನಿರ್ಧಾರವನ್ನು ಅಂತಿಮಗೊಳಿಸುವ ಮುನ್ನ ತಜ್ಞ ವಕೀಲರಿಂದ ದಾಖಲೆಗಳನ್ನುಪರಿಶೀಲನೆಗೊಳಪಡಿಸಿ, ಬ್ಯಾಂಕಿನವರೂ ಇವುಗಳನ್ನು ಪರಿಶೀಲಿಸಿಯೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೆನಪಿನಲ್ಲಿಡಿ.

ವಿವಿಧ ಶುಲ್ಕಗಳ ಬಗ್ಗೆ ಮಾಹಿತಿ ಇರಲಿ

ಇನ್ನು ಮನೆ ಖರೀದಿಗೆ ಹಣ ಹೊಂದಿಸುವ ಕುರಿತು ನೀವು ಎಷ್ಟೇ ಪ್ಲಾನ್‌ ಮಾಡಿಕೊಂಡರೂ ಕೆಲವೊಂದು ಖರ್ಚುಗಳು ಅನಿರೀಕ್ಷಿತವಾಗಿ ಎದುರಾಗುತ್ತವೆ. ಗೃಹಸಾಲ ಪಡೆಯುವಾಗ ಬ್ಯಾಂಕುಗಳು ವಿಧಿಸುವ ಶುಲ್ಕಗಳು. ಗೃಹಸಾಲ ಪಡೆದಾಗ ಕೇವಲ ಬಡ್ಡಿ ಮಾತ್ರ ಪಾವತಿಸಿದರೆ ಸಾಕು ಎಂಬ ಲೆಕ್ಕಾಚಾರ ನಿಮ್ಮದಾಗಿರಬಹುದು. ಬ್ಯಾಂಕಿನವರು ಹೆಚ್ಚುವರಿ ಶುಲ್ಕ ಪಾವತಿಸಬೇಕು ಎಂದಾದಾಗ ನಿಮಗೆ ಲೆಕ್ಕಾಚಾರ ತಲೆಕೆಳಗಾದಂತೆ ಅನ್ನಿಸಬಹದು. ಇದಕ್ಕೆ ಗೃಹಸಾಲದ ವಿಚಾರಣೆಗೆ ಹೋದಾಗಲೇ ವಿವಿಧ ಶುಲ್ಕಗಳ ಬಗ್ಗೆಯೂ ಕೇಳಿ ತಿಳಿಯಬೇಕಾದದು ಅಗತ್ಯ. ಮುಖ್ಯವಾಗಿ ವಿವಿಧ ಮರೆಮಾಚಿದ ಶುಲ್ಕಗಳು ಇರುತ್ತವೆ.

home loan

ಈ ಬಗ್ಗೆ ಬಿಡಿಸಿ ಕೇಳಿ ಮಾಹಿತಿ ಪಡೆದುಕೊಳ್ಳಬೇಕು. ಸಂಸ್ಕರಣಾ ಶುಲ್ಕ, ಕಾನೂನು ಶುಲ್ಕಗಳು, ದಾಖಲೆಗಳಿಗೆ ಸಂಬಂಧಪಟ್ಟ ಶುಲ್ಕಗಳು, ಆಸ್ತಿ ಮೌಲ್ಯಮಾಪನ ಶುಲ್ಕ ಸೇರಿದಂತೆ ಹತ್ತು ಹಲವು ಶುಲ್ಕಗಳನ್ನು ಬ್ಯಾಂಕ್‌ಗಳು ವಿಧಿಸುತ್ತವೆ. ಈ ಬಗ್ಗೆ ಮೊದಲೇ ಮಾಹಿತಿ ಪಡೆದುಕೊಂಡರೆ ದುಡ್ಡಿನ ವಿಚಾರದಲ್ಲಿ ಲೆಕ್ಕತಪ್ಪುವ ಸಾಧ್ಯತೆಗಳಿರುವುದಿಲ್ಲ.

ವ್ಯಾಲ್ಯೂವೇಷನ್‌ನಲ್ಲಿ ವ್ಯತ್ಯಾಸ
ನೀವು ಒಂದು ಮನೆಯನ್ನು ಅಥವಾ ನಿವೇಶನವನ್ನು 90 ಲಕ್ಷ ರೂ. ನೀಡಿ ಖರೀದಿಸಲು ಮುಂದಾಗಿದ್ದೀರಿ ಎಂದಿಟ್ಟುಕೊಳ್ಳಿ. ಆದರೆ, ಬ್ಯಾಂಕ್‌ ತನ್ನ ಮೌಲ್ಯಮಾಪನ ಸಂದರ್ಭದಲ್ಲಿ ಆ ಪ್ರಾಪರ್ಟಿಗೆ ಅಷ್ಟೇ ದರ ನಿಗದಿಪಡಿಸುತ್ತದೆ ಎಂದು ಹೇಳಲಾಗದು. ಪ್ರಾಪರ್ಟಿ ಮೌಲ್ಯಮಾಪನದಲ್ಲಿ ಶೇ 5-10ರಷ್ಟು ವ್ಯತ್ಯಾಸ ಬರಬಹುದು. ಇದರಿಂದ ನಿಮಗೆ ಕಡಿಮೆ ಪ್ರಮಾಣದಲ್ಲಿ ಸಾಲ ದೊರಕಬಹುದು. ಈ ಬಗ್ಗೆಯೂ ನೀವು ಮೊದಲೇ ಯೋಚಿಸಿದ್ದರೆ ಕೊನೆಯ ಕ್ಷಣದಲ್ಲಿ ಗೊಂದಲಕ್ಕೆ ಬೀಳುವುದು ತಪ್ಪುತ್ತದೆ. ಇಂತಹ ಸಂದರ್ಭ ಬಂದರೆ ಇತರೆ ಬ್ಯಾಂಕ್‌ಗಳು, ಎಚ್‌ಎಫ್‌ಸಿಗಳಲ್ಲಿ ಸಾಲಕ್ಕೆ ಪ್ರಯತ್ನಿಸಬಹುದು. ಏಕೆಂದರೆ ಪ್ರಾಪರ್ಟಿ ವ್ಯಾಲ್ಯೂವೇಷನ್‌ ಪ್ರಮಾಣವು ಬ್ಯಾಂಕ್‌ನಿಂದ ಬ್ಯಾಂಕ್‌ಗೆ ವ್ಯತ್ಯಾಸವಾಗಿರುತ್ತದೆ.

ಇದನ್ನೂ ಓದಿ| Explainer: Land in moon- ಹೋಗಲಾಗದ ಚಂದ್ರನ ಮೇಲೆ ಜಮೀನು ಖರೀದಿ ಯಾಕೆ?

ಇನ್ನು ಬ್ಯಾಂಕುಗಳು ನಿಮಗೆ ಬೇಕಾದಷ್ಟು ಮೊತ್ತವನ್ನು ಸಾಲ ನೀಡುವುದಿಲ್ಲ. ನೀವು ಕೊಳ್ಳುವ ಮನೆ ಅಥವಾ ಅಪಾರ್ಟ್‌ಮೆಂಟ್‌ನ ಮೌಲ್ಯದ ಶೇ. 80-85ರಷ್ಟೇ ಸಾಲ ನೀಡಬಹುದು. ಉಳಿದ ಹಣವನ್ನು ನೀವೇ ಹೊಂದಿಸಿಕೊಳ್ಳಬೇಕಾಗಿರುತ್ತದೆ. ಇದೆಲ್ಲವನ್ನು ನೋಡಿಕೊಂಡೇ ನೀವು ಮನೆ ಕೊಳ್ಳುವ ನಿರ್ಧಾರವನ್ನು ಅಂತಿಮಗೊಳಿಸಿದರೆ ಯಾವುದೇ ಗೊಂದಲವಿಲ್ಲದೆ ನಿಮ್ಮ ಕನಸನ್ನು ಈಡೇರಿಸಿಕೊಳ್ಳಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

VISTARANEWS.COM


on

ಬಿಡದಿ ಟೌನ್‌ಶಿಪ್‌

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಬೃಹತ್ ಪ್ರತಿಭಟನೆ ರೈತ ಸಂಘಟನೆಗಳ ತೀರ್ಮಾನ

ಬಿಡದಿ ಟೌನ್‌ಶಿಪ್ ಯೋಜನೆಯ ಅಂತಿಮ ಅಧಿಸೂಚನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ, ಯೋಜನೆ ವಿರೋಧಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ಯೋಜನೆಗಾಗಿ ಭೂಮಿ ನೀಡದಿರಲು ರೈತರು ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದು, ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಮನಗರ ಎಪಿಎಂಸಿ ಆವರಣದ ರೈತಭವನದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಗ್ರಾಮಗಳ ರೈತರು, ಮುಖಂಡರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಿದರು.

ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಭೈರಮಂಗಲ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿಭಟನೆಯ ಮೂಲಕ ಸರ್ಕಾರದ ಗಮನ ಸೆಳೆದು ಯೋಜನೆ ವಿರುದ್ಧದ ರೈತರ ಅಸಮಾಧಾನವನ್ನು ವ್ಯಕ್ತಪಡಿಸುವ ಉದ್ದೇಶ ಹೊಂದಲಾಗಿದೆ.

ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು, ರೈತರ ಬದುಕು ಮತ್ತು ಕೃಷಿ ಭೂಮಿಗೆ ಧಕ್ಕೆ ತರುವ ಯಾವುದೇ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸರ್ಕಾರ ರೈತರ ಅಭಿಪ್ರಾಯವನ್ನು ಗೌರವಿಸಿ ಯೋಜನೆ ಕುರಿತು ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ, ರೈತರ ಹೋರಾಟಕ್ಕೆ ವಿಪಕ್ಷಗಳು ಬೆಂಬಲ ಸೂಚಿಸಿರುವುದಾಗಿ ತಿಳಿದುಬಂದಿದೆ. ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಕೂಡಾ ಪ್ರತಿಭಟನೆಗೆ ಸಾಥ್ ನೀಡಲು ಮುಂದಾಗಿವೆ ಎನ್ನಲಾಗಿದೆ.

ಜೂನ್ 22ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ರಾಜ್ಯ ಸರ್ಕಾರದ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತ ಸಂಘಟನೆಗಳು ಸಿದ್ಧತೆ ನಡೆಸಿವೆ.

Also Read: ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

VISTARANEWS.COM


on

ಸಿಎಂ ಡಿಕೆಶಿ

ಸಿಎಂ ಡಿಕೆಶಿ: ಲಂಚ ಕೇಳಿದ್ರೆ ದೂರು ನೀಡಲು ಪೋನ್ ನಂಬರ್ ಡಿಸ್ ಪ್ಲೇ

ಭ್ರಷ್ಟಾಚಾರ ಮುಕ್ತ ಸರ್ಕಾರದ ನಿರ್ಮಾಣವೇ ನನ್ನ ಮೊದಲ ಆದ್ಯತೆ” ಎಂದು ಹೇಳುವ ಮೂಲಕ ಸಿಎಂ ಡಿ.ಕೆ.ಶಿವಕುಮಾರ್‌ ಭ್ರಷ್ಟಾಚಾರದ ವಿರುದ್ಧ ತಮ್ಮ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳಲಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಸಾರ್ವಜನಿಕರಿಗೆ ಸೇವೆ ನೀಡುವ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲೂ ಲಂಚಕ್ಕೆ ಅವಕಾಶ ಇರಬಾರದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (ಡಿಸಿ) ಮತ್ತು ಸಹಾಯಕ ಆಯುಕ್ತರು (ಎಸಿ) ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಿಎಂ ಡಿಕೆಶಿ ಆಡಳಿತದ ಪಾರದರ್ಶಕತೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಮಹತ್ವದ ಸಂದೇಶ ನೀಡಿದ್ದಾರೆ.

ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಲಂಚ ಕೇಳಿದರೆ ಸಾರ್ವಜನಿಕರು ದೂರು ನೀಡಲು ಅನುಕೂಲವಾಗುವಂತೆ ಪ್ರತಿ ಸರ್ಕಾರಿ ಕಚೇರಿಯಲ್ಲಿ ದೂರು ಸಲ್ಲಿಸಲು ಅಗತ್ಯವಿರುವ ಫೋನ್ ನಂಬರ್‌ಗಳನ್ನು ಸ್ಪಷ್ಟವಾಗಿ ಪ್ರದರ್ಶಿಸುವಂತೆ ಸೂಚಿಸಿದರು.

“ನನಗೆ ಯಾವುದೇ ವೈಯಕ್ತಿಕ ನಿರೀಕ್ಷೆಗಳಿಲ್ಲ. ಜನರಿಗೆ ಸ್ವಚ್ಛ, ಪಾರದರ್ಶಕ ಮತ್ತು ಜನಸ್ನೇಹಿ ಆಡಳಿತ ನೀಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಸಿಎಂ ಹೇಳಿದರು.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೇ ತಂಡದಂತೆ ಕೆಲಸ ಮಾಡಬೇಕು. “ನಾವೆಲ್ಲ ಕರ್ನಾಟಕ ಟೀಂ ಆಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಗಳ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಸಮನ್ವಯ ಅತ್ಯಗತ್ಯ” ಎಂದು ತಿಳಿಸಿದರು.

ಇದೇ ವೇಳೆ, ರಾಜ್ಯದ ಎಲ್ಲ ಜಿಲ್ಲೆಗಳ ಸಮಸ್ಯೆಗಳನ್ನು ಆಲಿಸಲು ತಾವೇ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಸಿಎಂ ಭರವಸೆ ನೀಡಿದರು. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

Also Read: ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

VISTARANEWS.COM


on

ಜೋಸೆಫ್‌ ವಿಜಯ್‌

ಇಂದು ಮಧ್ಯಾಹ್ನ 3ಕ್ಕೆ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲಿರುವ ಜೋಸೆಫ್ ವಿಜಯ್‌

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಜಯ್‌ ಅವರು ಮೂಕಾಂಬಿಕೆ ಸನ್ನಿಧಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ. ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿಯೂ ಮೂಕಾಂಬಿಕೆ ದೇವಸ್ಥಾನಕ್ಕೆ ವಿಶೇಷ ಸ್ಥಾನಮಾನವಿದೆ. ಮಾಜಿ ಮುಖ್ಯಮಂತ್ರಿ ಎಂಜಿಆರ್‌ ತಮ್ಮ ಆಡಳಿತ ಅವಧಿಯಲ್ಲಿ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ದೇವಸ್ಥಾನದಲ್ಲಿರುವ ಸುಮಾರು 1 ಕೆ.ಜಿ. ತೂಕದ ಚಿನ್ನದ ಖಡ್ಗವನ್ನು ಎಂಜಿಆರ್‌ ದೇಣಿಗೆಯಾಗಿ ನೀಡಿದ್ದರು ಎಂಬುದು ವಿಶೇಷ.

ಎಂಜಿಆರ್‌ ಬಳಿಕ ಅವರ ರಾಜಕೀಯ ಉತ್ತರಾಧಿಕಾರಿಯಾಗಿದ್ದ ಜಯಲಲಿತಾ ಕೂಡ ಮೂಕಾಂಬಿಕೆ ದೇವಿಯ ಅಪಾರ ಭಕ್ತೆಯಾಗಿದ್ದರು. ರಾಜಕೀಯ ಹಾಗೂ ವೈಯಕ್ತಿಕ ಸವಾಲುಗಳ ಸಮಯದಲ್ಲಿ ಅವರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಆಪ್ತ ಜ್ಯೋತಿಷಿಗಳ ಸಲಹೆ ಮೇರೆಗೆ ಜಯಲಲಿತಾ ಅವರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾ ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ದರು.

ಈಗ ವಿಜಯ್‌ ಅವರ ಭೇಟಿ ಕೂಡ ಇದೇ ಪರಂಪರೆಯ ಮುಂದುವರಿಕೆಯೇ ಅಥವಾ ಕೇವಲ ವೈಯಕ್ತಿಕ ಭಕ್ತಿಯ ಅಭಿವ್ಯಕ್ತಿಯೇ ಎಂಬ ಚರ್ಚೆಗಳು ಜೋರಾಗಿವೆ. ಒಟ್ಟಾರೆ, ತಮಿಳುನಾಡು ರಾಜಕೀಯದ ಪ್ರಮುಖ ನಾಯಕರೊಂದಿಗೆ ಮೂಕಾಂಬಿಕೆ ದೇವಸ್ಥಾನದ ನಂಟು ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದೆ.

Also Read: ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

VISTARANEWS.COM


on

ನರೇಂದ್ರ ಮೋದಿ

ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಕಿಚ್ಚ.

ಸುದೀರ್ಘ ಅವಧಿಗೆ ಭಾರತದ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ಇತಿಹಾಸ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಕಿಚ್ಚ ಸುದೀಪ್ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುದೀಪ್, “12 ವರ್ಷಗಳು ಕಳೆದರೂ ಅದೇ ಉತ್ಸಾಹ, ಅದೇ ಕಾರ್ಯವೇಗ, ಕಿಂಚಿತ್ತೂ ದಣಿವೇ ಇಲ್ಲ” ಎಂದು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಜನಸೇವೆಯತ್ತ ಪ್ರಧಾನಿ ಮೋದಿ ತೋರಿರುವ ನಿರಂತರ ಬದ್ಧತೆ ಹಾಗೂ ಸಮರ್ಪಣೆಯನ್ನು ಕೊಂಡಾಡಿರುವ ಸುದೀಪ್, ಈ ಸಾಧನೆ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಅವರ ಮುಂದಿನ ದಿನಗಳಿಗೂ ಯಶಸ್ಸು, ಆರೋಗ್ಯ ಮತ್ತು ಇನ್ನಷ್ಟು ಸಾಧನೆಗಳು ತಮ್ಮದಾಗಲಿ ಎಂದು ಹಾರೈಸಿದ್ದಾರೆ.

ಭಾರತದ ಚುನಾವಣೋತ್ತರ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಸತತವಾಗಿ 4,399 ದಿನಗಳ(ಜೂನ್‌ 10ಕ್ಕೆ) ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.

ಕಿಚ್ಚ ಸುದೀಪ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದ್ದು, ಅನೇಕರು ಪ್ರಧಾನಿ ಮೋದಿ ಅವರ ಐತಿಹಾಸಿಕ ಆಡಳಿತಾವಧಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading
Advertisement
ಬಿಡದಿ ಟೌನ್‌ಶಿಪ್‌
Latest17 hours ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest18 hours ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest2 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest2 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest3 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest3 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ4 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest4 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest4 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest4 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌