Site icon Vistara News

ಭೂತಾನ್‌ನಿಂದ ಅಡಕೆ ಆಮದು; ಆತಂಕ ಬೇಡ, ಪ್ರತಿಕೂಲ ಪರಿಣಾಮವಾಗದು ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಆರಗ ಜ್ಞಾನೇಂದ್ರ

ಬೆಂಗಳೂರು: ನೆರೆಯ ದೇಶ ಭೂತಾನ್‌ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶೀಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪ್ರಸ್ತುತ ನಮ್ಮ ದೇಶದಿಂದ ಭೂತಾನ್‌ಗೆ ಸಂಸ್ಕರಿತ ಅಡಕೆ ಉತ್ಪನ್ನಗಳು ರಫ್ತು ಮಾಡಲಾಗುತ್ತಿದೆ. ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್‌ನಿಂದ ಕೇವಲ ಹಸಿ ಅಡಕೆ ಆಮದಿಗೆ ಅನುಮತಿ ನೀಡಲಾಗಿದೆ. ಭಾರತಕ್ಕೆ ಭೂತಾನ್ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೇಂದ್ರಕ್ಕೆ ನಿಯೋಗ
ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ‌ಗೃಹ ಸಚಿವ ಆರಗ ಜ್ಞಾನೇಂದ್ರ, “ಅಡಕೆ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು, ಕೇಂದ್ರ ಸರ್ಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದೇನೆ. ಭೂತಾನ್ ಅಡಕೆ ಆಮದು ವಿಚಾರವಾಗಿಯೂ ಮಾತುಕತೆ ನಡೆಸಲಾಗುವುದು. ಬೆಳೆಗಾರರಿಗೆ ಯಾವುದೇ ಗೊಂದಲ, ಆತಂಕ ಬೇಡ. ಈ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು ಲೋಕಸಭಾ ಸದಸ್ಯರೊಂದಿಗೆ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ | ಭೂತಾನ್‌ನಿಂದ ಬರಲಿದೆ ಹಸಿ ಅಡಕೆ; 17 ಸಾವಿರ ಮೆಟ್ರಿಕ್‌ ಟನ್‌ ಆಮದಿಗೆ ಮುಕ್ತ ಅವಕಾಶ ನೀಡಿದ ಕೇಂದ್ರ

Exit mobile version