Site icon Vistara News

Bike Accident: ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್‌ಗೆ ಡಿಕ್ಕಿಯಾಗಿ ಸವಾರ ಸಾವು

Home Ministers escort vehicle collides with bike, rider killed

#image_title

ಹಾಸನ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ (Bike Accident) ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ನಡೆದಿದೆ.

ಚಿಕ್ಕಗಂಡಸಿ ಗ್ರಾಮದ ರಮೇಶ್ (45) ಮೃತರು. ಮಲೆಮಹದೇಶ್ವರ ಬೆಟ್ಟದಿಂದ ಸ್ವಗ್ರಾಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೆರಳುತ್ತಿದ್ದರು. ಈ ವೇಳೆ ಗೃಹ ಸಚಿವರಿಗೆ ಎಸ್ಕಾರ್ಟ್ ಮಾಡುತ್ತಿದ್ದ ಕೆ.ಎ. 13 ಜಿ 1467 ಸಂಖ್ಯೆ ಪೊಲೀಸ್‌ ವಾಹನ ಬೈಕ್‌ಗೆ ಡಿಕ್ಕಿಯಾಗಿ ಸವಾರ ರಮೇಶ್ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Boy drowned : ಗೆಳೆಯರೊಂದಿಗೆ ವಿಕ್ಟೋರಿಯಾ ಮಹಾರಾಣಿ ಕೆರೆಗೆ ಈಜಲು ತೆರಳಿದ್ದ‌ ಬಾಲಕ ಶವವಾಗಿ ಪತ್ತೆ

ಅಪಘಾತದ ವಿಷಯ ತಿಳಿದರೂ ವಾಹನ ನಿಲ್ಲಿಸದೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತೆರಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸವಾರ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

Exit mobile version