ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಬಾರ್ (Hookah Bar) ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ, ನಿಕೋಟಿನ್ ರಹಿತ, ಸ್ವಾಧಭರಿತ, ಸ್ವಾಧರಹಿತ ಮೊಲಾಸಸ್, ಶಿಶಾ ಹಾಗೂ ಇನ್ನಿತರ ಮಾದರಿಯ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ, ಸಂಗ್ರಹಣೆಯನ್ನು ಸರ್ಕಾರ ನಿಷೇಧಿಸಿದೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಹುಕ್ಕಾ ಬಾರ್‌ಗಳನ್ನು ನಿಷೇಧಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (WHO) ನಡೆಸಿರುವ ಗ್ಲೋಬಲ್ ಅಡಲ್ಟ್ ಟೊಬ್ಯಾಕೊ ಸರ್ವೇ 2016-17 ಅಧ್ಯಯನ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು (15 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು) ಒಂದಲ್ಲ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ.
ಈ ಪೈಕಿ ಶೇ.8.8 ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ವರೋಕ್ತ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ. ಭಾರತದಲ್ಲಿ ತಂಬಾಕು ಉತ್ಪನ್ನಗಳ ಸೇವನೆ, ಮಾರಾಟ, ಜಾಹೀರಾತು, ಸಂಗ್ರಹಣೆ, ವಾಣಿಜ್ಯ ಮಹಾರ, ಉತ್ಪಾದನೆ, ಹಂಚಿಕೆ ಇವುಗಳನ್ನು ಸಿಗರೇಟ್ ಅಂಡ್ ಟೊಬ್ಯಾಕೋ ಪ್ರಾಡಕ್ಟ್ ಆಕ್ಟ್ (COTPA) 2003 ರಲ್ಲಿ ನಿಯಂತ್ರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | Congress Protest: 2ನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಕ್ಕೆ ಯಾಕೀ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ
ಅಧ್ಯಯನಗಳ ಪ್ರಕಾರ 45 ನಿಮಿಷಗಳ ಹುಕ್ಕಾ ಸೇವನೆ, 100 ಸಿಗರೇಟ್ ಸೇದುವುದಕ್ಕೆ ಸಮನಾಗಿರುತ್ತದೆ ಹಾಗೂ ಆರೋಗ್ಯಕ್ಕೆ ಮಾರಕವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, ಹುಕ್ಕಾ ಒಂದು ವ್ಯಸನಕಾರಿ ವಸ್ತುವಾಗಿದ್ದು, ಅದರಲ್ಲಿರುವ ನಿಕೋಟಿನ್ ಅಥವಾ ತಂಬಾಕು ಹಾಗೂ ಮೊಲಾಸಸ್ ಅಥವಾ ಸುವಾಸನಭರಿತ ಪದಾರ್ಥಗಳಲ್ಲಿ ಹಚ್ಚಿನ ಪುಮಾಣದಲ್ಲಿ ಕಾರ್ಬನ್ ಮಾನಾಕ್ಸೈಡ್ ರಾಸಾಯನಿಕ ವಸ್ತುವನ್ನು ಒಳಗೊಂಡಿದ್ದು, ಆರೋಗ್ಯಕ್ಕೆ ಅತ್ಯಂತ ಮಾರಕವಾಗಿದೆ.
COTPA 2003ರ ಕಾಯ್ದೆಯ ಕಲಂ 3(ಪಿ) ಶೆಡ್ಯೂಲ್‌ನಲ್ಲಿ ಹುಕ್ಕಾವನ್ನು ತಂಬಾಕು ಉತ್ಪನ್ನವೆಂದು ವರ್ಗೀಕರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರು ಅದರಲ್ಲೂ ಪ್ರಮುಖವಾಗಿ ವಿದ್ಯಾರ್ಥಿ ಸಮುದಾಯದವರು ತಂಬಾಕು ಸಹಿತ ಅಥವಾ ಹುಕ್ಕಾ ಮೊಲಾಸನ್ ಇತರ ಹೆಸರಿನಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸೇವನೆಮಾಡಿ, ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
COTPA 2003 ಸೆಕ್ಷನ್ 4ರಡಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ ಮುಂದುವರಿದು, 30 ಹಾಗೂ ಮೂವತ್ತಕ್ಕಿಂತ ಹೆಚ್ಚು, ಆಸನ ವ್ಯವಸ್ಥೆ ಇರುವ ರೆಸ್ಟೋರೆಂಟ್, ಪಬ್‌ಗಳಲ್ಲಿ ನಿಗದಿಪಡಿಸಿದ ಪ್ರತ್ಯೇಕ ಧೂಮಪಾನ ವಲಯದಲ್ಲಿ ಮಾತ್ರ ಮಾಡಬಹುದಾಗಿರುತ್ತದೆ. ಧೂಮಪಾನ ವಲಯ ಅಥವಾ ಕೊಠಡಿಯಲ್ಲಿ ಪ್ರಚೋದಿಸುವ ವಸ್ತುಗಳನ್ನು ಹಾಗೂ ಇತರ ಸೇವೆಗಳನ್ನು ನೀಡುವುದು COTPA 2003 ಕಾಯ್ದೆಯ ಸೆಕ್ಷನ್ 4ರ ಉಲ್ಲಂಘನೆಯಾಗಿರುತ್ತದೆ.
COTPA ಕಲಂ 6(a) ಮತ್ತು 6(b) ಪುಕಾರ, ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ತಂಬಾಕು ಸೇವನ ಮಾಡುವಂತೆ ಪ್ರಚೋದಿಸುವುದು ಹಾಗೂ ಶೈಕ್ಷಣಿಕ ಸಂಸ್ಥೆಯ ನೂರು ಗಜದ ವ್ಯಾಪ್ತಿಯಲ್ಲಿ ಹುಕ್ಕಾ ಒಳಗೊಂಡಂತೆ ಇತರ ತಂಬಾಕು ವಸ್ತುಗಳ ಮಾರಾಟ/ಉವಯೋಗ ನಿಷೇಧಿಸಲಾಗಿದೆ. ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದೆ 2015 ಸೆಕ್ಷನ್ 77ರ ಪುಕಾರ, ಅಪ್ರಾಪ್ತರಿಗೆ ತಂಬಾಕು ಅಥವಾ ಇತರೆ ಮಾದಕ ವಸ್ತುಗಳ ಸೇವನ ಬಗ್ಗೆ ಪ್ರಚೋದಿಸುವುದು ಹಾಗೂ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ) ನಿಯಮ 2015 ರಡಿ ನಿಕೋಟಿನ್ ಅನ್ನು ವಿಷ ಅಥವಾ ಅಪಾಯಕಾರಿ ರಾಸಾಯನಿಕ ವಸ್ತುವಾಗಿ ವರ್ಗೀಕರಿಸಲಾಗಿದೆ. ಹುಕ್ಕಾ ಮುಚ್ಚಿರುವ ಕೊಠಡಿಯಲ್ಲಿ ನಳಿಕೆ ಅಥವಾ ವೈಫ್ ಸಲಕರಣೆ ಮೂಲಕ ಬಾಯಿಯಿಂದ ಸೇವನೆ ಮಾಡುವ ಉತ್ಪನ್ನವಾಗಿರುತ್ತದೆ. ಇದರಿಂದ ಬಾಯಿ ಮೂಲಕ ಸಾಂಕ್ರಾಮಿಕ ಕಾಯಿಲೆಗಳಾದ ಹರ್ಪಿಸ್, ಕ್ಷಯರೋಗ, ಹೆಪಟೈಟಿಸ್, ಕೋವಿಡ್ 19 ಹಾಗೂ ಇತರ ಕಾಯಿಲೆಗಳು ಹರಡುವ ಆತಂಕವಿದೆ. ಹುಕ್ಕಾ ಬಾರ್ ವ್ಯವಸ್ಥೆಯು ರಾಜ್ಯ ಅಗ್ನಿ ಅನಾಹುತಗಳಿಗೆ ಕಾರಣವು ಮತ್ತು ರಾಜ್ಯ ಅಗ್ನಿ ನಿಯಂತ್ರಣ ಹಾಗೂ ಅಗ್ನಿ ಸುರಕ್ಷತೆ ಕಾಯ್ದೆ ಉಲ್ಲಂಘನೆ ಆಗುತ್ತದೆ.
ಹುಕ್ಕಾ ಬಾರ್‌ಗಳು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ, ಕಾಯಿದೆ 2006 ಹಾಗೂ 2.1.1 ಶೆಡ್ಯೂಲ್ 5ರ ನಿಬಂಧನೆಗಳ ಮೇರೆಗೆ ಪರವಾನಗಿ ಪಡೆದಿರುತ್ತವೆ. ಹೋಟೆಲ್, ಬಾರ್, ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವನೆ ಮಾಡುವುದರಿಂದ ಆಹಾರ ಪದಾರ್ಥಗಳು, ಸಾರ್ವಜನಿಕರ ಸೇವನೆಗೆ ಅಸುರಕ್ಷಿತವಾಗಿರುತ್ತದೆ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು. ಹೀಗಾಗಿ ಹುಕ್ಕಾ ಉತ್ಪನ್ನ, ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ, ವ್ಯಾಪಾರವನ್ನು ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ | Janatha Darshan: ನಾಳೆ ಸಿಎಂ ಜನತಾದರ್ಶನ; ಮಧ್ಯಾಹ್ನಕ್ಕೆ ಊಟವೂ ಇದೆ
ಇದನ್ನು ಉಲ್ಲಂಘನೆ ಮಾಡಿದವರ ವಿರುದ್ಧ COTPA 2003, ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯ್ದೆ 2015, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ) ನಿಯಮ 2015 ಮತ್ತು ಭಾರತೀಯ ದಂಡಸಂಹಿತ ಮತ್ತು ಅ ನಿಯಂತ್ರಣ ಹಾಗೂ ಅಗ್ನಿ ಸುರಕ್ಷತೆ ಕಾಯಿದ ಪ್ರಕಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.