hosakote news Girl dies after falling into silt filled Kalyani, 6-year old boy escapes unhurtHosakote News: ಹೂಳು ತುಂಬಿದ್ದ ಕಲ್ಯಾಣಿಗೆ ಬಿದ್ದು ಬಾಲಕಿ ದಾರುಣ ಸಾವು; 6 ವರ್ಷದ ಬಾಲಕ ಪಾರು - Vistara News

ಕರ್ನಾಟಕ

Hosakote News: ಹೂಳು ತುಂಬಿದ್ದ ಕಲ್ಯಾಣಿಗೆ ಬಿದ್ದು ಬಾಲಕಿ ದಾರುಣ ಸಾವು; 6 ವರ್ಷದ ಬಾಲಕ ಪಾರು

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಅಕ್ಕ-ತಮ್ಮ ಇಬ್ಬರೂ ಆಯತಪ್ಪಿ ಹೂಳು ತುಂಬಿದ್ದ ಕಲ್ಯಾಣಿಗೆ ಬಿದ್ದಿದ್ದು, ಬಾಲಕಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

ಕಲ್ಯಾಣಿಗೆ ಬಿದ್ದು ಬಾಲಕಿ ಸಾವು
ಕಲ್ಯಾಣಿಗೆ ಬಿದ್ದು ಮೃತಪಟ್ಟ ಬಾಲಕಿ ಹರ್ಷಿತಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು ಗ್ರಾಮಾಂತರ: ಹೂಳು ತುಂಬಿದ್ದ ಕಲ್ಯಾಣಿಯೊಂದಕ್ಕೆ ಬಾಲಕಿಯೊಬ್ಬಳು ಬಿದ್ದು ಮೃತಪಟ್ಟ ದಾರುಣ ಘಟನೆ ಹೊಸಕೋಟೆ (Hosakote News) ತಾಲೂಕಿನ ನಂದಗುಡಿಯಲ್ಲಿ ನಡೆದಿದೆ.‌ ಹರ್ಷಿತಾ (15) ಮೃತ ದುರ್ದೈವಿ.

ಹರ್ಷಿತಾ ತನ್ನ 6 ವರ್ಷದ ಸಹೋದರ ಅಭಿಲಾಷ್‌ ಜತೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಆಯತಪ್ಪಿ ಇಬ್ಬರೂ ಕಲ್ಯಾಣಿಗೆ ಬಿದ್ದಿದ್ದಾರೆ. ಹೂಳು ತುಂಬಿದ ಪರಿಣಾಮ ಮೇಲೆ ಬರಲು ಸಾಧ್ಯವಾಗದೇ ಇಬ್ಬರೂ ನೀರಲ್ಲಿ ಮುಳುಗಿದ್ದಾರೆ. ಕೂಡಲೇ ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಲು ಕಲ್ಯಾಣಿಗೆ ಹಾರಿದ್ದಾರೆ.

ಹೂಳು ತುಂಬಿರುವ ಕಲ್ಯಾಣಿಯಲ್ಲಿ ಬಿದ್ದು ಬಾಲಕಿ ಸಾವು

ಇಬ್ಬರನ್ನು ಮೇಲಕ್ಕೆ ಎತ್ತಿದಾಗ, ಹರ್ಷಿತಾ ಉಸಿರುಗಟ್ಟಿ ಮೃತಪಟ್ಟಿದ್ದರೆ, ಅಭಿಲಾಷ್ (6) ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಲ್ಯಾಣಿಗೆ ಬೇಲಿ ಹಾಕದೆ ನಿರ್ಲಕ್ಷ್ಯ ವಹಿಸಲಾಗಿದೆ. ನಂದಗುಡಿ ಗ್ರಾ.ಪಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿಯಾಗಿದ್ದಾಳೆಂದು ಸ್ಥಳೀಯರು ಆರೋಪಿಸಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: Crime News: ನೇಣುಕುಣಿಕೆಯಲ್ಲಿ ಶವಗಳು, ತಾಯಿ- ಮಗಳ ಅನುಮಾನಾಸ್ಪದ ಸಾವು

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Gold Rate Today: ಚಿನ್ನಾಭರಣಗಳ ಮಾರುಕಟ್ಟೆಯಲ್ಲಿ ಇಂದು ಭಾರಿ ಪ್ರಮಾಣದ ದರ ಇಳಿಕೆ ಕಂಡುಬಂದಿದೆ. ಬೆಳ್ಳಿಯ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ ಚಿನ್ನದ 10 ಗ್ರಾನ ಬೆಲೆಗಳು ಕ್ರಮವಾಗಿ ₹1000 ಹಾಗೂ ₹1090 ಇಳಿಕೆ ಆಗಿವೆ.

VISTARANEWS.COM


on

gold rate today 18
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು ಬಂಗಾರದ ಬೆಲೆ ಭಾರೀ ಇಳಿಕೆ ದಾಖಲಿಸಿದೆ. ಈ ಪ್ರಮಾಣದ ದರ ಇಳಿಕೆಗೆ ಕಾರಣ ಸ್ಪಷ್ಟವಾಗಿಲ್ಲವಾದರೂ, ಬಂಗಾರ ಕೊಳ್ಳಲು ಇಂದೇ ಸುಸಮಯವಾಗಿದೆ. 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹100 ಹಾಗೂ ₹109 ಇಳಿಕೆ ಆಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,555ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,440 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹65,550 ಮತ್ತು ₹6,65,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,151 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,208 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹71,510 ಮತ್ತು ₹7,15,100 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84, ಎಂಟು ಗ್ರಾಂ ₹672 ಮತ್ತು 10 ಗ್ರಾಂ ₹840ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ65,70071,660
ಮುಂಬಯಿ65,550 71,510
ಬೆಂಗಳೂರು65,550 71,510
ಚೆನ್ನೈ66,35072,380

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

ಕ್ರೈಂ

Hassan Pen Drive Case: ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

Hassan Pen Drive Case: ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

VISTARANEWS.COM


on

Hassan Pen Drive Case Prajwal Revanna
Koo

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka politics) ಅತೀವ ಕೋಲಾಹಲ ಸೃಷ್ಟಿಸಿರುವ ಹಾಸನದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟೀಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಹೆಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟೀಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೊಟೀಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಹಾಗೂ ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತೀಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

Continue Reading

ಮಂಡ್ಯ

Suspicious Death : ಗೃಹಿಣಿಯ ಕುತ್ತಿಗೆಯಲ್ಲಿತ್ತು ರಕ್ತ ಹೆಪ್ಪುಗಟ್ಟಿರುವ ಕಲೆ; ಈ ಸಾವು ಕೊಲೆಯೋ, ಆತ್ಮಹತ್ಯೆಯೋ

Suspicious Death : ಕೌಟುಂಬಿಕ ಕಲಹಕ್ಕೆ (Family Dispute) ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತಳ ಪೋಷಕರು ಪತಿ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

VISTARANEWS.COM


on

By

Suspicious Death in Mandya
ಮೃತ ರಮ್ಯ
Koo

ಮಂಡ್ಯ: ಮಂಡ್ಯದ (Mandya News) ನಾಗಮಂಗಲ ತಾಲೂಕಿನ ಹೊಣಕೆರೆ ಗ್ರಾಮದಲ್ಲಿ ಗೃಹಿಣಿ ಅನುಮಾನಾಸ್ಪದವಾಗಿ (Suspicious Death) ಮೃತಪಟ್ಟಿದ್ದಾರೆ. ರಮ್ಯ (28) ಮೃತ ದುರ್ದೈವಿ.

ಮೂಲತಃ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ರಮ್ಯ, 9 ವರ್ಷಗಳ ಹಿಂದೆ ಹೊಣಕೆರೆಯ ಧನಂಜಯ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು. ರಮ್ಯ-ಧನಂಜಯ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಕೌಟುಂಬಿಕ ಕಲಹಕ್ಕೆ (Family Dispute) ರಮ್ಯ ಬಲಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪತಿ ಮನೆಯವರೇ ಕೊಲೆ ಮಾಡಿದ್ದಾರೆಂದು ರಮ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ರಮ್ಯಳ ಕುತ್ತಿಗೆಯಲ್ಲಿ ರಕ್ತ ಹೆಪ್ಪುಗಟ್ಟಿರುವ ಕಲೆ ಇದ್ದು, ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಸದ್ಯ ಮೃತ ರಮ್ಯಳ ಸಹೋದರ ರವಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ರಮ್ಯಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ವರದಿ ಬಂದ ಬಳಿಕ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ತಿಳಿಯಲಿದ್ದು, ನಂತರ ತನಿಖೆಯನ್ನು ಮುಂದುವರಿಸಲಿದ್ದಾರೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ನನ್ನ ಪ್ರೇಯಸಿಗೆ ಮೆಸೇಜ್ ಮಾಡ್ತೀಯಾ ಎಂದು ಬೆರಳು ಕಟ್!

ಬೆಂಗಳೂರು: ತನ್ನ ಪ್ರಿಯತಮೆ (Lover) ಜೊತೆ ಗೆಳೆತನ‌ (Friendship) ಬೆಳೆಸಿದ್ದಕ್ಕೆ ಯುವಕನ ಮೇಲೆ ಮಾಜಿ ಪ್ರಿಯಕರ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿ (Assault Case) ಯುವಕನೊಬ್ಬನ ಬೆರಳುಗಳನ್ನೇ ಕತ್ತರಿಸಿ (Finger cut) ಹಾಕಿದ್ದಾನೆ. ಬಸವನಗುಡಿ ಬುಲ್ ಟೆಂಬಲ್ ರಸ್ತೆಯಲ್ಲಿರುವ ಪುಲ್ವಾಡಿ ಫ್ಲವರ್ ಶಾಪ್‌ನಲ್ಲಿ ಏಪ್ರಿಲ್ 28ರಂದು ರಾತ್ರಿ 8.30ಕ್ಕೆ ಈ ಘಟನೆ (Crime news) ನಡೆದಿದೆ.

ಫ್ಲವರ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಹರ್ಷಿತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಶಶಾಂಕ್ ಹಾಗೂ ಹಾಗೂ ಚಂದನ್ ಎಂಬವರು ಲಾಂಗ್‌ ಬೀಸಿದ್ದಾರೆ. ಲಾಂಗು- ಮಚ್ಚಿನಿಂದ ಹಲ್ಲೆ ನಡೆಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರೂ ಹರ್ಷಿತ್‌ನ ಬಲಗೈನ ಹೆಬ್ಬೆರಳು ಕಟ್ ಆಗಿದೆ. ಎಡಗೈನ ಮುಂಗೈಯನ್ನು ಎರಡು ತುಂಡು ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ ಹೀಗಿದೆ: ಬಿಕಾಂ ಮುಗಿಸಿದ್ದ ಹರ್ಷಿತ್ ತಂದೆಯ ಫ್ಲವರ್ ಡೆಕೊರೇಷನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅದೇ ಕಟ್ಟಡದಲ್ಲಿ ಒಂದು ಡಯೋಗ್ನಾಸ್ಟಿಕ್ ಸೆಂಟರ್ ಇದೆ. ಡಯೋಗ್ನಾಸ್ಟಿಕ್ ಸೆಂಟರ್‌ನಲ್ಲಿ ಯುವತಿ ಕೆಲಸ ಮಾಡುತ್ತಿದ್ದಳು. ಚಿಲ್ಲರೆ ಕೇಳಲು ಹೋಗಿ‌ ಬಂದಾಗ ಯುವತಿ ಮತ್ತು ಹರ್ಷಿತ್ ಮಧ್ಯೆ ಗೆಳೆತನ ಬೆಳೆದಿದೆ. ಅದೇ ಗೆಳೆತನ ನಂಬರ್ ಎಕ್ಸ್‌ಚೇಂಜ್ ಆಗಿ ಚಾಟ್ ಮಾಡುವ ಹಂತಕ್ಕೆ ಬಂದಿತ್ತು.

ಆದರೆ ಆ ಯುವತಿಯನ್ನು ಪ್ರೀತಿ ಮಾಡುತ್ತಿದ್ದ ಆರೋಪಿ ಶಶಾಂಕ್‌ಗೆ, ಇವರಿಬ್ಬರ ಮಧ್ಯೆ ಏನೋ ನಡೆಯುತ್ತಿದೆ ಅನ್ನುವ ಅನುಮಾನ ಮೂಡಿತ್ತು. ಯುವತಿಯ ಮೊಬೈಲ್ ಪರಿಶೀಲನೆ ವೇಳೆ ಚಾಟ್ ಮಾಡಿರುವುದು ಕಂಡಿದೆ. ಇದರಿಂದ ಶಶಾಂಕ್ ಕೋಪದಿಂದ ಕುದ್ದು ಹೋಗಿದ್ದ. ಕೇವಲ ಸ್ನೇಹಿತರ ನಡುವಿನ ರೀತಿಯ ಮೆಸೇಜ್‌ಗಳಿದ್ದರೂ ಕೋಪದಿಂದ ಕುರುಡಾಗಿದ್ದ ಶಶಾಂಕ್‌ ಅದನ್ನು‌ ಸಹಿಸಿಕೊಳ್ಳಲು ಸಿದ್ಧವಿರಲಿಲ್ಲ. ಹರ್ಷಿತ್‌ಗೆ ಒಂದು ಗತಿ ಕಾಣಿಸಬೇಕು ಎಂದು ನಿರ್ಧರಿಸಿದ್ದ.

ಏಪ್ರಿಲ್ 28ರಂದು ಸ್ನೇಹಿತ ಚಂದನ್‌ನನ್ನು ಕರೆಸಿಕೊಂಡಿದ್ದ. ಇಬ್ಬರೂ ಬಾರ್‌ನಲ್ಲಿ ಕುಡಿದು ಲಾಂಗ್ ಜೊತೆಗೆ ಹರ್ಷಿತ್ ಅಂಗಡಿಗೆ ಬಂದಿದ್ದಾರೆ. ಬಂದವರೇ ಹರ್ಷಿತ್ ಮೇಲೆ ಯದ್ವಾತದ್ವಾ ಲಾಂಗ್‌ ಬೀಸಿ ಪರಾರಿ ಆಗಿದ್ದಾರೆ. ಕೈಯಿಂದ ರಕ್ತ ಸೋರುತ್ತಿದ್ದರೂ‌ ಹರ್ಷಿತ್‌ ಫುಟ್‌ಪಾತ್ ಮೇಲೆ ಬಂದು ನಿಂತಿದ್ದಾನೆ. ಕೆಲವೇ ಹೊತ್ತಲ್ಲಿ ಫುಟ್‌ಪಾತ್ ರಕ್ತದ ಕೋಡಿಯಾಗಿದೆ. ತುಂಡಾದ ಬೆರಳನ್ನು ಬಟ್ಟೆಯಲ್ಲಿ ಸುತ್ತಿಕೊಂಡು ಹರ್ಷಿತ್‌ ಆಸ್ಪತ್ರೆಗೆ ಹೋಗಿದ್ದಾನೆ.

ಹರ್ಷಿತ್‌ನನ್ನು ಪಕ್ಕದಲ್ಲೇ ಇರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳನ್ನು ಶಂಕರಪುರ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿ ವಿಚಾರಿಸಿಕೊಳ್ಳುತ್ತಿದ್ದಾರೆ.

Physical Abuse: ಲೈಂಗಿಕ ಕಿರುಕುಳ, ಹೆಂಡತಿಯನ್ನು ಕಳಿಸುವಂತೆ ಗಂಡನಿಗೆ ಒತ್ತಡ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ಹೆಣ್ಮಕ್ಕಳಿಗೆ ಎಷ್ಟು ಸೇಫ್ ಎಂಬ ಪ್ರಶ್ನೆ ಮತ್ತೆ ಮತ್ತೆ ಎದುರಾಗುತ್ತಲೇ ಇದೆ. ಇಂಥ ಕರಾಳ ಪ್ರಕರಣಗಳು ಘಟಿಸುತ್ತಲೇ ಇವೆ. ನಿನ್ನೆ ರಾತ್ರಿ ಬಿಹಾರ ಮೂಲದ ದಂಪತಿಗೆ ಕರಾಳ ಅನುಭವ ಆಗಿದ್ದು, ಅದರಿಂದ ಪಾರಾಗಲು ಇಬ್ಬರೂ ಒದ್ದಾಡಿದ್ದಾರೆ.

ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಕೊಡಿಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ನಿನ್ನೆ ರಾತ್ರಿ 10:30ರ ಸುಮಾರಿಗೆ ನಡೆದ ಘಟನೆ ಇದು.

ಇದನ್ನೂ ಓದಿ: Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

ಜೊತೆಗಿದ್ದ ದಂಪತಿಯ ಬಳಿ ಬಂದ ಮೂರ್ನಾಲ್ಕು ಪುಂಡರು, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಒತ್ತಾಯ ಮಾಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ದಂಪತಿ ಬಿಹಾರ ಮೂಲದವರಾಗಿದ್ದು, ಈ ದಂಪತಿಗೆ ನಿನ್ನೆ ರಾತ್ರಿ ಕರಾಳ ಅನುಭವವಾಗಿದೆ. ಹೆಂಡತಿಯನ್ನು ಕಳಿಸುವಂತೆ ಪುಂಡರು ಗಂಡನಿಗೆ ಬೆದರಿಕೆ ಹಾಕಿದ್ದಾರೆ. ಗಂಡನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ.

ಇದರಿಂದ ಭಯಭೀತರಾದ ದಂಪತಿ ಸಹಾಯ ಕೋರಿ ಬೆಂಗಳೂರು ಪೋಲಿಸರಿಗೆ ಫೋನ್ ಮಾಡಿದರೂ ಸರಿಯಾದ ರೆಸ್ಪಾನ್ಸ್ ಸಿಕ್ಕಿಲ್ಲ. ಕಿರುಕುಳದ ಬಗ್ಗೆ ಬೆಂಗಳೂರು ಪೋಲಿಸ್ ಸಹಾಯವಾಣಿಗೆ ಕರೆ ಮಾಡಿದ್ದರು. ಬೆಂಗಳೂರು ಪೋಲಿಸರು ಸ್ಪಂದಿಸದಿದ್ದುದರಿಂದ ಬಿಹಾರ ಪೋಲಿಸರಿಗೆ ದಂಪತಿ ಫೋನ್ ಮಾಡಿದ್ದಾರೆ. ಕೊಡಿಗೆಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru Weather: ಬೆಂಗಳೂರು ಈಗ ʼಹಾಟ್‌ʼಸ್ಪಾಟ್‌; 1983ರ ನಂತರ ಮೊದಲ ಬಾರಿ ಏಪ್ರಿಲ್‌ನಲ್ಲಿ ಶೂನ್ಯ ಮಳೆ

Bengaluru Weather: ಬೆಂಗಳೂರಿನಲ್ಲಿ ಬಿಸಿಲಿನ‍ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಚ್ಚರಿ ಎಂದರೆ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯೇ ಆಗಿಲ್ಲ. ಈ ರೀತಿಯ ಪರಿಸ್ಥಿತಿ 1983ರ ನಂತರ ಕಂಡುಬರುತ್ತಿರುವುದು ಇದು ಮೊದಲ ಬಾರಿ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ಕಾರಣಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದೆ. ಈ ಮಧ್ಯೆ ʼʼಮಳೆಗಾಲಕ್ಕೆ ಮುಂಚಿತವಾಗಿ ಎಲ್ ನಿನೊ ಸ್ಥಿತಿಯು ತಟಸ್ಥ ಅಥವಾ ಶೂನ್ಯಕ್ಕೆ ಬದಲಾಗುತ್ತದೆ ಎನ್ನುವ ನಿರೀಕ್ಷೆ ಇದೆ. ಇದು ಉತ್ತಮ ಮಾನ್ಸೂನ್‌ಗೆ ಅನುಕೂಲ ಒದಗಿಸಲಿದೆ. ಈ ಮಳೆಗಾಲದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ” ಎಂದು ವಿಜ್ಞಾನಿಗಳು ತಿಳಿಸಿದ್ದು ಕೊಂಚ ಮಟ್ಟಿನ ನೆಮ್ಮದಿ ನೀಡಿದೆ.

VISTARANEWS.COM


on

Bengaluru Weather
Koo

ಬೆಂಗಳೂರು: ಬೆಂಗಳೂರು ಅಕ್ಷರಶಃ ʼಬೆಂದʼಕಾಳೂರು ಆಗಿದೆ. ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಹನಿ ಮಳೆಗಾಗಿ ಆಗಸದತ್ತ ಮುಖ ಮಾಡುವಂತಾಗಿದೆ. ಅಚ್ಚರಿ ಎಂದರೆ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯೇ ಆಗಿಲ್ಲ (Bengaluru Weather). ಈ ರೀತಿಯ ಪರಿಸ್ಥಿತಿ 1983ರ ನಂತರ ಕಂಡುಬರುತ್ತಿರುವುದು ಇದು ಮೊದಲ ಬಾರಿ ಎಂದು ಭಾರತೀಯ ಹವಾಮಾನ ಇಲಾಖೆ (Meteorological Department) ತಿಳಿಸಿದೆ.

ಈ ಬಗ್ಗೆ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಪ್ರಸಾದ್‌ ಮಾತನಾಡಿ, ʼʼಈ ಏಪ್ರಿಲ್‌ 41 ವರ್ಷಗಳಲ್ಲೇ ಅತ್ಯಂತ ಶುಷ್ಕವಾಗಿತ್ತು. 1983ರ ಬಳಿಕ ಈ ವರ್ಷ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯೇ ಆಗಿಲ್ಲʼʼ ಎಂದು ತಿಳಿಸಿದ್ದಾರೆ. ʼʼಮಳೆಗಾಲಕ್ಕೆ ಮುಂಚಿತವಾಗಿ ಎಲ್ ನಿನೊ ಸ್ಥಿತಿಯು ತಟಸ್ಥ ಅಥವಾ ಶೂನ್ಯಕ್ಕೆ ಬದಲಾಗುತ್ತದೆ ಎನ್ನುವ ನಿರೀಕ್ಷೆ ಇದೆ. ಇದು ಉತ್ತಮ ಮಾನ್ಸೂನ್‌ಗೆ ಅನುಕೂಲ ಒದಗಿಸಲಿದೆ. ಈ ಮಳೆಗಾಲದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ” ಎಂದು ಅವರು ವಿವರಿಸಿದ್ದಾರೆ.

ಅಂಕಿ-ಅಂಶ ಏನು ಹೇಳುತ್ತದೆ?

ಕೊನೆಯದಾಗಿ 2023ರ ನವೆಂಬರ್‌ನಲ್ಲಿ ಮಳೆಯಾಗಿತ್ತು ಎಂದು ಬೆಂಗಳೂರು ಐಎಂಡಿ ಹೇಳಿದೆ. ಅಂದು ಸುಮಾರು 106.6 ಮಿ.ಮೀ. ಮಳೆಯಾಗಿತ್ತು. ಅಂದಿನಿಂದ ಅಲ್ಪ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಧಾರಾಕಾರವಾಗಿ ಸುರಿದಿಲ್ಲ. ಡಿಸೆಂಬರ್ 0.7 ಮಿ.ಮೀ., 2024ರ ಜನವರಿಯಲ್ಲಿ 2 ಮಿ.ಮೀ. ಮಳೆಯಾಗಿತ್ತು. ಇನ್ನು ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಒಂದು ಹನಿ ಮಳೆಯೂ ಸುರಿದಿಲ್ಲ ಎಂದು ಅಂಕಿ-ಅಂಶ ಹೇಳಿದೆ. ಏಪ್ರಿಲ್ 19 ಮತ್ತು 20ರಂದು ಕೆಲವು ಪ್ರದೇಶಗಳಲ್ಲಿ ಮಳೆಯಾಗಿದ್ದರೂ ಅದು ಗಮನಾರ್ಹವಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಐಎಂಡಿ ಪ್ರಕಾರ, ಮೇ ಎರಡನೇ ವಾರದಿಂದ ಗುಡುಗು ಸಹಿತ ಸಂಜೆ ಮಳೆಯಾಗುವ ಸಾಧ್ಯತೆಯಿದೆ.

ಸಮುದ್ರ ಮಟ್ಟದಿಂದ 3,000ಕ್ಕೂ ಹೆಚ್ಚು ಅಡಿ ಎತ್ತರದಲ್ಲಿರುವ ಬೆಂಗಳೂರು ಆಹ್ಲಾದಕರ ಹವಾಮಾನವನ್ನು ಹೊಂದಿದೆ. ಹೀಗಾಗಿ ಇದು ಪ್ರಪಂಚದಾದ್ಯಂತದ ಯುವ, ಪ್ರತಿಭಾವಂತ ಉದ್ಯೋಗಿಗಳನ್ನು ಆಕರ್ಷಿಸುತ್ತದೆ. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಬೇಸಿಗೆಯ ಬಿಸಿ ಕಠಿಣವಾಗಿದೆ. ಕೊಳವೆಬಾವಿಗಳು ಒಣಗುತ್ತಿವೆ. ಜತೆಗೆ ಕೆಲವು ಕಡೆಗಳಲ್ಲಿ ನೀರಿಗಾಗಿ ಹಾಹಾಕಾರ ಮುಂದುವರಿದಿದೆ.

ಏಪ್ರಿಲ್‌ 28ರಂದು ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 38.5 ಡಿಗ್ರಿ ಸಿಲ್ಸಿಯಸ್‌ ದಾಖಲಾಗಿತ್ತು. ಈ ಮೂಲಕ ಎರಡನೇ ಅತ್ಯಂತ ಬೆಚ್ಚಗಿನ ಎಪ್ರಿಲ್‌ನ ದಿನ ಎನಿಸಿಕೊಂಡಿತ್ತು. ಈ ಹಿಂದೆ 2016ರ ಏಪ್ರಿಲ್‌ 25ರಂದು 39.2 ಡಿಗ್ರಿ ಸಿಲ್ಸಿಯಸ್‌ ದಾಖಲಾಗಿದ್ದು ಇದುವರೆಗಿನ ಏಪ್ರಿಲ್‌ನ ಗರಿಷ್ಠ ಉಷ್ಣಾಂಶ.

ಇದನ್ನೂ ಓದಿ: Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

ದೇಶದಲ್ಲೂ ಇದೇ ರೀತಿಯ ಪರಿಸ್ಥಿತಿ ಇದೆ. ದಿನದಿಂದ ದಿನಕ್ಕೆ ವಾತಾವರಣದ ಬಿಸಿ ಏರಿಕೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ. ದೇಶದ ಹೆಚ್ಚಿನ ಭಾಗಗಳು ಉಷ್ಣಗಾಳಿಯ ಹೊಡೆತಕ್ಕೆ ಸಿಲುಕಿ ತತ್ತರಿಸಿವೆ. 1901ರ ಬಳಿಕ ರಾತ್ರಿ ತಾಪಮಾನದ ದೃಷ್ಟಿಯಿಂದ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಇದು ಅತ್ಯಂತ ಬೆಚ್ಚಗಿನ ಏಪ್ರಿಲ್ ಎನಿಸಿಕೊಂಡಿದೆ. ಜತೆಗೆ ಮೂರನೇ ಅತಿ ಹೆಚ್ಚಿನ ಸರಾಸರಿ ತಾಪಮಾನವಾಗಿದೆ. ಹವಾಮಾನ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಗರಿಷ್ಠ, ಕನಿಷ್ಠ ಮತ್ತು ಸರಾಸರಿ ತಾಪಮಾನದ ದೃಷ್ಟಿಯಿಂದ ಇದು ದೇಶದ ಎರಡನೇ ಅತಿ ಹೆಚ್ಚು ಬೆಚ್ಚಗಿನ ಏಪ್ರಿಲ್ ಆಗಿದೆ. ಎಲ್ ನಿನೊ ಮತ್ತು ಹವಾಮಾನ ಬದಲಾವಣೆ ಇದಕ್ಕೆ ಕಾರಣ ಎಂದು ತಜ್ಞರು ತಿಳಿಸಿದ್ದಾರೆ.

Continue Reading
Advertisement
gold rate today 18
ಚಿನ್ನದ ದರ16 mins ago

Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Delhi Congress
ರಾಜಕೀಯ20 mins ago

Delhi Congress: ದಿಲ್ಲಿ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಪಕ್ಷಕ್ಕೆ ಗುಡ್‌ಬೈ ಹೇಳಿದ ಮಾಜಿ ಶಾಸಕರು

Duniya Vijay Visited Kolluru Shri Mookambika Devi Temple
ಸಿನಿಮಾ22 mins ago

Duniya Vijay: ಕೊಲ್ಲೂರಿನಲ್ಲಿ ʼಸ್ಯಾಂಡಲ್‌ವುಡ್‌ ಸಲಗʼವನ್ನು ಮುತ್ತಿಕೊಂಡ ಅಭಿಮಾನಿಗಳು!

Vettaiyan Movie Anirudh Ravichander to make a special appearance in Rajinikanth
ಕಾಲಿವುಡ್31 mins ago

Vettaiyan Movie: ರಜನಿಕಾಂತ್ ಸಿನಿಮಾದಲ್ಲಿ ಅನಿರುದ್ಧ್ ರವಿಚಂದರ್; ಲೀಕ್‌ ಆಯ್ತು ಫೋಟೊ!

Divorce Case
ಕ್ರೈಂ56 mins ago

Divorce Case: ಪತಿ, ಕುಟುಂಬದ ವಿರುದ್ಧದ ಸುಳ್ಳು ಕೇಸು ಕ್ರೌರ್ಯಕ್ಕೆ ಸಮಾನ; ಬಾಂಬೆ ಹೈಕೋರ್ಟ್

Hassan Pen Drive Case Prajwal Revanna
ಕ್ರೈಂ59 mins ago

Hassan Pen Drive Case: ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

Mokshita Pai realistic morning routine With special Child brother
ಕಿರುತೆರೆ1 hour ago

Mokshitha Pai: ವಿಶೇಷ ಚೇತನ ತಮ್ಮನನ್ನು ಅಮ್ಮನಂತೆ ಆರೈಕೆ ಮಾಡುತ್ತಿರುವ ʻಪಾರುʼ

Suspicious Death in Mandya
ಮಂಡ್ಯ1 hour ago

Suspicious Death : ಗೃಹಿಣಿಯ ಕುತ್ತಿಗೆಯಲ್ಲಿತ್ತು ರಕ್ತ ಹೆಪ್ಪುಗಟ್ಟಿರುವ ಕಲೆ; ಈ ಸಾವು ಕೊಲೆಯೋ, ಆತ್ಮಹತ್ಯೆಯೋ

Viral News
ವೈರಲ್ ನ್ಯೂಸ್1 hour ago

‍Viral News: ಚಂದದ ಪ್ರೊಫೈಲ್‌ ಫೋಟೋಗೆ ಫಿದಾ ಆಗಿದ್ದವನಿಗೆ ಕಾದಿತ್ತು ಶಾಕ್‌; ಮುಂದೆ ನಡೆದಿದ್ದೇ ಬೇರೆ!

Bengaluru Weather
ಕರ್ನಾಟಕ1 hour ago

Bengaluru Weather: ಬೆಂಗಳೂರು ಈಗ ʼಹಾಟ್‌ʼಸ್ಪಾಟ್‌; 1983ರ ನಂತರ ಮೊದಲ ಬಾರಿ ಏಪ್ರಿಲ್‌ನಲ್ಲಿ ಶೂನ್ಯ ಮಳೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌