ಬೆಳಗಾವಿ: ಗುಣಮಟ್ಟದ ಆಹಾರ ಪೂರೈಸದ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಿಲ್ಲೆಯ ರಾಮದುರ್ಗ ಪಟ್ಟಣದ ಆಂಜನೇಯ ನಗರದ ಹಾಸ್ಟೆಲ್ ವಿದ್ಯಾರ್ಥಿಗಳು, ತಹಸೀಲ್ದಾರ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ರಾಮದುರ್ಗ ತಹಸೀಲ್ದಾರ್ ಕಚೇರಿ ಎದುರು ಜಮಾಯಿಸಿದ ಮೆಟ್ರಿಕ್ ನಂತರದ ಎಸ್‌ಸಿ, ಎಸ್‌ಟಿ ಹಾಸ್ಟೆಲ್ ವಿದ್ಯಾರ್ಥಿಗಳು, ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ಪೂರೈಸಲಾಗುತ್ತಿದೆ. ಆಹಾರ ತಯಾರಿಕೆಯಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ, ಇದರಿಂದ ಜಿರಳೆ ಮಿಶ್ರಿತ, ಹಳಸಿದ ಅನ್ನ, ಅರೆಬೆಂದ ಚಪಾತಿ ತಿನ್ನುವಂತಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಹಾಸ್ಟೆಲ್‌ನಲ್ಲಿ ತಯಾರಿಸಿದ್ದ ಅರೆಬೆಂದ ಚಪಾತಿ, ಜಿರಳೆ ಮಿಶ್ರಿತ ಇತರ ತಿಂಡಿ ಪಾತ್ರೆಗಳ ಸಮೇತ ಪ್ರತಿಭಟಿಸಿದ ವಿದ್ಯಾರ್ಥಿಗಳು, ಗುಣಮಟ್ಟದ ಆಹಾರ ಪೂರೈಸದ ಹಾಸ್ಟೆಲ್ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ, ಸಮಸ್ಯೆ ಸರಿಪಡಿಸುವಂತೆ ತಹಸೀಲ್ದಾರ್‌ಗೆ ಒತ್ತಾಯಿಸಿದರು.
ಇದನ್ನೂ ಓದಿ | ʼಆಸರೆ ಮನೆಗಳು ಪಾಳು ಬಿದ್ದಿವೆʼ: ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ