Site icon Vistara News

ಬೆಂಗಳೂರಿನಲ್ಲಿ ಮಧ್ಯ ರಾತ್ರಿ 1 ಗಂಟೆವರೆಗೂ ಹೋಟೆಲ್‌ಗಳನ್ನು ತೆರೆಯಲು ಅನುಮತಿ

ಹೋಟೆಲ್‌ಗಳನ್ನು

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಿಂಡಿ-ತಿನಿಸುಗಳನ್ನು ಒದಗಿಸುವ ಹೋಟೆಲ್‌ಗಳಲ್ಲಿ ಪ್ರತಿ ನಿತ್ಯ ಬೆಳಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆವರೆಗೂ ತಿಂಡಿ ತಿನಿಸು ಮಾರಾಟಕ್ಕೆ ಅನುಮತಿ ನೀಡಿ ಬೆಂಗಳೂರು ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಮಧ್ಯರಾತ್ರಿ 1 ಗಂಟೆವರೆಗೆ ಹೋಟೆಲ್‌ಗಳನ್ನು ತೆರೆಯಲು ಅನುಮತಿ ಇದ್ದರೂ ರಾತ್ರಿ 11 ಗಂಟೆಗೆ ಪೊಲೀಸ್ ಸಿಬ್ಬಂದಿ ಹೋಟೆಲ್‌ಗಳನ್ನು ಬಂದ್‌ ಮಾಡಿಸುತ್ತಿರುವ ಬಗ್ಗೆ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘದಿಂದ ಪೊಲೀಸ್‌ ಆಯುಕ್ತರಿಗೆ ದೂರು ನೀಡಲಾಗಿತ್ತು. ಈ ಬಗ್ಗೆ ಪರಿಶೀಲಿಸಿರುವ ಆಯುಕ್ತರು, ಸಾರ್ವಜನಿಕ ಸ್ಥಳಗಳಲ್ಲಿ ತಿಂಡಿ-ತಿನಿಸುಗಳನ್ನು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಪ್ರತಿ ನಿತ್ಯ ಬೆಳಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆವರೆಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಿ ಆದೇಶ ಹೊರಡಿಸಿದ್ದು, ಈ ಸಂಬಂಧ ವಿಭಾಗೀಯ ಉಪ ಪೊಲೀಸ್‌ ಆಯುಕ್ತರು, ತಮ್ಮ ಅಧೀನದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ | ಉತ್ತಮ ಫೋಟೊಗೆ ಕ್ಯಾಮೆರಾಗಿಂತ ಹೃದಯ, ಮನಸ್ಸು ಮುಖ್ಯ: ನಟ ರಮೇಶ್ ಅರವಿಂದ್

Exit mobile version