ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಲಗೆರೆ ಗ್ರಾಮದಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ (Housewife death) ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದೊಂದು ಕೊಲೆ, ಗಂಡನೇ ಕೊಲೆ ಮಾಡಿದ್ದಾನೆ ಎಂದು ಆಕೆಯ ತವರು ಮನೆಯವರು ಆರೋಪಿಸಿದ್ದಾರೆ.
ಕತ್ತಲಗೆರೆಯ ಅನಿತಾ (28) ಎಂಬ ಮಹಿಳೆಯೇ ಮೃತಪಟ್ಟವರು. ಆಕೆಯನ್ನು ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ. ಆಕೆಯ ಗಂಡ ಅಶೋಕನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಕತ್ತಲಗೆರೆಯ ಅಶೋಕ್ ಹಾಗೂ ಅನಿತಾ ಅವರಿಗೆ ಐದು ವರ್ಷಗಳ ಹಿಂದೆ ವಿವಾಹವಾಗಿತ್ತು. ಮದುವೆಯಾದಾಗಿನಿಂದಲೇ ಅನಿತಾ ಅವರಿಗೆ ವರದಕ್ಷಿಣೆ ಕಿರುಕುಳ ನೀಡಲಾಗುತ್ತಿತ್ತು ಎಂದು ಮನೆಯವರು ಆರೋಪಿಸಿದ್ದಾರೆ.
ಇದಲ್ಲದೆ, ಅಶೋಕ್ಗೆ ಬೇರೆ ಯುವತಿ ಜೊತೆ ಅನೈತಿಕ ಸಂಬಂಧವಿತ್ತು ಎಂದೂ ಆರೋಪಿಸಿರುವ ಮನೆಯವರು, ಇದೆಲ್ಲವೂ ಸೇರಿ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಅನಿತಾ ಮತ್ತು ಅಶೋಕ್ ದಂಪತಿಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಅನಿತಾ ಸಾವು ಸಂಭವಿಸುತ್ತಿದ್ದಂತೆಯೇ ಗಂಡ ಅಶೋಕ ಮತ್ತು ಮನೆಯವರು ತಲೆಮರೆಸಿಕೊಂಡಿದ್ದಾರೆ. ಬಸವ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೆಂಟೋ- ಟಾಟಾ ಏಸ್ ನಡುವೆ ಅಪಘಾತ: ಸ್ಥಳದಲ್ಲೇ ಸಾವು
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಖೀಣ ಕೋಣನಬಿಡ್ಕಿ ಬಳಿ ಟೆಂಪೋ ಹಾಗೂ ಟಾಟಾ ಏಸ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟಾಟಾ ಏಸ್ ವಾಹನದ ಚಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಟಾಟಾ ಏಸ್ ಚಲಾಯಿಸುತ್ತಿದ್ದ ಇಸ್ಮಾಯಿಲ್ ರಾಮನಬೈಲ್ ಅವರು ಮೃತಪಟ್ಟವರು. ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ಪೆಕ್ಟರ್ ಸೀತಾರಾಮ ಪಿ ಅವರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Road Accident: ಮುಳ್ಳಯ್ಯನಗಿರಿ ಬಳಿ 100 ಅಡಿ ಕೆಳಗೆ ಬಿದ್ದ ಕಾರು; ನಾಲ್ವರು ಗಂಭೀರ