Fraud Case : 800 ಕೋಟಿ ರೂ. ವಂಚನೆಯ ʼಆಯುರ್ವೇದʼ ಚೈನ್‌ಲಿಂಕ್ ದೋಖಾ‌ ನಡೆದಿದ್ದು ಹೀಗೆ! - Vistara News

ಕರ್ನಾಟಕ

Fraud Case : 800 ಕೋಟಿ ರೂ. ವಂಚನೆಯ ʼಆಯುರ್ವೇದʼ ಚೈನ್‌ಲಿಂಕ್ ದೋಖಾ‌ ನಡೆದಿದ್ದು ಹೀಗೆ!

Fraud Case : “ವೇದಿಕ್ ಆಯುರ್ ಕ್ಯೂರ್ ಹೆಲ್ತ್ ಆ್ಯಂಡ್ ರಿಟೇಲ್ಸ್‌ ಪ್ರೈವೇಟ್‌ ಲಿಮಿಟೆಡ್‌”, “ಕಾರ್ಪ್‌ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಕಂಪನಿ” ಹಾಗೂ “ಇ ಸ್ಟೋರ್ ಇಂಡಿಯಾ ಸೂಪರ್ ಮಾರ್ಕೆಟ್ ಸ್ಟೋರ್ ಫ್ರಾಂಚೈಸಿ” ಹೆಸರಿನಲ್ಲಿ ಈ ಮಹಾ ವಂಚನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಕಂಪನಿ ಇದಾಗಿದ್ದು, ಆಯರ್ವೇದಿಕ್‌ ಉತ್ಪನ್ನ (Ayurvedic Product), ಉದ್ಯಮದ ಹೆಸರಿನಲ್ಲಿ ಜನರನ್ನು ನಂಬಿಸಿ ವಂಚನೆ ಮಾಡಲಾಗಿದೆ. ಈ ಮೋಸದ ಜಾಲ ಹೇಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

Fraud Case in Karnataka in the name of ayurcareindia
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ (Fraud Case) ಬೆಳಕಿಗೆ ಬಂದಿದೆ. ಫ್ರಾಂಚೈಸಿ ಮತ್ತು ಬ್ಯುಸಿನೆಸ್ (Franchise and Business) ಹೆಸರಿನಲ್ಲಿ ಕೋಟಿ ಕೋಟಿ ಹಣವನ್ನು ಲೂಟಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದು ಮತ್ತೊಂದು ಐಎಂಐ ಪ್ರಕರಣ (IMA Case) ಎಂದೇ ಹೇಳಲಾಗುತ್ತಿದ್ದು, ಚೈನ್‌ಲಿಂಕ್‌ (Chain Link Business) ಮೂಲಕ ಸುಮಾರು 800 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಲಾಗಿದೆ ಎಂಬ ಸಂಗತಿ ಬಯಲಾಗಿದೆ. ವೇದಿಕ್ ಆಯುರ್ ಕ್ಯೂರ್ ಹೆಲ್ತ್ ಆ್ಯಂಡ್ ರಿಟೇಲ್ಸ್‌ ಪ್ರೈವೇಟ್‌ ಲಿಮಿಟೆಡ್‌ ಹೆಸರಿನಲ್ಲಿ ಈ ಮಹಾ ಮೋಸ ನಡೆದಿದೆ.

“ವೇದಿಕ್ ಆಯುರ್ ಕ್ಯೂರ್ ಹೆಲ್ತ್ ಆ್ಯಂಡ್ ರಿಟೇಲ್ಸ್‌ ಪ್ರೈವೇಟ್‌ ಲಿಮಿಟೆಡ್‌”, “ಕಾರ್ಪ್‌ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಕಂಪನಿ” ಹಾಗೂ “ಇ ಸ್ಟೋರ್ ಇಂಡಿಯಾ ಸೂಪರ್ ಮಾರ್ಕೆಟ್ ಸ್ಟೋರ್ ಫ್ರಾಂಚೈಸಿ” ಹೆಸರಿನಲ್ಲಿ ಈ ಮಹಾ ವಂಚನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಕಂಪನಿ ಇದಾಗಿದ್ದು, ಆಯರ್ವೇದಿಕ್‌ ಉತ್ಪನ್ನ (Ayurvedic Product), ಉದ್ಯಮದ ಹೆಸರಿನಲ್ಲಿ ಜನರನ್ನು ನಂಬಿಸಿ ವಂಚನೆ ಮಾಡಲಾಗಿದೆ.

Fraud Case in Karnataka in the name of ayurcareindia
Fraud Case in Karnataka in the name of ayurcareindia

ಹೇಗೆ ನಡೆದಿದೆ ಮಹಾ ಮೋಸ?

ಇದು ಸಣ್ಣ ಹೂಡಿಕೆಯಿಂದ ದೊಡ್ಡ ಹೂಡಿಕೆಯತ್ತ ಕೊಂಡೊಯ್ದು ವಂಚನೆ ಮಾಡಿದ ಪ್ರಕರಣವಾಗಿದೆ. ಮೊದಲು ಸಣ್ಣ ಮೊತ್ತವನ್ನು ಕಟ್ಟಿಸಿಕೊಂಡು ಕಂಪನಿ ಪ್ರಾಡಕ್ಟ್‌ ಅನ್ನು ಕೊಟ್ಟು ವಿಶ್ವಾಸ ಗಳಿಸಲಾಗಿದೆ. ಅದಾದ ಬಳಿಕ ಒಂದೊಂದೇ ಸ್ಕೀಂಗಳನ್ನು ತಂದು ವಂಚನೆ ಎಂಬ ಮಹಾ ಸ್ಕೀಂ ಒಳಗೆ ಬೀಳಿಸಲಾಗಿದೆ.

ಇದನ್ನೂ ಓದಿ: Free Bus Service : ಶಕ್ತಿ ಯೋಜನೆಯಿಂದ ದೇವರೂ ಶ್ರೀಮಂತರಾದರು; ಪುಣ್ಯಕ್ಷೇತ್ರಗಳಲ್ಲಿ ಹೆಚ್ಚಿದ ಆದಾಯ

Fraud Case in Karnataka in the name of ayurcareindia

ಕೇಂದ್ರ ಸರ್ಕಾರದ ಮಾನ್ಯತೆ!

ವೇದಿಕ್ ಆಯುರ್ ಕ್ಯೂರ್ ಹೆಲ್ತ್ ಆ್ಯಂಡ್ ರಿಟೇಲ್ ಪ್ರೈವೇಟ್ ಲಿಮಿಟೆಡ್ ಎಂಬ ‌ಕಂಪನಿಯು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವಂತಹ ಡೈರೆಕ್ಟ್ ಸೆಲ್ಲಿಂಗ್ ಕಂಪನಿ ಆಗಿದೆ‌ ಎಂದು ಹೇಳಿ ನಂಬಿಸಿದ್ದಾರೆ. ಹೀಗೆ ಹೇಳಿ ಜನರಿಂದ 3000/-, 6000/- 9000/- 12000/- ಗಳ ಪ್ರಾಡಕ್ಟ್ ಪ್ಯಾಕೇ‌ಜ್‌ಗಳನ್ನೂ ಕೊಡಲಾಗಿದೆ. ಈ ಹಣದ ಬದಲಾಗಿ ಕಂಪನಿಯ ಆಯುರ್ವೇದಿಕ್ ಉತ್ಪನ್ನಗಳ ಜತೆಗೆ ಹಣ ಕಟ್ಟಿರುವಂತಹ ಸದಸ್ಯರು ಕಂಪನಿಯ ಜಾಹೀರಾತು ಬೋರ್ಡ್ ಹಾಕಿದರೆ 24 ಹಾಗೂ 36 ತಿಂಗಳುಗಳವರೆಗೆ ಬೋರ್ಡ್ ರೆಂಟ್ ಆದಾಯ ಕೊಡುವುದಾಗಿ ಹೇಳಿ ಗ್ರಾಹಕರಿಂದ ಹೆಚ್ಚುವರಿ ಹಣವನ್ನು ಕಟ್ಟಿಸಿಕೊಂಡಿತ್ತು.

ಹಾಗೆ ತಮ್ಮ ಕಂಪನಿಯ “ಆಯುರ್ವೇದಿಕ್ ಉತ್ಪನ್ನಗಳ ಫ್ರಾಂಚೈಸಿ”ಗಳನ್ನೂ ತೆಗೆದುಕೊಳ್ಳಲು 1.25 ಲಕ್ಷ, 1.5 ಲಕ್ಷ, 3 ಲಕ್ಷ, 5 ಲಕ್ಷ, 11 ಲಕ್ಷ ರೂಪಾಯಿಗಳಂತೆ ಜನರಿಂದ ಹಣ ಕಟ್ಟಿಸಿಕೊಂಡು 24 ತಿಂಗಳು, 30 ತಿಂಗಳು, 36 ತಿಂಗಳುಗಳವರೆಗೆ ಪ್ರತಿ ತಿಂಗಳು ದುಪ್ಪಟ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಲಾಗಿತ್ತು,

ಹಾಗೆಯೇ ಆ್ಯಕ್ಸಿಸ್ ಇ ಕಾರ್ಪ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಅಡಿಯಲ್ಲಿ “ಈ ಸ್ಟೋರ್ ಇಂಡಿಯಾ” ಹೆಸರಿನಲ್ಲಿ ಸೂಪರ್ ಮಾರ್ಕೆಟ್ ಸ್ಟೋರ್ಸ್ ಫ್ರಾಂಚೈಸಿ ತೆಗೆದುಕೊಳ್ಳಲು 25 ಲಕ್ಷ ದಿಂದ 1 ಕೋಟಿ ರೂಪಾಯಿವರೆಗೆ ಹಣವನ್ನು ಹೂಡಿಕೆ ಮಾಡಿಸಿಕೊಳ್ಳಲಾಗಿದೆ. ಮೂಲ ಹೂಡಿಕೆಯ ಮೇಲೆ 2% ಬಡ್ಡಿ ಸೇರಿಸಿ 35 ತಿಂಗಳುಗಳಲ್ಲಿ ಪ್ರತಿ ತಿಂಗಳು ಕಂತುಗಳ ರೂಪದಲ್ಲಿ ಸಂಪೂರ್ಣ ಹೂಡಿಕೆಯನ್ನು ಮರುಪಾವತಿ ಮಾಡುವುದರ ಜತೆಗೆ ಸೂಪರ್ ಮಾರ್ಕೆಟ್ ಸ್ಟೋರ್‌ನ ಪ್ರತಿ ತಿಂಗಳ ವಹಿವಾಟಿನ ಮೇಲೆ 5% ಲಾಭಾಂಶವನ್ನು ಸೇರಿಸಿ ಫ್ರಾಂಚೈಸಿ ತೆಗೆದುಕೊಂಡಿರುವ ವ್ಯಕ್ತಿಯ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು ವರ್ಗಾಯಿಸುವುದಾಗಿ ಕರಾರು ಪತ್ರಗಳನ್ನು ಮಾಡಿಕೊಡಲಾಗಿದೆ. ಕರ್ನಾಟಕದ ಹಲವಾರು ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕಂಪನಿಯ ಸೂಪರ್ ಮಾರ್ಕೆಟ್ ಸ್ಟೋರ್‌ ಅನ್ನು ಸಹ ಇಡಲಾಗಿದೆ.

ಮುಖ್ಯ ಕಚೇರಿ ಕ್ಲೋಸ್‌!

ಹೀಗೆ ಮೊದಲಿಗೆ ಹಣ ಮರುಪಾವತಿ ಹಾಗೂ ಲಾಭಾಂಶವನ್ನು ಕೊಡುತ್ತಾ ಬಂದಿದ್ದು, ಜನರ ವಿಶ್ವಾಸ ಹೆಚ್ಚಾಗಿ ಹೂಡಿಕೆಯೂ ಹೆಚ್ಚಾಗಿದೆ. ಇದರಿಂದ ಕಳೆದ 10 ತಿಂಗಳಿಂದ ಯಾವುದೇ ರೀತಿಯ ಹಣ ಮರುಪಾವತಿ ಮಾಡದೆ, ಕರ್ನಾಟಕದಾದಂತ್ಯ ಸಾವಿರಾರು ಜನರಿಗೆ ವಂಚಿಸಿದ್ದಾರೆ. ಜತೆಗೆ ಉತ್ತರ ಪ್ರದೇಶದ ನೊಯ್ಡಾದಲ್ಲಿರುವ ಮುಖ್ಯ ಆಡಳಿತ ಕಚೇರಿಯನ್ನು ಮುಚ್ಚಿ ಪರಾರಿ ಆಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದುಪ್ಪಟ್ಟು ಲಾಭದ ಆಮಿಷ

ಸಾಮಾನ್ಯವಾಗಿ ಚೈನ್‌ಲಿಂಕ್‌ ಬ್ಯುಸಿನೆಸ್‌ ರೀತಿ ವಂಚನೆ ಮಾಡುವ ಖದೀಮರು, ಇದು ಚೈನ್‌ ಲಿಂಕ್‌ ರೀತಿಯಲ್ಲ, ಇದೊಂದು ಬ್ಯುಸಿನೆಸ್‌ ಆಗಿದೆ. ನೀವು ಫ್ರಾಂಚೈಸಿಯನ್ನು ಪಡೆದುಕೊಂಡರೆ ನಿಮಗೆ ಇದರಲ್ಲಿ ಅಧಿಕ ಲಾಭಾಂಶ ಇದೆ ಎಂದು ನಂಬಿಸುತ್ತಾರೆ. ಅಲ್ಲದೆ, ಹೂಡಿಕೆ ಮಾಡಿದ್ದಕ್ಕೆ ದುಪ್ಪಟ್ಟು ಲಾಭವೂ ಸಿಗಲಿದೆ. ಇನ್ನು ವ್ಯವಹಾರದಲ್ಲಿಯೂ ಲಾಭಾಂಶವನ್ನು ನೀಡಲಾಗುವುದು ಎಂದು ಆಮಿಷವೊಡ್ಡುತ್ತಾರೆ. ಇದಕ್ಕೆ ಪ್ರಾರಂಭದಲ್ಲಿ ಎಲ್ಲರಿಗೂ ಲಾಭಾಂಶದ ಹಣವನ್ನು ಕೊಡುತ್ತಾರೆ. ಒಂದೆರಡು ತಿಂಗಳು ಹಣ ಪಡೆದವರಿಗೆ ನಂಬಿಕೆ ದುಪ್ಪಟ್ಟಾದ ಮೇಲೆ ಅವರು ಇನ್ನೊಬ್ಬರನ್ನು ಈ ಬ್ಯಸಿನೆಸ್‌ಗೆ ಪರಿಚಯಿಸುತ್ತಾರೆ. ಇಲ್ಲಾಗಿದ್ದೂ ಇದೇ ಕಥೆ. ಜನರು ತಾವು ನಂಬಿ ಮೋಸ ಹೋಗಿದ್ದಲ್ಲದೆ, ಪರಿಚಯದವರನ್ನೂ ಹಣ ಹೂಡುವಂತೆ ಮಾಡಿ ಈಗ ತೊಂದರೆಗೆ ಸಿಲುಕಿದ್ದಾರೆ. ಈಗ ಸರಿಸುಮಾರು 49 ಜನ ರಾಜ್ಯದ ವಿವಿಧ ಕಡೆ ಈ ಕಂಪನಿ ವಿರುದ್ಧ ದೂರನ್ನು ನೀಡಿದ್ದಾರೆ. ಉಳಿದವರಿಗೂ ದೂರು ನೀಡುವಂತೆ ಕೋರಿದ್ದಾರೆ.

Fraud Case in Karnataka in the name of ayurcareindia

5 ಲಕ್ಷ ಹೂಡಿಕೆ ಮಾಡಿ ಮಾಸಿಕ 50 ಸಾವಿರ ಪಡೆಯಿರಿ!

ಯಾರಿಗೆ ಉಂಟು ಯಾರಿಗೆ ಇಲ್ಲ! ಯಾವ ಬ್ಯಾಂಕ್‌ನಲ್ಲಿಯೂ ಈ ರೀತಿಯ ಸೌಲಭ್ಯ ಸಿಗಲಾರದು. ಯಾವ ಮ್ಯೂಚುವಲ್‌ ಫಂಡ್‌, ಲಿಕ್ವಿಡಿಟಿ ಫಂಡ್‌, ಗೋಲ್ಡ್‌ ಫಂಡ್‌ನಿಂದಲೂ ಹೀಗೆ ಮಾಸಿಕ ಲಾಭ ದೊರೆಯುವುದಿಲ್ಲ. ಇಲ್ಲಿ ನೀವು ಕೇವಲ 5 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಸಾಕು ಮಾಸಿಕವಾಗಿ 50 ಸಾವಿರ ರೂಪಾಯಿಯನ್ನು ಕೊಡುತ್ತಾ ಹೋಗಲಾಗುವುದು. ಹೀಗೆ ನಿಮಗೆ ಒಟ್ಟು 36 ತಿಂಗಳ ಕಾಲ ನೀಡಲಾಗುವುದು. ಇದರ ಒಟ್ಟು ಮೊತ್ತ 18 ಲಕ್ಷ ರೂಪಾಯಿ ಆಗಲಿದೆ. ಆದರೆ, ನೀವು ಹೂಡಿಕೆ ಮಾಡುವುದು ಕೇವಲ 5 ಲಕ್ಷ ರೂಪಾಯಿ ಮಾತ್ರವೇ ಆಗಿರುತ್ತದೆ ಎಂದು ನಂಬಿಸಿ ವಂಚನೆ ಮಾಡಲಾಗಿದೆ.

Fraud Case in Karnataka in the name of ayurcareindia

25 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ?

ಒಂದು ವೇಳೆ 25 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ತಿಂಗಳಿಗೆ 1 ಲಕ್ಷ ರೂಪಾಯಿಯಂತೆ 35 ಲಕ್ಷ ವಾಪಸ್ ನೀಡುವುದಾಗಿ ವಂಚನೆ ಮಾಡಲಾಗಿದೆ. ಜತೆಗೆ ಈ ಸ್ಟೋರ್ ಇಂಡಿಯಾ ವ್ಯವಹಾರದ ಲಾಭಾಂಶದಲ್ಲಿ ಶೇಕಡಾ 5ರಷ್ಟು ನೀಡುವುದಾಗಿ ಹೇಳಲಾಗಿತ್ತು. ಈ ರೀತಿಯಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕರಪತ್ರವನ್ನು ಹಂಚಿಕೆ ಮಾಡಿ ಅಮಾಯಕರಿಗೆ ವಂಚನೆ ಮಾಡಲಾಗಿದೆ.

ಈ ವಂಚನೆ ಸಂಬಂಧ 2018ರಿಂದಲೇ ಬೆಂಗಳೂರು, ಹುಬ್ಬಳ್ಳಿ, ದಾವಣಗೆರೆ ಸೇರದಂತೆ ಹಲವು ಕಡೆ ದೂರು ದಾಖಲು ಮಾಡಲಾಗಿದೆ. ಇದುವರೆಗೆ 18 ದೂರುಗಳು ದಾಖಲಾಗಿದ್ದು 7 ಪ್ರಕರಣದಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ. ವಂಚನೆ ಮಾಡಿರುವ ಕಂಪನಿಯ ವಿರುದ್ಧ ಸರಣಿ ಎಫ್‌ಐಆರ್‌ ದಾಖಲಾಗುತ್ತಿವೆ. ಆದರೆ, ಹಣ ಹೂಡಿಕೆ ಮಾಡಿಸಿಕೊಂಡಿರುವ ವಂಚಕರು ಮಾತ್ರ ಎಸ್ಕೇಪ್ ಆಗಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಆರಂಭದಲ್ಲಿ ಹಣ ಹೂಡಿಕೆ ಮಾಡಿದವರಿಗೆ ಒಂದೆರಡು ತಿಂಗಳು ಮಾತ್ರ ಸ್ವಲ್ಪ ಮೊತ್ತದ ಹಣ ವಾಪಸ್ ಮಾಡಲಾಗಿದೆ. ಇದೀಗ ಒಪ್ಪಂದದಂತೆ ಹಣ ನೀಡದೆ ಸಬೂಬು ಹೇಳಿ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳು ಯಾರು ಯಾರು?

ಮಹಮ್ಮದ್‌ ಫೈಜಾನ್‌ ಪ್ರಮುಖ ಆರೋಪಿಯಾಗಿದ್ದು, ಈತ ಆರ್ಯವೇದಿಕ್‌ ಕಂಪನಿಯ ಸಿಎಂಡಿ ಎಂದು ಹೇಳಿಕೊಂಡಿದ್ದಾನೆ. ಉಳಿದಂತೆ ಉಮೇಶ್‌ ಕುಮಾರ್‌ ತ್ಯಾಗಿ, ಉರೋಜ್‌ ಅಲಿ ಖಾನ್‌, ಶಂಶಾದ್‌ ಅಹ್ಮದ್‌, ನಾಜಿಮಾ ಖಾನ್‌, ಅನಿಲ್‌ ಜಾದವ್‌ ಮೇಲೆ ಈಗ ಎಫ್‌ಐಆರ್‌ ದಾಖಲಾಗಿದೆ. ಇವರೆಲ್ಲರೂ ಕಂಪನಿಯ ನಿರ್ದೇಶಕರಾಗಿದ್ದಾರೆ.

ಕಂಪನಿ ವಿಳಾಸ

ಸಿ-3, ಸಿ-4, ಸೆಕ್ಟರ್‌ 6, ನೋಯ್ಡಾ, ಗೌತಮ ಬುದ್ಧ ನಗರ, ಉತ್ತರ ಪ್ರದೇಶ -201301 ವಿಳಾಸದಲ್ಲಿ ಕಂಪನಿಯನ್ನು ನೋಂದಣಿ ಮಾಡಿಕೊಳ್ಳಲಾಗಿದೆ. ಇಮೆಲ್‌ ವಿಳಾಸ – www.vedicayurcure.com ಹಾಗೂ www.estoreindia.in ಎಂದು ನೀಡಲಾಗಿತ್ತು. ಈ ವೆಬ್‌ಸೈಟ್‌ ವಿಳಾಸದಲ್ಲಿಯೂ ಸಾಕಷ್ಟು ಮಾಹಿತಿಯನ್ನು ಅಪ್ಲೋಡ್‌ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಯಾರಿಗೂ ಅನುಮಾನ ಮೂಡಿಲ್ಲ.

ಇದನ್ನೂ ಓದಿ: BY Vijayendra : ಅಮಿತ್‌ ಶಾ- ವಿಜಯೇಂದ್ರ ಭೇಟಿ ವೇಳೆ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ?

ಅಗ್ರಿಮೆಂಟ್‌ ಕಾಪಿಯೂ ಪಕ್ಕಾ

ಹೀಗೆ ಹಣ ಹೂಡಿಕೆಯನ್ನು ಸುಮ್ಮನೆ ಮಾಡಿಸಿಕೊಳ್ಳುವುದಿಲ್ಲ. ಅವರಿಂದ ಪಡೆದ ಹಣ ಹಾಗೂ ಇವರು ಮಾಸಿಕವಾಗಿ ಎಷ್ಟು ತಿಂಗಳವರೆಗೆ? ಎಷ್ಟು ಹಣವನ್ನು ನೀಡಲಾಗುವುದು ಎಂಬುದನ್ನು ಸಹ ಕರಾರು ಪತ್ರದಲ್ಲಿ ಬರೆದುಕೊಡಲಾಗುವುದು. ಇದರಿಂದ ಹೂಡಿಕೆ ಮಾಡುವವರಿಗೆ ಮತ್ತಷ್ಟು ನಂಬಿಕೆ ಬರುತ್ತದೆ. ಈ ಹಿನ್ನೆಲೆಯಲ್ಲಿ ಲಕ್ಷ ಲಕ್ಷ ಹಣವನ್ನು ಹೂಡಿಕೆ ಮಾಡಿ ಈಗ ಕೈಸುಟ್ಟುಕೊಳ್ಳುವಂತೆ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪೆನ್‌ಡ್ರೈವ್‌ ಕೇಸ್‌ನಲ್ಲಿ ಶಾಮೀಲಾಗಲು ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

Prajwal Revanna Case: ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಆರೋಪ ಮಾಡಿದ್ದಾರೆ.

VISTARANEWS.COM


on

Prajwal Revanna Case DK Shivakumar offers Rs 100 crore to get involved in pen drive case Devaraje Gowda allegations
Koo

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಮಾತನಾಡಿದ್ದಲ್ಲ ಎಂದು ಹೇಳಿದರು.

ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಆರೋಪಿಸಿದರು.

ಒಪ್ಪದೇ ಇದ್ದಾಗ ಅಟ್ರಾಸಿಟಿ ಕೇಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ನನ್ನ ಮೇಲೆ ಸುಳ್ಳು ಕೇಸ್‌

ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್‌ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್‌ ಮಾಡಿದ್ದಾರೆ.

Continue Reading

ಬೆಂಗಳೂರು

Water Aerator : ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ರೆ 10 ನಿಮಿಷದಲ್ಲಿ ಮನೆ ತಲುಪುತ್ತದೆ ವಾಟರ್ ಏರಿಯೇಟರ್​

water aerator : ಏರಿಯೇಟರ್‌ ಹುಡುಕುವವರ ಸಂಖ್ಯೆ ಶೇಕಡಾ 1400 ರಷ್ಟು ಹೆಚ್ಚಾಗಿರುವುದು ಕಂಡುಬಂದಿದೆ. ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸ್ವಿಗ್ಗಿ ಇನ್‌ಸ್ಟಾ ಮಾರ್ಟ್‌, ಅರ್ಥ ಫೋಕಸ್‌ ಎನ್ನುವ ಕಂಪನಿಯ ಜೊತೆ ಕೈಜೋಡಿಸಿದೆ. ಈ ಮೂಲಕ ಕೇವಲ 10 ನಿಮಿಷಗಳಲ್ಲಿ ಬೇಡಿಕೆ ಸಲ್ಲಿಸುವ ಗ್ರಾಹಕರುಗಳಿಗೆ ಏರಿಯೇಟರ್‌ ಅನ್ನು ತಲುಪಿಸಲು ಆರಂಭಿಸಿದೆ.

VISTARANEWS.COM


on

water aerator
Koo

ಬೆಂಗಳೂರು : ಬೆಂಗಳೂರು ನಗರ ಹಾಗೂ ಕರ್ನಾಟಕದಾದ್ಯಂತ ನೀರಿನ ಕೊರತೆಯನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ನೀರಿನ ಸಂಪರ್ಕಕ್ಕೆ ವಾಟರ್​ ಏರಿಯೇಟರ್​​ (water aerator) ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಏರಿಯೇಟರ್​ಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದರಿಂದಾಗಿ ಏರಿಯೇಟರ್‌ ಗೆ ಆನ್‌ಲೈನ್‌ ಫ್ಲಾಟ್‌ ಫಾರಂಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ಹಾಗೂ ಫುಡ್​ ಡೆಲಿವರಿ ಆ್ಯಪ್​ ಸ್ವಿಗ್ಗಿ ಏರಿಯೇಟರ್​ ಸರಬರಾಜು ಮಾಡಲು ಆರಂಭಿಸಿದೆ.

ಅತ್ಯಂತ ವೇಗವಾಗಿ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವ ವೇದಿಕೆಯಾಗಿರುವ ಸ್ವಿಗ್ಗಿ ಮಾರ್ಟ್‌ನಲ್ಲೂ ಏರಿಯೇಟರ್‌ ಹುಡುಕುವವರ ಸಂಖ್ಯೆ ಶೇಕಡಾ 1400 ರಷ್ಟು ಹೆಚ್ಚಾಗಿರುವುದು ಕಂಡುಬಂದಿದೆ. ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸ್ವಿಗ್ಗಿ ಇನ್‌ಸ್ಟಾ ಮಾರ್ಟ್‌, ಅರ್ಥ ಫೋಕಸ್‌ ಎನ್ನುವ ಕಂಪನಿಯ ಜೊತೆ ಕೈಜೋಡಿಸಿದೆ. ಈ ಮೂಲಕ ಕೇವಲ 10 ನಿಮಿಷಗಳಲ್ಲಿ ಬೇಡಿಕೆ ಸಲ್ಲಿಸುವ ಗ್ರಾಹಕರುಗಳಿಗೆ ಏರಿಯೇಟರ್‌ ಅನ್ನು ತಲುಪಿಸಲು ಆರಂಭಿಸಿದೆ.

ಇದನ್ನೂ ಓದಿ: Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

ಈ ಮೂಲಕ ಬೆಂಗಳೂರು ಜಲಮಂಡಳಿಯ ನೀರಿನ ಸದ್ಬಳಕೆಯ ಮಹತ್ವಕಾಂಕ್ಷಿ ಯೋಜನೆಯಾದ ಏರಿಯೇಟರ್‌ ಅಳವಡಿಕೆಯಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುವ ಗುರಿಯನ್ನು ಹೊಂದಿದೆ. ಈ ಏರಿಯೇಟರ್‌ಗಳ ಬಳಕೆಯಿಂದ ಬಹಳಷ್ಟು ನೀರಿನ ಉಳೀತಾಯವನ್ನು ಮಾಡಬಹುದಾಗಿದೆ. ಕಿಚನ್‌ ಟ್ಯಾಪ್‌ಗಳಲ್ಲಿ ಅಳವಡಿಸುವುದರಿಂದ ಶೇಕಡಾ 70 ರಷ್ಟು ಮತ್ತು ಶವರ್‌ಗಳಿಂದ ಶೇಕಡಾ 50 ರಷ್ಟು ನೀರು ಉಳಿತಾಯ ಮಾಡಬಹುದಾಗಿದೆ. ಸ್ವಿಗ್ಗಿ ಇಸ್ಟಾ ಮಾರ್ಟ್‌ನಲ್ಲಿ ಕಿಚನ್‌, ಬಾತ್‌ ಮತ್ತು ಬೇಸಿನ್‌ ಟ್ಯಾಪ್‌ ಹಾಗೂ ಶವರ್‌ಗಳಲ್ಲಿ ಅಳವಡಿಸಬಹುದಾದ ಫ್ಲೋ ರಿಸ್ಟ್ರಿಕ್ಟರ್‌ ಅನ್ನು ದಾಸ್ತುನು ಮಾಡಿಕೊಳ್ಳಲಾಗಿದೆ ಎಂದು ಪ್ರಕಟಣೆಯನ್ನು ತಿಳಿಸಲಾಗಿದೆ.

ಮಾ.21ರಿಂದ ನಲ್ಲಿಗಳಿಗೆ ಏರಿಯೇಟರ್‌ ಕಡ್ಡಾಯ ಮಾಡಿದ್ದ ಬೆಂಗಳೂರು ಜಲಮಂಡಳಿ

ರಾಜಧಾನಿಯಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಸಮಸ್ಯೆ (Bangalore Water Crisis) ಉಲ್ಬಣವಾಗುತ್ತಿದೆ. ಹೀಗಾಗಿ ನೀರಿನ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಹಲವು ಕ್ರಮ ಕೈಗೊಂಡಿರುವ ಬೆಂಗಳೂರು ಜಲಮಂಡಳಿಯು(ಬಿಡಬ್ಲ್ಯುಎಸ್‌ಎಸ್‌ಬಿ), ನಲ್ಲಿಗಳಿಗೆ ಏರಿಯೇಟರ್‌ ಅಳವಡಿಕೆ ಕಡ್ಡಾಯ ಮಾಡಿ (Aerators for Taps) ಆದೇಶ ಹೊರಡಿಸಿತ್ತು.

ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಯುವ ನಿಟ್ಟಿನಲ್ಲಿ ಜಲಮಂಡಲಿ ಕ್ರಮ ಕೈಗೊಂಡಿದ್ದು, ಮಾರ್ಚ್‌ 21 ರಿಂದ 31ರೊಳಗೆ ನಲ್ಲಿಗಳಿಗೆ ಕಡ್ಡಾಯವಾಗಿ ಏರಿಯೇಟರ್‌ ಅಳವಡಿಸಲು ಸೂಚನೆ ನೀಡಿತ್ತು.

ಏರಿಯೇಟರ್‌ ಅಳವಡಿಕೆಯಿಂದ ಶೇ. 60 ರಿಂದ 85ರಷ್ಟು ನೀರಿನ ಉಳಿತಾಯ ಸಾಧ್ಯವಾಗಲಿದೆ. ವಾಣಿಜ್ಯ ಮಳಿಗೆಗೆಳು, ಕೈಗಾರಿಕೆಗಳು, ಅಪಾರ್ಟ್‌ಮೆಂಟ್‌ಗಳು, ಐಷಾರಾಮಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಸಾರ್ವಜನಿಕ ಸ್ಥಳಗಳಲ್ಲಿ ವಾಷ್ ಬೇಸಿನ್, ಕಿಚನ್, ಕೈ ಮತ್ತು ಕಾಲು ತೊಳೆಯುವ ಸ್ಥಳಗಳು, ಸ್ವಚ್ಛತೆಗಾಗಿ ಮೀಸಲಿರುವ ನಲ್ಲಿಗಳಿಂದ ಹೆಚ್ಚಿನ ನೀರು ಪೋಲಾಗುವುದನ್ನು ತಡೆಯಲು ಕ್ರಮ ಏರಿಯೇಟರ್‌ ಕಡ್ಡಾಯವಾಗಿ ಅಳವಡಿಸಲು ಸೂಚನೆ ನೀಡಲಾಗಿತ್ತು.

Continue Reading

ಕ್ರೈಂ

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

HD Revanna Case: ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

VISTARANEWS.COM


on

Holenarasipura sexual assault case lot of confusion in the victim statement against HD Revanna Case
Koo

ಬೆಂಗಳೂರು: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಜಾಮೀನು (Bail) ನೀಡಲಾಗಿದೆ. ಗುರುವಾರ ಮಧ್ಯಂತರ ಜಾಮೀನು ನೀಡಿ ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ (ಮೇ 20) ವಿಚಾರಣೆಯನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಮಧ್ಯಂತರ ರಿಲೀಫ್‌ ಸಿಕ್ಕಿದೆಯಾದರೂ ಜೈಲಾ? ಬೇಲಾ? ಎಂಬುದು ಸೋಮವಾರ ಪ್ರಕಟವಾಗುವ ತೀರ್ಪಿನ ಮೇಲೆ ನಿಂತಿದೆ. ಇದೇ ವೇಳೆ ರೇವಣ್ಣ ಪರ ವಕೀಲರು ಪ್ರಕರಣದ ದೋಷಗಳನ್ನು ಕೋರ್ಟ್‌ ಮುಂದೆ ಎತ್ತಿ ತೋರಿಸಿದರು. ಪೊಲೀಸರು ದಾಖಲಿಸಿಕೊಂಡಿರುವ ದೂರಿನಲ್ಲಿ ಉಲ್ಲೇಖವಾಗಿರುವ ಮಹಿಳೆಯ ಹೇಳಿಕೆಯಲ್ಲಿನ ಗೊಂದಲದ ಬಗ್ಗೆ ಗಮನ ಸೆಳೆದಿದ್ದಾರೆ.

ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು.

ಕೋರ್ಟ್‌ನಲ್ಲಿ ವಾದ ಮಂಡಿಸಿದ ಸಿ.ವಿ. ನಾಗೇಶ್‌, ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ

ಪ್ರಜ್ವಲ್ ರೇವಣ್ಣ ಮೇಲೆ‌ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಏಪ್ರಿಲ್ 24ರ ರಾತ್ರಿ‌ 11 ಗಂಟೆಗೆ ಬೆಂಗಳೂರಿನಲ್ಲಿರುವ ಸಂತ್ರಸ್ತೆಯೊಬ್ಬರು ದೂರು ನೀಡಲು‌ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಮಹಿಳಾ ಸಿಬ್ಬಂದಿಯೊಂದಿಗೆ ಸಂತ್ರಸ್ತೆ ಇರುವ ಸ್ಥಳಕ್ಕೆ ಹೋಗಿ ದೂರು ಪಡೆದು‌ ಕೇಸ್ ದಾಖಲಿಸಿದ್ದಾಗಿ ಸ್ಟೇಷನ್ ಬುಕ್‌ನಲ್ಲಿ‌ ಉಲ್ಲೇಖಿಸಿದ್ದಾರೆ. ಇಲ್ಲಿ ಸ್ಪಷ್ಟವಾಗಿ ಗೊತ್ತಾಗುವುದೇನೆಂದರೆ ಈ ದೂರು ರಿಜಿಸ್ಟರ್ ಆಗಿರುವುದಲ್ಲ‌. ದೂರನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದ ಹಾಗೆ ಮಾಡಿಕೊಂಡಿದ್ದಾರೆ. ರೇವಣ್ಣ ವಿರುದ್ಧ ದೂರುದಾರೆ ನೀಡಿದ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಲ್ಲಿಲ್ಲ. ಆಕೆಯ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿಕೊಂಡಿಲ್ಲ. ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ. ಬೇಕಂತಲೇ ಸೃಷ್ಟಿಯಾಗಿರುವ ಕೇಸ್ ಆಗಿದೆ. ಆಕೆಗೆ ಲೈಂಗಿಕ ದೌರ್ಜನ್ಯ ಅಂದರೇನು ಅಂತ ಗೊತ್ತೇ ಇರುವುದಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ಲೈಂಗಿಕ ದೌರ್ಜನ್ಯವೇ ಬೇರೆ, ಅತ್ಯಾಚಾರವೇ ಬೇರೆ. ಸಂತ್ರಸ್ತೆ ನೀಡಿದ ದೂರಿನ ಅಂಶಗಳನ್ನು ಓದಿ ಹೇಳಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯ ಪತಿ ಆಕೆಯ ಮೇಲೆ ಪಟ್ಟ ಅನುಮಾನವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ನನ್ನ ಮೇಲೆ ಆ ರೀತಿ ಕೃತ್ಯ ನಡೆದಿಲ್ಲ ಎಂದು ಹೇಳಿದ್ದಾಳೆ. ನಾಲ್ಕೈದು ವರ್ಷಗಳ ಹಿಂದೆ ನಡೆದಿರುವ ಕೃತ್ಯದ ಬಗ್ಗೆ ಆರೋಪಿಸಿದ್ದಾರೆ. ಒಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ನೀಡಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳುತ್ತಾರೆ. ಮತ್ತೊಂದೆಡೆ ಸಂತ್ರಸ್ತೆ ಗಂಡ ಬೇರೆ ಹೆಣ್ಣು‌ ಮಕ್ಕಳ ವಿಡಿಯೊ ಬಗ್ಗೆ ಕೇಳಿದಾಗ ನನ್ನ ಮೇಲೆ ಆ ರೀತಿ ಆಗಿಲ್ಲ‌ ಅಂತ ಹೇಳಿದ್ದಾಳೆ. ಮತ್ತೊಂದೆಡೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ತಾಳಲಾರದೆ ಮನೆ ಕೆಲಸ ಬಿಟ್ಟು ಬಂದೆ ಎಂದು ಹೇಳುತ್ತಾಳೆ. ತನಿಖಾಧಿಕಾರಿಗಳು ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ 376 ದಾಖಲಿಸಲು ಅನುಮತಿ ಕೇಳಿದ್ದಾರೆ. ಯಾರ ಮೇಲೆ ಸೆಕ್ಷನ್‌ 376 ದಾಖಲಿಸುತ್ತಾರೆ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ದೂರುದಾರರು ಲೈಂಗಿಕ ದೌರ್ಜನ್ಯ ತಾಳಲಾರದೆ 4 ವರ್ಷದ ಹಿಂದೆ ಮನೆ ಕೆಲಸ ಬಿಟ್ಟೆ ಎಂದು ಹೇಳುತ್ತಾರೆ. ಮನೆ ಬಿಟ್ಟು ಬಂದಿದ್ದಕ್ಕೆ ಪೊಲೀಸರನ್ನು ಕಳುಹಿಸಿ ಆಶ್ರಯ ಮನೆ ಖಾಲಿ ಮಾಡಿಸಿದರು ಎಂದು ಆರೋಪಿಸುತ್ತಾರೆ. ತಮ್ಮ ಒಡವೆ, ಬಟ್ಟೆ ಎಲ್ಲವನ್ನೂ ಕಿತ್ತುಕೊಂಡರು ಎಂದು ಹೇಳುತ್ತಾರೆ. ಹಾಗಾದರೆ ನಾಲ್ಕೂವರೆ ವರ್ಷದ ಹಿಂದೆ ಅವರ ಮನೆಯಲ್ಲಿದ್ದಾಗ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯವು ಅವರಿಗೆ ಗೊತ್ತಾಗಲಿಲ್ಲವೇ? ಮನೆ ಖಾಲಿ ಮಾಡಿಸಿದ ಮೇಲೆ ಯಾಕೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆದಿದೆ ಅಂತ ಗೊತ್ತಾಯ್ತಾ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ವಾದ ಆರಂಭಿಸಿ ಜಯ್ನಾ ಕೊಠಾರಿ

ಇದಕ್ಕೂ ಮೊದಲು 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭವಾಯಿತು. ಈ ವೇಳೆ ಮಾಜಿ‌ ಸಚಿವ ಎಚ್.ಡಿ. ರೇವಣ್ಣ ಅವರು ಬರಿಗಾಲಿನಲ್ಲಿಯೇ ಕೋರ್ಟ್‌ಗೆ ಹಾಜರಾದರು. ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆಗೆ ಮುಂಚೆ ಇನ್ ಕ್ಯಾಮೆರಾ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಮೊದಲು ಅರ್ಜಿ ವಿಚಾರಣೆಯ ಅರ್ಹತೆ ಬಗ್ಗೆ ವಾದ ಮಂಡಿಸಿ. ನಂತರ ಇನ್ ಕ್ಯಾಮೆರಾ ವಿಚಾರಣೆ ನಡೆಸೋಣ ಎಂದು ಹೇಳಿದರು.

ವಾದ ಶುರು ಮಾಡಿದ ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, ಹೊಳೆನರಸೀಪುರ ಪ್ರಕರಣದಲ್ಲಿ ಐಪಿಸಿ 376 ಸೆಕ್ಷನ್ ಹಾಕಲಾಗಿದ್ದು, ಇದು ಅತ್ಯಾಚಾರ ಆರೋಪವಾಗಿದೆ. ಸಂತ್ರಸ್ತೆಯ ವಿಚಾರಣೆ ಬಳಿಕ ಅತ್ಯಾಚಾರ ಆರೋಪ ದಾಖಲಾಗಿದೆ. ಸಂತ್ರಸ್ತೆ ಹೇಳಿಕೆಯನ್ನು ಅವರು ಕೋರ್ಟ್‌ನಲ್ಲಿ ಓದಿ ಹೇಳಿದರು. ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್ 354 ಮಾತ್ರ ಇತ್ತು. ವಿಚಾರಣೆ ಬಳಿಕ 376 ಸೇರ್ಪಡೆಯಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿರುವ ಅಂಶಗಳನ್ನು ಉಲ್ಲೇಖಿಸಿ ಕೋರ್ಟ್‌ ಗಮನಕ್ಕೆ ತಂದರು.

ಆಶ್ರಯ ಮನೆಯೂ ವಾಪಸ್‌

ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅಂಶಗಳ ಕೋರ್ಟ್‌ ಮುಂದೆ ಓದಿದ ಎಸ್‌ಪಿಪಿ ಜಯ್ನಾ ಕೊಠಾರಿ, ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಕಿರುಕುಳ ತಾಳಲಾರದೆ ಮನೆ ಬಿಟ್ಟು ಬಂದಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಕೆಲಸ ಬಿಟ್ಟು ಬಂದಿದಕ್ಕೆ ಮೊದಲು‌ ನೀಡಿದ್ದ ಆಶ್ರಯ ಮನೆಯನ್ನು ಬಲವಂತವಾಗಿ ವಾಪಸ್‌ ಪಡೆದಿದ್ದಾರೆ. ಆ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದರೂ ನ್ಯಾಯ ಸಿಕ್ಕಿಲ್ಲ. ಸಂತ್ರಸ್ತೆಯ ಆರೋಪಗಳನ್ನು ಕೋರ್ಟ್‌ ಮುಂದೆ ಹೇಳಿದರು.

ಹೀಗಾಗಿ ಸಂತ್ರಸ್ತೆ ಹೇಳಿಕೆ ಮೇಲೆ ಸೆಕ್ಷನ್ 376 ಅನ್ನು ಸೇರಿಸಲಾಗಿದೆ ಎಂದು ವಾದಿಸಿದ ಜಯ್ನಾ ಕೊಠಾರಿ, ನಾನ್ ಬೇಲಬಲ್ ಸೆಕ್ಷನ್ ಸೇರಿಸಿರುವುದರಿಂದ ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಬೇಕು. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ತನಿಖಾಧಿಕಾರಿಯ ಮನವಿ ನಂತರ ಸೆಕ್ಷನ್‌ 376 ಸೇರ್ಪಡೆಗೊಂಡಿದೆ. ಈ ಮೊದಲಿಗೆ ಈ ಕೇಸಿನಲ್ಲಿ ಸೆಕ್ಷನ್‌ 354 A, D ಮಾತ್ರವಿತ್ತು. ಪ್ರಜ್ಬಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ಇರುವ ಪ್ರಕರಣವನ್ನು ವಿಭಜಿಸಬಾರದು. ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ಇದರಿಂದ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಇಂತಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ ವಾದಿಸಿದರು.

ದೂರುದಾರೆಗೆ ಇಬ್ಬರಿಂದಲೂ ಕಿರುಕುಳ

ಎಸ್ಐಟಿ ತಂಡದಿಂದ ತನಿಖೆ ಪ್ರಗತಿಯಲ್ಲಿದೆ. ಈ‌ ಸಂದರ್ಭದಲ್ಲಿ ಆರೋಪಿಗೆ ಜಾಮೀನು ನೀಡುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತದೆ. ಬೇಲಬಲ್ ಸೆಕ್ಷನ್ ಇದ್ದಾಗ ಮಾತ್ರ ಸೆಕ್ಷನ್‌ 436 ಪ್ರಕಾರ ಜಾಮೀನು ನೀಡಬಹುದು. ಆದರೆ, ಈ ಪ್ರಕರಣದಲ್ಲಿ ನಾನ್ ಬೇಲಬಲ್ ಸೆಕ್ಷನ್ 436 ಅಡಿಯಲ್ಲಿ ಜಾಮೀನು ನೀಡುವಂತಿಲ್ಲ. ಅಲ್ಲದೆ, ನಾನ್ ಬೇಲಬಲ್ ಸೆಕ್ಷನ್ ಇರುವುದಿರಿಂದ ಇದರ ವಿಚಾರಣೆಯು ಸೆಷನ್ಸ್‌ ಕೋರ್ಟ್‌ನಲ್ಲಿರುವುದರಿಂದ ಅಲ್ಲಿ ವಿಚಾರಣೆ ನಡೆಯಬೇಕು. ದೂರುದಾರರಿಗೆ ಮನೆಯಲ್ಲಿ ಇಬ್ಬರಿಂದಲೂ (ರೇವಣ್ಣ, ಪ್ರಜ್ವಲ್) ಕಿರುಕುಳ ನಡೆದಿದೆ. ಇದನ್ನೆಲ್ಲ ಮುಕ್ತ ನ್ಯಾಯಾಲಯದಲ್ಲಿ ವಿವರಿಸಲು ಆಗದು. ಇದು ಇನ್ ಕ್ಯಾಮೆರಾ ವಿಚಾರಣೆ ನಡೆಯಬೇಕು ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಜಾಮೀನು ಅರ್ಜಿ ವಿಚಾರಣೆ ವ್ಯಾಪ್ತಿ ಈ ಕೋರ್ಟ್‌ಗಿಲ್ಲ: ಜಯ್ನಾ ಕೊಠಾರಿ

ಇಲ್ಲಿ ತಂದೆ – ಮಗ ಇಬ್ಬರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. ರೇವಣ್ಣ ಅವರಿಂದ ಇಷ್ಟೇ ಪ್ರಮಾಣದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ. ಅದೆಲ್ಲವೂ ತನಿಖೆಯ ನಂತರವಷ್ಟೇ ಗೊತ್ತಾಗಬೇಕಿದೆ. ಈಗಲೇ ಶಾಸಕ ರೇವಣ್ಣ ಮೇಲೆ ಅತ್ಯಾಚಾರ ಆರೋಪ ಇಲ್ಲವೆಂದು ಹೇಳಲು ಸಾಧ್ಯವಾಗುವುದಿಲ್ಲ. ಒಮ್ಮೆ ಅತ್ಯಾಚಾರ ಆರೋಪ ದಾಖಲಾದರೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಜಾಮೀನು ಅರ್ಜಿ ವಿಚಾರಣೆ ನಡೆಸಲು ಈ ಕೋರ್ಟ್‌ಗೆ ವ್ಯಾಪ್ತಿ ಇಲ್ಲ. ಸೆಕ್ಷನ್‌ 376 ಅಪರಾಧಕ್ಕೆ ಜೀವಾವಧಿ ಶಿಕ್ಷೆ ಇದೆ. ಇದು ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದಾಗ ಜಾಮೀನು ಅರ್ಜಿ ಊರ್ಜಿತವಲ್ಲ. ಇಬ್ಬರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿದೆ. ಆರೋಪ ಪಟ್ಟಿ ದಾಖಲಾದ ನಂತರವಷ್ಟೇ ಯಾರ ಮೇಲೆ ಏನು ಆರೋಪ‌ ಎಂದು ತಿಳಿಯಲಿದೆ. ಸೆಕ್ಷನ್‌ 41ಎ ಅಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೂ ಬಂದಿಲ್ಲ. ಇದನ್ನು ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೇಳುತ್ತೇನೆ. ಈಗ ಜಾಮೀನು ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬಾರದೆಂಬ ವಿಚಾರಕ್ಕಷ್ಟೇ ವಾದಿಸುತ್ತಿದ್ದೇನೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿದರು.

ಬಳಿಕ ಮತ್ತೊಬ್ಬ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿ, ಜನಪ್ರತಿನಿಧಿಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ಇಲ್ಲಿಗೆ ಬರುತ್ತವೆ. ಜಾಮೀನು ಅಂದರೆ ಸೆಷನ್ ನ್ಯಾಯಾಲಯದ ಕೋರ್ಟ್ 82ಕ್ಕೆ ಬರುತ್ತದೆ ಎಂದು ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಇದು ಪೋಕ್ಸೋ ಕೇಸ್‌ ಆಗಿದ್ದರೆ ನೀವು ಸೆಷನ್ ಕೋರ್ಟ್‌ಗೆ ಹೋಗಿ. ಇದು ಇಲ್ಲಿ ನಿರ್ವಹಿಸಲಾಗದಿದ್ದರೆ ಅಲ್ಲಿಗೆ ಕಳಿಸಲಾಗುತ್ತದೆ ಎಂದು ಹೇಳಿದರು.

ಮತ್ತೆ ವಾದ ಮುಂದುವರಿಸಿದ ಅಶೋಕ್‌ ನಾಯಕ್‌, ಸಂತ್ರಸ್ತೆ ಮೇಲೆ ತಂದೆ ಮತ್ತು ಪುತ್ರ ಇಬ್ಬರೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಒಬ್ಬಳ ಮೇಲೆ ಪದೇ ಪದೆ ದೌರ್ಜನ್ಯವೆಸಗಿದ್ದಾರೆ. ಕೊಲೆ ಪ್ರಕರಣದಲ್ಲಿ 302 ಸೆಕ್ಷನ್ ಜತೆಗೆ ಇತರೆ ಬೇಲಬಲ್ ಸೆಕ್ಷನ್‌ಗಳನ್ನ ಹಾಕಿರುತ್ತಾರೆ. ಹಾಗಂತ ಆರೋಪಿಗಳನ್ನು ಹಾಗೂ ಕೇಸ್‌ ಅನ್ನು ವಿಭಜನೆ ಮಾಡಲು ಆಗುತ್ತದೆಯೇ? ಅದೇ ರೀತಿ ಈ ಪ್ರಕರಣದಲ್ಲಿ ತಂದೆ, ಮಗ ಇಬ್ಬರೂ ಒಂದೇ ಅಪರಾಧ ಎಸಗಿದ್ದಾರೆ. ಒಂದೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಎರಡನೇ ಆರೋಪಿಯನ್ನು ಮೊದಲನೇ ಆರೋಪಿಯೇ ರಕ್ಷಣೆ ಮಾಡುತ್ತಿದ್ದಾರೆ. ದೇಶ ಬಿಟ್ಟು ಹೋಗಲು ಮೊದಲ ಆರೋಪಿಯೇ ಸಹಾಯ ಮಾಡಿದ್ದಾರೆ ಎಂದು ಹೇಳಿದರು.

ಪ್ರತಿ ವಾದ ಮಂಡಿಸಿದ ಸಿ.ವಿ. ನಾಗೇಶ್‌

ಈ ವೇಳೆ ರೇವಣ್ಣ ಪರ ವಕೀಲ‌ ಸಿ.ವಿ. ನಾಗೇಶ್ ಪ್ರತಿವಾದ ಆರಂಭಿಸಿ, ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರುವ ಪ್ರಕರಣವು ಬೇಲಬಲ್ ಸೆಕ್ಷನ್‌ಗಳಾಗಿವೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ನಲ್ಲಿ ಜಾಮೀನು ನೀಡಬೇಕಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಎಫ್ಐಆರ್ ದಾಖಲಾದ ದಿನಾಂಕ, ಅದರಲ್ಲಿರುವ ಸೆಕ್ಷನ್‌ಗಳು ಏನು ಎಂಬುದನ್ನು ಇದೇ ವೇಳೆ ಕೋರ್ಟ್‌ ಗಮನಕ್ಕೆ ತಂದರು. ಯಾವುದೇ ವ್ಯಕ್ತಿಯ ವಿರುದ್ಧ ದೂರು ದಾಖಲಾದರೆ, ಆತ ಬಂಧನಕ್ಕೊಳಗಾಗುವ ಮುನ್ನ ಶರಣಾದರೆ ಜಾಮೀನು ನೀಡಬಹುದು. ಇದರ ಗ್ರಾವಿಟಿಯೇ 436 ಸಿಆರ್‌ಪಿಸಿ ಆಗಿದೆ. ಇಲ್ಲಿ ಸಿಆರ್‌ಪಿಸಿ 439 ಅಲ್ಲ. ರೇವಣ್ಣ ವಿರುದ್ಧ ಈಗ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪವು ದೂರು ದಾಖಲಾದ ದಿನ ಅಥವಾ ವಾರದ ಹಿಂದೆ ಇಲ್ಲವೇ ವರ್ಷದ ಹಿಂದೆ ನಡೆದಿಲ್ಲ. ಕೃತ್ಯ ನಡೆದು ಹಲವು ವರ್ಷಗಳೇ ಕಳೆದು ಹೋಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗರ್ಭಗುಡಿಯಲ್ಲಿ ದೇವರು ಕುಳಿತಂತೆ ಕುಳಿತಿದ್ದೆ!

ಈ ವೇಳೆ ಮಧ್ಯ ಪ್ರವೇಶ ಮಾಡಿದ ಎಸ್‌ಪಿಪಿ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಲು ಮುಂದಾದರು. ಅದಕ್ಕೆ ಸಿಟ್ಟಾದ ಸಿ.ವಿ. ನಾಗೇಶ್, “ನೀವು ವಾದ ಮಾಡಬೇಕಾದರೆ ನಾನು ಗರ್ಭಗುಡಿಯಲ್ಲಿ‌ ದೇವರು ಕುಳಿತ ಹಾಗೆ ಕುಳಿತುಕೊಂಡಿದ್ದೆ. ಏನಾದರೂ ತೊಂದರೆ ಮಾಡಿದ್ದೇನಾ? ಎಂದು ಪ್ರಶ್ನಿಸಿ ತಮ್ಮ ವಾದವನ್ನು ಮುಂದುವರಿಸಿದರು.

ಇದು ಅತ್ಯಾಚಾರ ಪ್ರಕರಣ ಅಲ್ಲ

ಸೆಷನ್ಸ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ 376 ಸೆಕ್ಷನ್ ಇರಲಿಲ್ಲ. ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಬಂದಾಗ ಈ ಸೆಕ್ಷನ್‌ ಸೇರ್ಪಡೆಯಾಗಿದೆ. ಅವತ್ತು ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಿದ್ದರು. ಇವರು ಮೊದಲೇ 376 ಇದೆ ಎಂದು ಹೇಳಿದ್ದರೆ, ನಾವು ನಿರೀಕ್ಷಣಾ ಜಾಮೀನು ಅರ್ಜಿಯನ್ನೇ ವಾಪಸ್‌ ಪಡೆಯುತ್ತಿರಲಿಲ್ಲ. ರೇವಣ್ಣ ವಿರುದ್ಧ 376 ಇದೆ ಅಂತ ಹೇಳಲಿ. ಆಗ ನಾವು ಕಾನೂನು ಹೋರಾಟಕ್ಕೆ ಸಿದ್ಧರಿದ್ದೇವೆ. ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರೋದು ಕೇವಲ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದೆ. ಅತ್ಯಾಚಾರ ಪ್ರಕರಣ ಅಲ್ಲ. ಇದೊಂದು‌ ಸುಳ್ಳು ಕೇಸ್ ಆಗಿದೆ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಇದುವರೆಗೂ ರೇವಣ್ಣ ಅವರಿಗೆ ನೀಡಿದ ಯಾವ ನೋಟಿಸ್‌ನಲ್ಲೂ ಸೆಕ್ಷನ್‌ 376 ಇದೆ ಅಂತ ಉಲ್ಲೇಖಿಸಿಲ್ಲ. ಈಗ 376 ಇದೆ ಎಂದು ಹೇಳುತ್ತಿದ್ದಾರೆ. ಇದರಿಂದ ನಮ್ಮ ಕಕ್ಷಿದಾರರಿಗೆ ಜಾಮೀನು ನೀಡಬಹುದು. ರೇವಣ್ಣ ವಿರುದ್ಧ ದಾಖಲಾಗಿರುವ ಕೇಸ್‌ನಲ್ಲಿ ಎಲ್ಲವೂ ಬೇಲಬಲ್ ಸೆಕ್ಷನ್‌ಗಳಿವೆ. ಹೀಗಾಗಿ ಜಾಮೀನು‌ ನೀಡಬೇಕೆಂದು ಮನವಿ ಮಾಡಿದ ಸಿ.ವಿ. ನಾಗೇಶ್ ತಮ್ಮ ವಾದವನ್ನು ಮುಕ್ತಾಯ ಮಾಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಎಫ್‌ಐಆರ್‌ ಬಳಿಕವೂ ಸೆಕ್ಷನ್‌ ಸೇರಿಸಬಹುದು

ಬಳಿಕ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ರೇವಣ್ಣ ಪರ ವಕೀಲರು ಕೇವಲ ಬೇಲಬಲ್ ಸೆಕ್ಷನ್‌ಗಳ ಬಗ್ಗೆ ಮಾತ್ರ ಹೇಳಿದ್ದಾರೆ. ಪ್ರಾರಂಭದಲ್ಲೇ ಜಾಮೀನು ರಹಿತ ಸೆಕ್ಷನ್‌ಗಳನ್ನು ದಾಖಲಿಸದೆ ಇರಬಹುದು. ತನಿಖೆ ನಡೆದಾಗ ಯಾವಾಗ ಬೇಕಿದ್ದರೂ ಅಪರಾಧ ನಡೆದಿರುವ ಸೆಕ್ಷನ್‌ಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಬಹುದು. ಈ ಬಗ್ಗೆ ಅವಕಾಶವೂ ಇದೆ. ನಂತರವು ಜಾಮೀನು ರಹಿತದ ಸೆಕ್ಷನ್‌ಗಳನ್ನು ಕೂಡಾ ಸೇರಿಸುವ ಅವಕಾಶ ಇದೆ. ಅದಕ್ಕೆ‌ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ ಎಂದು ಹೇಳಿದರು.

ಭಯದಿಂದ ಗಂಡನ ಬಳಿ ಸತ್ಯ ಮುಚ್ಚಿಟ್ಟಿರುವ ಸಂತ್ರಸ್ತೆ

ರೇವಣ್ಣ ಪರ ವಕೀಲರು‌ ಹೇಳುವಂತೆ ಮಹಿಳಾ ಪೊಲೀಸ್ ಇಲ್ಲದೆ ನಮ್ಮ ಪೊಲೀಸರು ಹೋಗಿಲ್ಲ. ಮಹಿಳಾ ಸಿಬ್ಬಂದಿಯ ಜತೆಯಲ್ಲೆ ಹೋಗಿ ದೂರು ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಸಂತ್ರಸ್ತೆ ತನ್ನ ಗಂಡನ ಬಳಿ ಕೆಲವೊಂದನ್ನು ಮುಚ್ಚಿಟ್ಟಿದ್ದಾಳೆ. ಸತ್ಯ ಹೇಳಿದರೆ ಮನೆಯಿಂದ ಹೊರ ಹಾಕುತ್ತಾರೆ ಎಂಬ ಭಯದಲ್ಲಿ ಆಕೆ ಗಂಡನಿಗೆ ಆ ರೀತಿಯಾಗಿ ಹೇಳಿದ್ದಾಳೆ. ಆಕೆಯ ಸುರಕ್ಷತೆಗೆ ಸಂಬಂಧಿಸಿದ ವಿಚಾರವಾಗಿದ್ದರಿಂದ ರಹಸ್ಯ ಸ್ಥಳದಲ್ಲಿ ದೂರು ಪಡೆಯಲಾಗಿದೆ. ಇದು ಸಂಪೂರ್ಣವಾಗಿ ಮಹಿಳೆಯ ರಕ್ಷಣೆಗೆ ಸಂಬಂಧಿಸಿದ ವಿಚಾರವಾಗಿದೆ. ನಾವು ಮೆಮೋ ಹಾಕಿದ್ದೆವು, ರಿಮಾಂಡ್ ಅಪ್ಲಿಕೇಶನ್‌ನಲ್ಲೂ ಲೈಂಗಿಕ ದೌರ್ಜನ್ಯ ಅಂತ ಹೇಳಿದ್ದೆವು. ಆದರೆ, ಈಗ ಸೆಕ್ಷನ್‌ 376 ಹಾಕಿರುವುದಕ್ಕೆ ದಾಖಲೆ ಇದೆ ಎಂದು ಎಸ್‌ಪಿಪಿ ಜಯ್ನಾ ಕೊಠಾರಿ ತಮ್ಮ ವಾದವನ್ನು ಮುಕ್ತಾಯಗೊಳಿಸಿದರು.

Continue Reading

ಕರ್ನಾಟಕ

Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

Bhatkal News: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಘಟನೆ ನಡೆದಿದೆ.

VISTARANEWS.COM


on

Bhatkal News
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ (Bhatkal News) ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವುದು ಶುಕ್ರವಾರ ನಡೆದಿದೆ. ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ದುರ್ಘಟನೆ ನಡೆದಿದೆ. ಸೂರಜ್ ನಾಯ್ಕ (17), ಪಾರ್ವತಿ ಶಂಕರ ನಾಯ್ಕ (35) ಮೃತರು.

ಮೃತರು ಭಟ್ಕಳದ ಕಂಡೆಕೋಡ್ಲು ನಿವಾಸಿಗಳಾಗಿದ್ದಾರೆ. ಮೃತ ಸೂರಜ್ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದಾನೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಘಟನೆ ನಡೆದಿದೆ.

ಇದನ್ನೂ ಓದಿ | Bomb Blast: ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ

ಪಾರು

Drowned in water

ರಾಮನಗರ: ಈಜಲು ಹೋಗಿ‌ದ್ದ ಮೂವರು (Drowned In water) ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ (16) ಮೃತಪಟ್ಟಿದ್ದಾರೆ.

ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರಾಗಿದ್ದು, ಮೃತರೆಲ್ಲರೂ ರಾಮನಗರ ಟೌನ್‌ನ ಸುಲ್ತಾನ್ ನಗರದವರು. ಒಟ್ಟು 8 ಯುವಕರ ತಂಡ ನಮಾಜ್ ಮುಗಿಸಿದ ಈಜಲು ಹೊಂಡಕ್ಕೆ ಇಳಿದಿದ್ದರು. ಈ ವೇಳೆ ಮೂವರು ನೀರುಪಾಲಾದರೆ, ಐವರು ಸಾವಿನ ದವಡೆಯಿಂದ ಬಚಾವ್‌ ಆಗಿದ್ದಾರೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

ಹಾಸನದಲ್ಲಿ ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು (Drowned in water) ನೀರುಪಾಲಾಗಿದ್ದರು. ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು.

ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಮೃತ ಮಕ್ಕಳು ಮುತ್ತಿಗೆ ಗ್ರಾಮದವರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರಲು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದರು. ಮತ್ತೊರ್ವ ಬದುಕುಳಿದಿದ್ದಾನೆ.

Drowned in water 4 boys death

ಇದನ್ನೂ ಓದಿ: Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು‌ ಮುಳುಗಡೆ ಆಗುತ್ತಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದ. ಆದರೆ ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮುಳುಗಿದ್ದರು.

ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ನೀರಲ್ಲಿ ಕೊಚ್ಚಿ ಹೋಗಿದ್ದ ಮೃತದೇಹಗಳನ್ನು ಅಗ್ನಿಶಾಮಕದಳದ ಸಿಬ್ಬಂದಿ ಶೋಧಕಾರ್ಯ ನಡೆಸಿ ಮೇಲೆತ್ತಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Swati Maliwal
ದೇಶ14 seconds ago

Swati Maliwal: ಸ್ವಾತಿ ಮಾಲಿವಾಲ್‌ ಕೇಸ್‌ಗೆ ಟ್ವಿಸ್ಟ್;‌ ತಮ್ಮ ಸಂಸದೆ ವಿರುದ್ಧವೇ ತಿರುಗಿಬಿದ್ದ ಆಪ್‌ ನಾಯಕರು!

Irfan Pathan
ಕ್ರೀಡೆ3 mins ago

Irfan Pathan : ಕಹಿ ನೆನಪು; ಬುರ್ಖಾ ಧರಿಸದ ಪತ್ನಿ ಜತೆ ಫೋಟೋ ತೆಗಿಸಿಕೊಳ್ಳಲು ಒಪ್ಪದ ಇರ್ಫಾನ್ ಪಠಾಣ್​​

Tatkal Tickets
ದೇಶ19 mins ago

Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

Prajwal Revanna Case DK Shivakumar offers Rs 100 crore to get involved in pen drive case Devaraje Gowda allegations
ಕ್ರೈಂ22 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ನಲ್ಲಿ ಶಾಮೀಲಾಗಲು ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

Delhi Airport
ದೇಶ24 mins ago

Delhi Airport: ಹಾರುತ್ತಿದ್ದ ವಿಮಾನದಲ್ಲಿ ಅಗ್ನಿ ಅವಘಡ; ದೆಹಲಿ ಏರ್‌ಪೋರ್ಟ್‌ನಲ್ಲಿ ಎಮರ್ಜನ್ಸಿ ಘೋಷಣೆ!

water aerator
ಬೆಂಗಳೂರು29 mins ago

Water Aerator : ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ರೆ 10 ನಿಮಿಷದಲ್ಲಿ ಮನೆ ತಲುಪುತ್ತದೆ ವಾಟರ್ ಏರಿಯೇಟರ್​

Holenarasipura sexual assault case lot of confusion in the victim statement against HD Revanna Case
ಕ್ರೈಂ1 hour ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

Bhatkal News
ಕರ್ನಾಟಕ1 hour ago

Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

Dubbing Premier League
ಕ್ರಿಕೆಟ್1 hour ago

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Uttar Pradesh
ದೇಶ1 hour ago

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌