Karnataka CM: ರಾತ್ರಿ ಭೋಜನ ಕೂಟ; ಸೋಮವಾರ ಬೆಳಗ್ಗೆ ವೀಕ್ಷಕರ ಸಭೆ; ಸಿಎಂ ಆಯ್ಕೆಗೆ ಏನೆಲ್ಲ ಕಸರತ್ತು? Vistara News
Connect with us

ಕರ್ನಾಟಕ

Karnataka CM: ರಾತ್ರಿ ಭೋಜನ ಕೂಟ; ಸೋಮವಾರ ಬೆಳಗ್ಗೆ ವೀಕ್ಷಕರ ಸಭೆ; ಸಿಎಂ ಆಯ್ಕೆಗೆ ಏನೆಲ್ಲ ಕಸರತ್ತು?

Karnataka CM: ಕರ್ನಾಟಕದ ನೂತನ ಮುಖ್ಯಮಂತ್ರಿಯ ಆಯ್ಕೆಗಾಗಿ ಕಾಂಗ್ರೆಸ್‌ ನಾಯಕರು ಹಲವು ಕಸರತ್ತು ನಡೆಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರಿಗೇ ಸಿಎಂ ಆಯ್ಕೆಯ ನಿರ್ಧಾರ ಬಿಟ್ಟರೂ ಹಲವು ಪ್ರಕ್ರಿಯೆ ಬಾಕಿ ಇವೆ. ಅವುಗಳ ಮಾಹಿತಿ ಇಲ್ಲಿದೆ.

VISTARANEWS.COM


on

How will Congress Elect Karnataka CM, here is planning
Koo

ಬೆಂಗಳೂರು: ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್‌ಗೆ ಮುಖ್ಯಮಂತ್ರಿ (Karnataka CM) ಆಯ್ಕೆಯ ವಿಚಾರವೇ ಕಗ್ಗಂಟಾಗಿದೆ. ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ ನಾಯಕರು ಕಸರತ್ತು ನಡೆಸುತ್ತಿದ್ದು, ಶಾಸಕಾಂಗ ಪಕ್ಷದ ಸಭೆಯನ್ನು ಕೂಡ ನಡೆಸಿದ್ದಾರೆ. ಇನ್ನು, ಎಐಸಿಸಿ ಅಧ್ಯಕ್ಷರೇ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಬೇಕು ಎಂದು ಶಾಸಕಾಂಗ ಸಭೆಯಲ್ಲಿ ತೀರ್ಮಾನಿಸಿದ್ದರೂ, ಶಾಸಕರ ಅಂತಿಮ ತೀರ್ಮಾನವನ್ನು ಹೈಕಮಾಂಡ್‌ಗೆ ಕಳುಹಿಸುವ ಪ್ರಕ್ರಿಯೆ ಬಾಕಿ ಇದೆ.

ಹೈಕಮಾಂಡ್‌ಗೆ ಕರ್ನಾಟಕದ ಶಾಸಕರ ಅಭಿಪ್ರಾಯವನ್ನು ರಾಜ್ಯಕ್ಕೆ ಆಗಮಿಸಿರುವ ವೀಕ್ಷಕರು, ರಾಜ್ಯ ಕಾಂಗ್ರೆಸ್‌ ಉಸ್ತುವಾರ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ತಿಳಿಸಬೇಕಾಗಿದೆ. ಇದಕ್ಕಾಗಿ, ಭಾನುವಾರ ರಾತ್ರಿಯೇ ಕಾಂಗ್ರೆಸ್‌ ಶಾಸಕರಿಗೆ ಔತಣಕೂಟ ಏರ್ಪಡಿಸಿ ಮಾಹಿತಿ ಸಂಗ್ರಹಿಸಲಾಗಿದೆ. ಔತಣಕೂಟದಲ್ಲಿ ಸುರ್ಜೇವಾಲಾ ಹಾಗೂ ವೀಕ್ಷಕರು ಸೇರಿ ಶಾಸಕರ ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸಿದ್ದರಾಮಯ್ಯ ಅವರೋ, ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಬೇಕೋ ಎಂಬುದನ್ನು ಸುರ್ಜೇವಾಲಾ ಹಾಗೂ ವೀಕ್ಷಕರು ಅರಿಯಲಿದ್ದಾರೆ.

ಇದನ್ನೂ ಓದಿ: Karnataka CM: ರಾಜ್ಯದ ಸಿಎಂ ಆಯ್ಕೆ ನಿರ್ಧಾರ ದೆಹಲಿ ಅಂಗಳಕ್ಕೆ; ಖರ್ಗೆಗೆ ಹೊಣೆ, ಯಾರಿಗೆ ಶುಭ ಸೋಮವಾರ?

ಕಾಂಗ್ರೆಸ್‌ನ ಪ್ರತಿಯೊಬ್ಬ ಶಾಸಕರ ಮಾಹಿತಿ ಸಂಗ್ರಹಿಸಿದ ಬಳಿಕ ಸೋಮವಾರ ಬೆಳಗ್ಗೆ ಕಾಂಗ್ರೆಸ್‌ ವೀಕ್ಷಕರು ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಶಾಸಕರ ಅಭಿಪ್ರಾಯವನ್ನು ಹೈಕಮಾಂಡ್‌ಗೆ ರವಾನಿಸಲಿದ್ದಾರೆ. ಇದಾದ ಬಳಿಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಯಾರು ಎಂಬುದನ್ನು ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Honorary Doctorate: ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌, ಎಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್‌

Honorary Doctorate: ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದ ಸಾಧನೆಗೆ ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌ ಹಾಗೂ ರಾಜಕೀಯ ಕ್ಷೇತ್ರಕ್ಕೆ ನೀಡಿರುವ ಗಣನೀಯ ಕೊಡುಗೆ ಪರಿಗಣಿಸಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಘೋಷಿಸಿದೆ.

VISTARANEWS.COM


on

Edited by

S somanath and HD DeveGowda
Koo

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌ ಹಾಗೂ ರಾಜ್ಯಸಭಾ ಸದಸ್ಯ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಭಾಜನರಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಆಯ್ಕೆ ಸಮಿತಿಯು ಈ ಇಬ್ಬರು ಗಣ್ಯರ ಹೆಸರನ್ನು ಗೌರವ ಡಾಕ್ಟರೇಟ್‌ಗೆ (Honorary Doctorate) ಶಿಫಾರಸು ಮಾಡಿತ್ತು. ಇದಕ್ಕೆ ಕರ್ನಾಟಕದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅನುಮೋದನೆ ನೀಡಿದ್ದಾರೆ. ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವದಂದು ಗೌರವ ಡಾಕ್ಟರೇಟ್‌ ಪ್ರಧಾನ ಮಾಡಲಾಗುತ್ತದೆ.

ಕರ್ನಾಟಕ ಬಂದ್‌ನಿಂದ ಘಟಿಕೋತ್ಸವ ಮುಂದೂಡಿಕೆ

ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 29ಕ್ಕೆ ನಿಗದಿಯಾಗಿದ್ದ ಘಟಿಕೋತ್ಸವವನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ. ಶೀಘ್ರದಲ್ಲಿಯೇ ಹೊಸ ದಿನಾಂಕ ನಿಗದಿ ಮಾಡಿ ಘಟಿಕೋತ್ಸವ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಇದನ್ನೂ ಓದಿ | NEP 2020: ಜೈನ್‌ ವಿವಿಯಲ್ಲಿ ಸೆ.28ರಂದು ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾಗೃತಿಗಾಗಿ ವಿಚಾರಗೋಷ್ಠಿ

Continue Reading

ಕಲೆ/ಸಾಹಿತ್ಯ

World Culture Festival: ಸೆ.29ರಿಂದ ವಾಷಿಂಗ್ಟನ್‌ನಲ್ಲಿ ಸಾಂಸ್ಕೃತಿಕ ಒಲಿಂಪಿಕ್ಸ್; ಶ್ರೀ ರವಿಶಂಕರ್ ಗುರೂಜಿ ಮುಂದಾಳತ್ವ

World Culture Festival ಆರ್ಟ್‌ ಆಫ್‌ ಲಿವಿಂಗ್‌ನ 4ನೇ ಆವೃತ್ತಿಯ ʼವಿಶ್ವ ಸಾಂಸ್ಕೃತಿಕ ಉತ್ಸವʼ ಸೆ.29ರಿಂದ ಅ.1ರವರೆಗೆ ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿ.ಸಿ.ಯಲ್ಲಿ ಆಯೋಜಿಸಲಾಗಿದೆ.

VISTARANEWS.COM


on

Edited by

World culture fest
Koo

ಬೆಂಗಳೂರು: ಆರ್ಟ್‌ ಆಫ್‌ ಲಿವಿಂಗ್‌ನ 4ನೇ ಆವೃತ್ತಿಯ ʼವಿಶ್ವ ಸಾಂಸ್ಕೃತಿಕ ಉತ್ಸವʼ ವನ್ನು (World Culture Festival) ಸೆ.29ರಿಂದ ಅ.1ರವರೆಗೆ ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿ.ಸಿ.ಯಲ್ಲಿ ಆಯೋಜಿಸಲಾಗಿದೆ. 17,000 ಕಲಾವಿದರು ಭಾಗವಹಿಸುವ ಈ ʼಸಾಂಸ್ಕೃತಿಕ ಒಲಿಂಪಿಕ್ಸ್ʼನ ಮುಂದಾಳತ್ವವನ್ನು ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರು ವಹಿಸಲಿದ್ದಾರೆ.

ಆರ್ಟ್‌ ಆಫ್‌ ಲಿವಿಂಗ್‌ನ ಅವಿಸ್ಮರಣೀಯವಾದಂತಹ ವೈವಿಧ್ಯತೆಯ ಹಾಗೂ ಏಕತೆಯ ಉತ್ಸವಕ್ಕೆ ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿ.ಸಿ. ಆತಿಥ್ಯ ವಹಿಸಿದೆ. ವಿಶ್ವ ವಿಖ್ಯಾತ ಯುಎಸ್ ಕ್ಯಾಪಿಟಲ್‌ನ ಹಿನ್ನೆಲೆಯನ್ನು ಹೊಂದಿರುವ ವೇದಿಕೆಯೇ ಒಂದು ಫುಟ್ಬಾಲ್‌ ಆಟದ ಮೈದಾನದಷ್ಟಿದೆ. ಈ ಉತ್ಸವದಲ್ಲಿ 17,000 ಕಲಾವಿದರು, ಅನೇಕ ರಾಜ್ಯಗಳ ಮುಖ್ಯಸ್ಥರು, 100ಕ್ಕಿಂತಲೂ ಹೆಚ್ಚು ದೇಶಗಳ ಚಿಂತಕರು ಭಾಗವಹಿಸಲಿದ್ದು, ಎಲ್ಲರೂ ನ್ಯಾಷನಲ್ ಮಾಲ್‌ನಲ್ಲಿ ಸೇರಲಿದ್ದಾರೆ.

ಅರ್ಧ ಮಿಲಿಯನ್ ಜನರು ಈ ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇದರಿಂದಾಗಿ ಈ ಉತ್ಸವವು ವ್ಯಾಪಕವಾದ ಜಾಗತಿಕ ಉತ್ಸವವಾಗಲಿದೆ. ಈ ಉತ್ಸವದಲ್ಲಿ 50 ಪ್ರದರ್ಶನಗಳು ನಡೆಯಲಿವೆ.

ಇದನ್ನೂ ಓದಿ | Raja Marga Column : ಸೆ. 27, ವಿಶ್ವ ಪ್ರವಾಸೋದ್ಯಮ ದಿನ; ನೀವು ಹೋಗಲೇಬೇಕಾದ ಭಾರತದ TOP 10 ತಾಣ

ವಿಶ್ವ ಸಾಂಸ್ಕೃತಿಕ ಉತ್ಸವದ ವಿಶೇಷತೆ

  • ಪಾರಂಪರಿಕ ಚೀನಾದ ಸಾಂಸ್ಕೃತಿಕ ಪ್ರದರ್ಶನ: ಇದರಲ್ಲಿ 1,000 ಹಾಡುಗಾರರು ಮತ್ತು ನರ್ತಕರು ಭಾಗವಹಿಸಲಿದ್ದಾರೆ.
  • 7,000 ನರ್ತಕರನ್ನೊಳಗೊಂಡ ಗಾರ್ಬಾ ನೃತ್ಯ ವೈಭವ.
  • ನೇರ ಸ್ವರಮೇಳದ ಸಹಿತ 700 ಭಾರತೀಯ ಶಾಸ್ತ್ರೀಯ ನರ್ತಕರು.
  • ಹಿಪ್ ಹಾಪ್‌ನ 50ನೇ ವರ್ಷದ ಸಂಭ್ರಮ, ಕುರ್ಟಿಸ್ ಬ್ಲೋ, ಎಸ್ ಹೆಚ್ ಎ- ರಾಕ್, ಸೀಕ್ವೆನ್ಸ್ ಗರ್ಲ್ಸ್, ಡಿಜೆಕೂಲ್ ಮತ್ತಿತರ ಹಿಪ್ ಹಾಪ್‌ನ ಖ್ಯಾತನಾಮರು. ಇವರೊಂದಿಗೆ , ಕಿಂಗ್ ಚಾರ್ಲ್ಸ್ ಹಾಗೂ ಕೆಲ್ಲಿ ಫಾರ್ಮನ್ ರವರಿಂದ ಸಂಯೋಜಿಸಲ್ಪಟ್ಟ ನೃತ್ಯ ಸಂಯೋಜನೆಯಲ್ಲಿ 100 ಬ್ರೇಕ್ ಡಾನ್ಸ್ ನ ನರ್ತಕರು ತಮ್ಮ ಚೊಚ್ಚಲ ಪ್ರದರ್ಶನವನ್ನು ನೀಡಲಿದ್ದಾರೆ.
  • ತಮ್ಮ ಪಾರಂಪರಿಕ ನೃತ್ಯವಾದ ಹೋಪಾಕ್ ನೃತ್ಯ ಪ್ರದರ್ಶನವನ್ನು ನೀಡಲಿರುವ 1000 ಯೂಕ್ರೇನ್ ನ ನರ್ತಕರು.
  • ಗ್ರ್ಯಾಮಿ ಪ್ರಶಸ್ತಿ ವಿಜೇತರಾದ ಮಿಕ್ಕಿ ಫ್ರೀ ಅವರ ನೇತೃತ್ವದಲ್ಲಿ 1000 ಗಿಟಾರ್ ವಾದ್ಯ.
  • ಬಾಬ್ ಮಾರ್ಲೆಯವರ ಖ್ಯಾತ ” ಒನ್ ಲವ್” ನ ಮರುಸೃಷ್ಟಿ ಅವರ ಮೊಮ್ಮಗ ಸ್ಕಿಪ್ ಮಾರ್ಲಿನ್ ಅವರಿಂದ.

ನ್ಯಾಷನಲ್ ಮಾಲ್‌ನಲ್ಲಿ 1963ಯಲ್ಲಿ, ಮಾರ್ಟಿನ್ ಲೂಥರ್ ಕಿಂಗ್ ತಮ್ಮ ಖ್ಯಾತ ” ಐ ಹ್ಯಾವ್‌ ಎ ಡ್ರೀಮ್” ಭಾಷಣವನ್ನು ನೀಡಿ, ಜಗತ್ತಿಗೆ ಸಮನ್ವಯತೆಯ, ಏಕತೆಯ ಸಂದೇಶವನ್ನು ಸಾರಿದರು. ಅದಕ್ಕಿಂತಲೂ ನೂರು ವರ್ಷಗಳ ಹಿಂದೆ (1893) ಚಿಕಾಗೋನಲ್ಲಿ ನಡೆದ ಪ್ರಥಮ ವಿಶ್ವ ಧಾರ್ಮಿಕ ಸಂಸತ್‌ನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಮಿಂಚಿನ ಭಾಷಣವನ್ನು ನೀಡಿ, ಸಭಿಕರನ್ನು ತಮ್ಮ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದರು. ಜಗತ್ತಿನ ದೊಡ್ಡ ಧರ್ಮಗಳ ಪ್ರತಿನಿಧಿಗಳನ್ನು ಸಹೋದರ, ಸಹೋದರಿಯರೇ ಎಂದು ಕರೆದು, ಧಾರ್ಮಿಕ ದ್ವಂದ್ವತೆ ಅಸಹಿಷ್ಣುತೆಯನ್ನು ಕೊನೆಗಾಣಿಸಬೇಕೆಂಬ ಕರೆಯನ್ನು ನೀಡಿದರು.

ಅದೇ ರೀತಿ 2023ರ ಸೆ.29ರಂದು ನ್ಯಾಷನಲ್ ಮಾಲ್‌ನಲ್ಲಿ ಗುರುದೇವ್ ಶ್ರೀ ಶ್ರೀ ರವಿಶಂಕರರು ” ಒಂದೇ ಜಾಗತಿಕ ಕುಟುಂಬ” ದ ಫಲಕದಡಿ ಎಲ್ಲಾ ಗಡಿಗಳ, ಧರ್ಮಗಳ, ಪಂಥಗಳ, 180 ದೇಶಗಳ ಜನರನ್ನು ಒಗ್ಗೂಡಿಸಿ, ಎಲ್ಲರ ನಡುವೆಯೂ ಇರುವ ವಿಭನೆಗಳನ್ನು ಜೋಡಿಸುವ ಸೇತುವೆಯಾಗಲಿದ್ದಾರೆ.

ಆಹಾರದಂತಹ ಒಗ್ಗೂಡಿಸುವ ವಿಷಯ ಮತ್ತೊಂದಿಲ್ಲ. ಈ ಉತ್ಸವದಲ್ಲಿ ಜಗತ್ತಿನ ಎಲ್ಲೆಡೆಯ ಆಹಾರಗಳ ಮೇಳವೂ ನಡೆಯಲಿದೆ. ಈ ಉತ್ಸವದ ವಿಶೇಷತೆಯೆಂದರೆ, ಚಿಗುರುತ್ತಿರುವ ಕಲಾವಿದರಿಗೆ, ಪ್ರದರ್ಶಕರಿಗೆ, ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ನೀಡುತ್ತಿರುವುದು.

ಇದನ್ನೂ ಓದಿ | UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

ಉತ್ಸವದಲ್ಲಿ ಭಾಗವಹಿಸಲಿರುವ ಗಣ್ಯ ಭಾಷಣಕಾರರು

ವಿಶ್ವ ಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಎಚ್. ಇ. ಬಾನ್ ಕೀ ಮೂನ್, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್, ಅಮೆರಿಕದ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ, ಯುಎಸ್‌ ಸಂಸದರಾದ ರಿಕ್ ಸ್ಕಾಟ್, ನಾನ್ಸಿ ಪೆಲೋಸಿ, ಭಾರತದ ಮಾಜಿ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

Continue Reading

ಕರ್ನಾಟಕ

Kolar News: ಬಾರ್‌ನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

Kolar News: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಬಳಿ ಇರುವ ಬಾರ್ ಒಂದರಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.

VISTARANEWS.COM


on

Edited by

Knives
Koo

ಕೋಲಾರ: ಬಾರ್‌ನಲ್ಲಿ ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ (Kolar News) ಮಾಲೂರು ತಾಲೂಕಿನ ಲಕ್ಕೂರು ಬಳಿ ಇರುವ ಬಾರ್ ಒಂದರಲ್ಲಿ ನಡೆದಿದೆ. ಜಗದೇನಹಳ್ಳಿ ಗ್ರಾಮದ ನಿವಾಸಿ ಬೈಯ್ಯರೆಡ್ಡಿ (35) ಮೃತರು. ಲಕ್ಕೂರು-ಚಿಕ್ಕ ತಿರುಪತಿ ರಸ್ತೆಯಲ್ಲಿರುವ ಬಾರ್‌ನಲ್ಲಿ ಹತ್ಯೆ ನಡೆದಿದೆ. ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Electric Fence : ಜಮೀನಿಗೆ ಹಾಕಿದ್ದ ಹೈವೋಲ್ಟೇಜ್ ವಿದ್ಯುತ್‌ ಬೇಲಿ ಸ್ಪರ್ಶಿಸಿ ಇಬ್ಬರು ರೈತರು ದಾರುಣ ಸಾವು

ವಿದೇಶಿ ಮಹಿಳೆ ಬಳಿ ಕಂತೆ‌ ಕಂತೆ ಭಾರತೀಯ ಕರೆನ್ಸಿ ನೋಟು

Indian currency

ದೇವನಹಳ್ಳಿ: ವಿದೇಶಿ ಮಹಿಳೆ ಬಳಿ ಕಂತೆ‌ ಕಂತೆ ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿರುವುದು ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕಂಡುಬಂದಿದೆ. ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF) ವಶಕ್ಕೆ ಪಡೆದು, ಹಣವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ | Car Accident: ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವು

ವಿದೇಶಿ ಮಹಿಳೆ ಬಳಿ ಗರಿಗರಿ ನೋಟು ನೋಡಿ ಅಧಿಕಾರಿಗಳು ಶಾಕ್‌ ಆಗಿದ್ದಾರೆ. ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ವಿದೇಶಿ ಮೂಲದ ಮಹಿಳೆಯ ಬ್ಯಾಗ್‌ನಲ್ಲಿ ಲಗೇಜ್ ಸ್ಕ್ಯಾನಿಂಗ್ ವೇಳೆ 15 ಲಕ್ಷ ರೂ. ಪತ್ತೆಯಾಗಿದೆ. ಹಣದ ಸಮೇತ ಮಹಿಳೆಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡಸುತ್ತಿದ್ದಾರೆ. ನಂತರ ಹಣ ಹಾಗೂ ಮಹಿಳೆಯನ್ನು ಆದಾಯ ತೆರಿಗೆ ಇಲಾಖೆ‌ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ.

ಜಮೀನಿಗೆ ಹಾಕಿದ್ದ ಹೈವೋಲ್ಟೇಜ್ ವಿದ್ಯುತ್‌ ಬೇಲಿ ಸ್ಪರ್ಶಿಸಿ ಇಬ್ಬರು ರೈತರು ದಾರುಣ ಸಾವು

ಚಿಕ್ಕಬಳ್ಳಾಪುರ: ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ (Electric Fence) ಸ್ಪರ್ಷಿಸಿ ಇಬ್ಬರು ರೈತರು ದಾರುಣವಾಗಿ ಪ್ರಾಣ (Two Farmers dead) ಕಳೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ (Chikkaballapura News) ಗೌರಿಬಿದನೂರು ತಾಲ್ಲೂಕಿನ ಕುರುಡಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟವರನ್ನು ಕುರುಡಿ ಗ್ರಾಮದ ತಿಪ್ಪೇಸ್ವಾಮಿ (26) ಹಾಗೂ ಅಂಬರೀಶ್ (28) ಎಂದು ಗುರುತಿಸಲಾಗಿದೆ.

ವೆಂಕಟೇಶಪ್ಪ ಎನ್ನುವವರಿಗೆ ಸೇರಿದ ಜಮೀನು ಬಳಿ ಘಟನೆ ನಡೆದಿದೆ. ವೆಂಕಟೇಶಪ್ಪ ತನ್ನ ಜಮೀನಿಗೆ ಕಾಡು ಪ್ರಾಣಿಗಳ ಕಾಟವನ್ನು ತಡೆಯಲು ಅನಧಿಕೃತವಾಗಿ ವಿದ್ಯುತ್‌ ಬೇಲಿ (Illegal Electric Fence) ಹಾಕಿದ್ದರು. ತಿಪ್ಪೇಸ್ವಾಮಿ ಮತ್ತು ಅಂಬರೀಷ್‌ ಅವರು ತಮ್ಮ ಪಕ್ಕದ ಜಮೀನಿಗೆ ಅಳವಡಿಸಿದ್ದ ವಿದ್ಯುತ್ ಬೇಲಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ ಪರಿಣಾಮ ವಿದ್ಯುತ್‌ ಶಾಕ್‌ ಹೊಡೆದು ಪ್ರಾಣ ಕಳೆದುಕೊಂಡಿದ್ದಾರೆ.

ಸಾಮಾನ್ಯವಾಗಿ ವಿದ್ಯುತ್‌ ಬೇಲಿ ಹಾಕುವುದಿದ್ದರೆ ಅಲ್ಪ ಪ್ರಮಾಣದ ವಿದ್ಯುತ್‌ ಹಾಯಿಸಲಾಗುತ್ತದೆ. ಸಾಮಾನ್ಯವಾಗಿ ಸೋಲಾರ್‌ ಬೇಲಿ ಬಳಸಲಾಗುತ್ತದೆ. ಪ್ರಾಣಿಗಳು ಬಂದರೆ ಅವುಗಳಿಗೆ ಸಣ್ಣದಾಗಿ ಶಾಕ್‌ ಹೊಡೆಯುವಂತೆ ವೋಲ್ಟೇಜ್‌ ಸೆಟ್‌ ಮಾಡಲಾಗುತ್ತದೆ. ಅಂದರೆ ಇದಕ್ಕೆ ಪ್ರತ್ಯೇಕ ಸಲಕರಣೆ ಬೇಕಾಗುತ್ತದೆ. ಆದರೆ, ವೆಂಕಟೇಶಪ್ಪ ಮಾತ್ರ ಬೋರ್ ವೆಲ್‌ ವಯರನ್ನೇ ನೇರವಾಗಿ ತಂತಿ ಬೇಲಿಗೆ ಕನೆಕ್ಟ್‌ ಮಾಡಿ ವಿದ್ಯುತ್‌ ಹರಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ | PSI Recruitment Scam: ಕೊನೆಗೂ ಅಮೃತ್‌ ಪಾಲ್‌ ಸೆಂಟ್ರಲ್‌ ಜೈಲಿನಿಂದ ಬಿಡುಗಡೆ

ಸ್ಥಳಕ್ಕೆ ಚಿಕ್ಕಬಳ್ಳಾಪುರ ವಿಭಾಗದ ಡಿವೈಎಸ್ಪಿ ಶಿವಕುಮಾರ್, ವೃತ್ತ ನಿರೀಕ್ಷಕ ಸತ್ಯನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೌರೀಬಿದನೂರು ಗ್ರಾಮಾಂತರ ಪೊಲೀಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಕರ್ನಾಟಕ

VISTARA TOP 10 NEWS : ಎಲ್ಲರ ಕಣ್ಣು ಶುಕ್ರವಾರದ ಕರ್ನಾಟಕ ಬಂದ್‌ನತ್ತ, ಇಸ್ರೋ ಚಿತ್ತ ಮಾತ್ರ ಶುಕ್ರನತ್ತ!

VISTARA TOP 10 NEWS: ಕರ್ನಾಟಕ ಬಂದ್‌ಗೆ ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ಇತ್ತ ಇಸ್ರೋ ಮಂಗಳದತ್ತ ಹೊರಡಲು ಸಜ್ಜಾಗಿದೆ. ಹೀಗೆ ದಿನದ ಪ್ರಮುಖ ಸುದ್ದಿಗಳ ಸಾರವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Edited by

Vistara top 10 News 2709
Koo

1.ಕಾವೇರಿ ಉಳಿವಿಗಾಗಿ ಸಿಡಿದೆದ್ದ ಬಿಜೆಪಿ, ಜೆಡಿಎಸ್; ವಿಧಾನಸೌಧದ ಮುಂದೆ ದೋಸ್ತಿಗಳ ಪ್ರತಿಭಟನೆ
ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಬಿಜೆಪಿ – ಜೆಡಿಎಸ್‌ ನಾಯಕರು (BJP JDS leaders) ಜಂಟಿಯಾಗಿ ಬುಧವಾರ (ಸೆಪ್ಟೆಂಬರ್‌ 27) ಅಖಾಡಕ್ಕೆ ಇಳಿದಿದ್ದು, ರಾಜ್ಯ ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಡಿಎಂಕೆ ಏಜೆಂಟರಂತೆ ವರ್ತಿಸುತ್ತಿದೆ ಬಿ.ಎಸ್.‌ ಯಡಿಯೂರಪ್ಪ ಗುಡುಗಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

2 ಬೆಂಗಳೂರು ಬಂದ್ ಬಳಿಕ ಶುಕ್ರವಾರದ ಕರ್ನಾಟಕ ಬಂದ್‌ಗೆ ಸಿದ್ಧತೆ: ಏನಿರುತ್ತೆ? ಏನಿರಲ್ಲ?
ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್‌ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ, ಕೆಲವು ಬೆಂಬಲ ಕೊಡುವುದಿಲ್ಲ ಎಂದಿವೆ. ಹಾಗಿದ್ದರೆ ಹೇಗಿರುತ್ತದೆ ಬಂದ್‌? ಯಾರೆಲ್ಲ ಬೆಂಬಲ ನೀಡಿದ್ದಾರೆ? ಇಲ್ಲಿದೆ ವಿವರ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

3. ಕರ್ನಾಟಕ ಬಂದ್‌ ದಿನವೇ ಪ್ರಾಧಿಕಾರದ ಸಭೆ-ಕಾವೇರಿ ಹೋರಾಟಕ್ಕೆ ನಂಜಾವಧೂತ, ಸುತ್ತೂರು ಶ್ರೀ ಎಂಟ್ರಿ
ಕರ್ನಾಟಕ ಬಂದ್‌ ನಡೆಯಲಿರುವ ಸೆ. 29ರಂದೇ ಕಾವೇರಿ ಪ್ರಾಧಿಕಾರದ ಸಭೆಯೂ ನಡೆಯಲಿದೆ. ಈ ಬಾರಿ ಏನಾಗಲಿದೆ ಎಂಬ ಕುತೂಹಲವಿದೆ. ಈ ನಡುವೆ ಇಬ್ಬರು ಸ್ವಾಮೀಜಿಗಳು ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. ಬಿಜೆಪಿ ದೋಸ್ತಿಯಿಂದ ಜಾತ್ಯತೀತ ನಿಲುವು ಬದಲಾಗಲ್ಲ ಎಂದ ಎಚ್‌.ಡಿ. ದೇವೇಗೌಡ
ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರು ಬಿಜೆಪಿ ಜತೆಗಿನ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್‌ನಿಂದ ಪಕ್ಷಕ್ಕಾದ ಅನ್ಯಾಯದ ಬಗ್ಗೆ ಹೇಳಿದ್ದಾರೆ. ಈ ಹಿಂದೆ ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿದ್ದು ಯಾರು ಎಂಬ ಬಗ್ಗೆಯೂ ಚರ್ಚೆ ಮಾಡೋಣ ಎಂದು ಸವಾಲು ಹಾಕಿದ್ದಾರೆ. ಇದೇವೇಳೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರೂ ಜಾತ್ಯತೀತ ನಿಲುವು ಬದಲಾಗುವುದಿಲ್ಲ ಎಂದಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ಲೋಕಸಮರ ಮುನ್ನ ಬಿಜೆಪಿ ರಥಯಾತ್ರೆ; 2.5 ಲಕ್ಷ ಗ್ರಾಮಗಳಲ್ಲಿ ಪ್ರಚಾರದ ರಣತಂತ್ರ
ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲು ಬಿಜೆಪಿಯು ರಣತಂತ್ರ ರೂಪಿಸಿದೆ. ಗ್ರಾಮೀಣ ಸಂವಾದ ಯಾತ್ರೆ ಮೂಲಕ ಗ್ರಾಮೀಣ ಭಾಗದ ಜನರನ್ನು ಸೆಳೆಯಲು ಯೋಜನೆ ರೂಪಿಸಲಾಗಿದೆ. 2.5 ಲಕ್ಷ ಗ್ರಾಮ ತಲುಪುವ ಯಾತ್ರೆ ಮಾಹಿತಿ ಇಲ್ಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಭಾರತದಲ್ಲಿ ಶುರುವಾಯ್ತು ಆಪರೇಷನ್‌ ಖಲಿಸ್ತಾನ್‌‌‌- ಒಂದೇ ದಿನ ದೇಶದ 50 ಕಡೆ ಎನ್‌ಐಎ ದಾಳಿ
ಖಲಿಸ್ತಾನ್ ಉಗ್ರರು (Khalistani Terrorist) ಹಾಗೂ ಗ್ಯಾಂಗ್‌ಸ್ಟರ್‌ಗಳ (gangsters) ನಡುವಿನ ಲಿಂಕ್‌ಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ಆರು ರಾಜ್ಯಗಳ 50 ಸ್ಥಳಗಳಲ್ಲಿ ಬೃಹತ್‌ ಪ್ರಮಾಣದ ದಾಳಿ ನಡೆಸಿದೆ. ಇದು ಖಲಿಸ್ತಾನಿಗಳ ವಿರುದ್ಧದ ದೊಡ್ಡ ಆಪರೇಷನ್‌ ಎನ್ನಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಸತ್ತು ಹೋಯ್ತಾ ಮಾನವೀಯತೆ?; ಅತ್ಯಾಚಾರಕ್ಕೀಡಾದ ಬಾಲಕಿ ಕಣ್ಣೀರಿಟ್ಟು ಅಡ್ಡಾಡಿದ್ರೂ ಕರಗದ ಮನಸ್ಸು
ಮಧ್ಯಪ್ರದೇಶದಲ್ಲಿ (Madhya Pradesh) 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯು ಸಹಾಯಕ್ಕಾಗಿ ಅಂಗಲಾಚಿಕೊಂಡು ಮನೆ ಮನೆಗೆ ಹೋದರೂ ಯಾರೂ ಸಹಾಯ ಮಾಡದಿರುವುದು ಜನರ ಮನಸ್ಥಿತಿಗೂ ಕನ್ನಡಿ ಹಿಡಿದಂತಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ಇಸ್ರೋಗೆ ಶುರುವಾಯ್ತು ಶುಕ್ರದೆಸೆ- ಚಂದ್ರ, ಸೂರ್ಯನ ಬಳಿಕ ಶುಕ್ರಯಾನಕ್ಕೆ ಭಾರತ ಸಿದ್ಧತೆ
ಚಂದ್ರಯಾನ 3 ಮಿಷನ್‌ (Chandrayaan 3) ಯಶಸ್ಸಿನ ಬಳಿಕ ಜಾಗತಿಕವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಗೌರವ ನೂರ್ಮಡಿಯಾಗಿದೆ. ಆದಿತ್ಯ ಮಿಷನ್‌ ಬೆನ್ನಲ್ಲೇ ಇಸ್ರೋ ಗಮನ ಈಗ ಶುಕ್ರನ (Venus Misssion) ಮೇಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9.- ಇರಾಕ್‌‌ ಅಗ್ನಿಅವಘಡದಲ್ಲಿ ವಧು, ವರ ಸೇರಿ 114ಕ್ಕೂ ಹೆಚ್ಚುಮಂದಿ ಸಜೀವ ದಹನ
ಇರಾಕ್‌ನ ನಿನೆವೆಹ್‌ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿರುವ ಮದುವೆ ಹಾಲ್‌ನಲ್ಲಿ (Wedding Hall) ಭೀಕರ ಅಗ್ನಿ ದುರಂತ (Iraq Fire Accident) ಸಂಭವಿಸಿದ್ದು, 114 ಜನ ಮೃತಪಟ್ಟಿದ್ದಾರೆ. ದುರಂತದಲ್ಲಿ ಮದುಮಕ್ಕಳು ಕೂಡ ಮೃತಪಟ್ಟಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. 101 ಕೋಟಿ ರೂ. ಮೌಲ್ಯದ ಷೇರು ಹೊಂದಿರುವ ಈ ವ್ಯಕ್ತಿ ಹೇಗೆ ಜೀವನ ಸಾಗಿಸುತ್ತಿದ್ದಾರೆ ನೋಡಿ!
ಒಂದು ದೊಡ್ಡ ಚಡ್ಡಿ ಧರಿಸಿ, ಮೇಲುಮೈಯಲ್ಲಿ ಇನ್ಯಾವ ದಿರಸನ್ನೂ ಧರಿಸದೆ ಅತ್ಯಂತ ಸರಳವಾಗಿ ನಗುತ್ತಿರುವ ಈ ಹಿರಿಯ ನಾಗರಿಕರ ಆಸ್ತಿ ಮೌಲ್ಯ ಎಷ್ಟು ಎಂದು ತಿಳಿದರೆ ನೀವು ನಿಜಕ್ಕೂ ಬೆಚ್ಚಿ ಬೀಳಬಹುದು. ಹೌದು, ಇವರೇ ಹೇಳಿಕೊಳ್ಳುವಂತೆ, ಇವರ ಬಳಿ 101 ಕೋಟಿ ರೂ. ಮೌಲ್ಯದ ಷೇರುಗಳಿವೆ! ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
dina bhavishya September 27
ಪ್ರಮುಖ ಸುದ್ದಿ51 mins ago

Dina Bhavishya : ಈ ರಾಶಿಯವರಿಗೆ ಇಂದು ಕಿರಿಕಿರಿ, ಆತಂಕದ ಭಾವವೇ ಹೆಚ್ಚು; ಸ್ವಲ್ಪ ಎಚ್ಚರವಹಿಸಿ!

Sphoorti Salu
ಸುವಚನ51 mins ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

S somanath and HD DeveGowda
ಕರ್ನಾಟಕ6 hours ago

Honorary Doctorate: ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌, ಎಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್‌

Gujarat High Court
ದೇಶ6 hours ago

ಜಿಮೇಲ್ ಓಪನ್ ಆಗ್ಲಿಲ್ಲ, ಅದ್ಕೆ ಜೈಲಿನಿಂದ ಬಿಡಲಿಲ್ಲ! ಹೈಕೋರ್ಟ್ ಬೇಲ್ ನೀಡಿದ್ರೂ 3 ವರ್ಷ ಜೈಲಿನಲ್ಲೇ ಉಳಿದ ಯುವಕ!

World culture fest
ಕಲೆ/ಸಾಹಿತ್ಯ6 hours ago

World Culture Festival: ಸೆ.29ರಿಂದ ವಾಷಿಂಗ್ಟನ್‌ನಲ್ಲಿ ಸಾಂಸ್ಕೃತಿಕ ಒಲಿಂಪಿಕ್ಸ್; ಶ್ರೀ ರವಿಶಂಕರ್ ಗುರೂಜಿ ಮುಂದಾಳತ್ವ

credit cards
ದೇಶ7 hours ago

Flipkart, Amazon Sale: ಹಬ್ಬದ ಸೀಸನ್‌ ಆನ್‌ಲೈನ್ ಖರೀದಿ, ಕ್ರೆಡಿಟ್‌ ಕಾರ್ಡ್‌ದಾರರು ತಿಳಿದುಕೊಳ್ಳಬೇಕಾದ ಸಂಗತಿಗಳು

virat kohli dance
ಕ್ರಿಕೆಟ್7 hours ago

Viral Video: ಬ್ರೇಕ್​ ಪಡೆದ ಆಸೀಸ್​ ಆಟಗಾರರ ಮುಂದೆ ಬ್ರೇಕ್​ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ

Knives
ಕರ್ನಾಟಕ7 hours ago

Kolar News: ಬಾರ್‌ನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

Afghan cricketer Naveen-ul-Haq
ಕ್ರಿಕೆಟ್7 hours ago

​ಕೊಹ್ಲಿಗೆ ಹೆದರಿಯೇ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ 24 ವರ್ಷದ ನವೀನ್​ ಉಲ್​ ಹಕ್​

Vistara top 10 News 2709
ಕರ್ನಾಟಕ7 hours ago

VISTARA TOP 10 NEWS : ಎಲ್ಲರ ಕಣ್ಣು ಶುಕ್ರವಾರದ ಕರ್ನಾಟಕ ಬಂದ್‌ನತ್ತ, ಇಸ್ರೋ ಚಿತ್ತ ಮಾತ್ರ ಶುಕ್ರನತ್ತ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

bangalore bandh
ಕರ್ನಾಟಕ2 days ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ3 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ3 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ3 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ3 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ4 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌