ಬೆಂಗಳೂರು: ನಗರದ ಕೆ.ಆರ್. ಮಾರುಕಟ್ಟೆ ಸಮೀಪ ಆಕಸ್ಮಿಕವಾಗಿ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಹೊಯ್ಸಳ ಕಾರು ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಶಾರ್ಟ್ ಸರ್ಕಿಟ್ (Short-circuit) ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಸೋಮವಾರ ಪೊಲೀಸರು ಗಸ್ತಿನಲ್ಲಿದ್ದಾಗ ಹೊಯ್ಸಳ ಸಂಖ್ಯೆ 79 ಎರ್ಟಿಗಾ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ತಕ್ಷಣ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ. ಕಾರಿನಲ್ಲಿ ಇಬ್ಬರು ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕಿಟ್ ಆಗಿ ಈ ಅವಘಡ ಸಂಭವಿಸಿರಬಹುದು ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಬೆಂಕಿ ಜ್ವಾಲೆಗೆ ಕಾರು ಭಾಗಶಃ ಸುಟ್ಟು ಕರಕಲಾಗಿದೆ.
ಇದನ್ನೂ ಓದಿ | ಬೆಂಗಳೂರಿನ ಹೆಬ್ಬಾಳ ಬಳಿ ಸರಣಿ ಅಪಘಾತ, ಪ್ರಾಣಾಪಾಯದಿಂದ ಪಾರಾದ ಕಾರು ಚಾಲಕರು