Site icon Vistara News

ಜೆಡಿಎಸ್‌ ತೊರೆದ ಹೆಚ್‌.ಆರ್‌. ಶ್ರೀನಾಥ್‌, ಮತ್ತೆ ಕಾಂಗ್ರೆಸ್‌ ಸೇರಲು ಸಿದ್ಧತೆ

hr srinath

ಕೊಪ್ಪಳ : ಜೆಡಿಎಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಎಂಎಲ್‌ಸಿ ಹೆಚ್‌. ಆರ್‌. ಶ್ರೀನಾಥ್‌ ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್‌ನ ಮಾಜಿ ಸದಸ್ಯರಾಗಿರುವ ಹೆಚ್‌.ಆರ್‌. ಶ್ರೀನಾಥ್‌ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್‌ ಸೇರಿದ್ದರು.

ಇಂದು (ಮಂಗಳವಾರ) ಜೆಡಿಎಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್‌ ರಾಜ್ಯಾಧ್ಯಕ್ಷರಿಗೆ ಸಲ್ಲಿಕೆ ಮಾಡಿದ್ದಾರೆ. ಪತ್ರದಲ್ಲಿ ತಾನು ಮನಃಪೂರ್ವಕವಾಗಿಯೇ ರಾಜೀನಾಮೆ ನೀಡಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನು ಓದಿ| ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸಿದ ಬಿಜೆಪಿ, ಜೆಡಿಎಸ್‌ ಅಭ್ಯರ್ಥಿಗಳ ವಿರುದ್ದ ಎಫ್‌ಐಆರ್‌

ಸದ್ಯ ಮತ್ತೆ ಕಾಂಗ್ರೆಸ್‌ ಸೇರಲು ನಿರ್ಧರಿಸಿರುವ ಹೆಚ್‌. ಆರ್‌. ಶ್ರೀನಾಥ್‌ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇನ್ನೇನಿದ್ದರೂ ಅಧಿಕೃತವಾಗಿ ಕಾಂಗ್ರೆಸ್‌ ಸೇರಲು ಹೆಚ್‌.ಆರ್‌. ಶ್ರೀನಾಥ್‌ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದ ತಿಳಿದುಬಂದಿದೆ.

Exit mobile version