HSRP Number Plate : ಹಳೆ ವಾಹನಗಳಿಗೂ ಇನ್ನು HSRP ನಂಬರ್‌ ಪ್ಲೇಟ್‌ ಕಡ್ಡಾಯ; ನ. 17ರ ನಂತ್ರ ಬೀಳುತ್ತೆ ದಂಡ! Vistara News

ಕರ್ನಾಟಕ

HSRP Number Plate : ಹಳೆ ವಾಹನಗಳಿಗೂ ಇನ್ನು HSRP ನಂಬರ್‌ ಪ್ಲೇಟ್‌ ಕಡ್ಡಾಯ; ನ. 17ರ ನಂತ್ರ ಬೀಳುತ್ತೆ ದಂಡ!

HSRP Number Plate : ರಾಜ್ಯದಲ್ಲಿ ಅತಿ ಸುರಕ್ಷಿತ ನಂಬರ್‌ ಪ್ಲೇಟ್‌ ನ್ನು ಕಡ್ಡಾಯಗೊಳಿಸಲಾಗಿದೆ. 2019ಕ್ಕಿಂತ ಹಿಂದಿನ ವಾಹನಗಳು ನವೆಂಬರ್‌ 17ರ ಒಳಗೆ ನಂಬರ್‌ ಪ್ಲೇಟ್‌ ಬದಲಿಸಿಕೊಳ್ಳಬೇಕು.

VISTARANEWS.COM


on

Number plates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ ನವೆಂಬರ್‌ 17ರಿಂದ ರಾಜ್ಯದ ಪ್ರತಿಯೊಂದು ವಾಹನಕ್ಕೂ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌-High Security Registration Number Plate- HSRP) ಕಡ್ಡಾಯಗೊಳಿಸಲಾಗಿದ್ದು, ಅಳವಡಿಸದೆ ಹೋದರೆ ದಂಡ ಕಟ್ಟಬೇಕಾಗುತ್ತದೆ. ಹೀಗಾಗಿ ಈಗಿನಿಂದಲೇ ನಿಮ್ಮ ವಾಹನಕ್ಕೆ ಹೊಸ ನಂಬರ್‌ ಪ್ಲೇಟ್‌ (HSRP Number Plate) ಅಳವಡಿಸಿಕೊಳ್ಳುವುದು ಉತ್ತಮ.

ರಾಜ್ಯ ಸಾರಿಗೆ ಇಲಾಖೆ ಆಗಸ್ಟ್‌ 17ರಂದು ಹೊರಡಿಸಿದ ಆದೇಶದಲ್ಲಿ ಈ ವಿಚಾರವನ್ನು ಸ್ಪಷ್ಟವಾಗಿ ತಿಳಿಸಲಾಗಿದೆ. ಎಲ್ಲ ಹಳೆಯ ವಾಹನಗಳಿಗೆ ನವೆಂಬರ್‌ನಿಂದ ಅತಿ ಸುರಕ್ಷಿತ ನಂಬರ್‌ ಪ್ಲೇಟ್‌ ಕಡ್ಡಾಯ (New number plate Compulsory) ಮಾಡಲಾಗುತ್ತದೆ. ನಂತರವೂ ನಂಬರ್‌ ಪ್ಲೇಟ್‌ ಬದಲಿಸಿಕೊಳ್ಳದಿದ್ದರೆ 500ರಿಂದ 1000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಆದೇಶ ಹೊಸದಲ್ಲ, ಕಡ್ಡಾಯ ಮತ್ತು ದಂಡ ಹೊಸದು

ನಿಜವೆಂದರೆ, ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸುವಂತೆ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯವು 2001ರಲ್ಲೇ ಆದೇಶ ಹೊರಡಿಸಿತ್ತು. ಆದರೆ, ಅದನ್ನು ಕಡ್ಡಾಯ ಮಾಡಿರಲಿಲ್ಲ. 2018ರಲ್ಲಿ ಹೊರಬಂದ ಹೊಸ ಆದೇಶದಲ್ಲಿ 2019ರ ಏ.1ರ ನಂತರ ನೋಂದಣಿಯಾಗುವ ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಬೇಕೆಂದು ಸೂಚಿಸಲಾಗಿತ್ತು. ಇಡೀ ದೇಶಕ್ಕೆ ಈ ಕಾನೂನು ಅನ್ವಯವಾಗುತ್ತಿದೆ.

HSRP Number plates
ಹೀಗಿರುತ್ತದೆ ಹೊಸ ನಂಬರ್‌ ಪ್ಲೇಟ್‌

ಇದರ ಪ್ರಕಾರ, 2019ರ ಏ.1ರಿಂದ ಹೊಸ ವಾಹನಗಳಿಗೆ ಶೋ ರೂಂಗಳಲ್ಲೇ ಎಚ್‌ಎಸ್‌ಆರ್‌ಪಿ ಅಳವಡಿಸಲಾಗುತ್ತಿದೆ. ಹಳೆ ವಾಹನಗಳಿಗೆ HSRP ಕಡ್ಡಾಯವಲ್ಲದೆ ಇದ್ದರೂ ಸಾಕಷ್ಟು ಮಂದಿ ತಮ್ಮ ವಾಹನಗಳ ನಂಬರ್‌ ಪ್ಲೇಟ್‌ ಬದಲಿಸಿದ್ದಾರೆ. ಆದರೆ, ಬಹುಪಾಲು ಮಾಡಿಸಿಕೊಂಡಿಲ್ಲ.

ರಾಜ್ಯಲ್ಲಿರುವ ಹಳೆ ವಾಹನಗಳ (2019ರ ಏಪ್ರಿಲ್‌ 1ಕ್ಕೆ ಹಿಂದಿನದ್ದು) ಪೈಕಿ 2 ಕೋಟಿ ವಾಹನಗಳಲ್ಲಿ ಹಳೆ ನಂಬರ್‌ ಪ್ಲೇಟ್‌ ಇದೆ. ಅವುಗಳ ಪೈಕಿ ಶೇಕಡಾ 70 ದ್ವಿಚಕ್ರ ವಾಹನಗಳು. ಇದೀಗ ಆ ಹಳೆ ವಾಹನಗಳ ನೋಂದಣಿ ಫಲಕಗಳನ್ನು ಬದಲಿಸಿ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಬೇಕೆಂದು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

ರಾಜ್ಯದಲ್ಲಿ 2019ರ ಏ.1 ಕ್ಕೂ ಮುನ್ನ ನೋಂದಣಿಯಾದ ಎಲ್ಲಾ ಹಳೆ ವಾಹನಗಳಿಗೆ ನ.17ರೊಳಗೆ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಪ್ಲೇಟ್‌ ಅಳವಡಿಸಬೇಕು. ಇಲ್ಲದಿದ್ದರೆ ವಾಹನ ಮಾಲೀಕರಿಗೆ 500ರಿಂದ 1 ಸಾವಿರ ರೂ.ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಆಯುಕ್ತರು ಎ.ಎಂ.ಯೋಗೀಶ್‌ ತಿಳಿಸಿದ್ದಾರೆ.

HSRP ನಂಬರ್‌ ಪ್ಲೇಟ್‌ ಮಾಡಿಸುವುದು ಎಲ್ಲಿ?

  1. ಹಳೆ ವಾಹನಗಳ ಮಾಲೀಕರು ವಾಹನಗಳ ಅಧಿಕೃತ ಡೀಲರ್‌ಗಳು ಅಥವಾ ಶೋ ರೂಂಗಳ ಮೂಲಕ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗೆ ಮುಂಗಡವಾಗಿ ಕೋರಿಕೆ ಸಲ್ಲಿಸಿ ಹಣ ಪಾವತಿಸಬೇಕಾಗುತ್ತದೆ.
  2. ನಾಲ್ಕು ಚಕ್ರಗಳ ವಾಹನಕ್ಕೆ ಎಚ್‌ಎಸ್‌ಆರ್‌ಪಿ ಪ್ಲೇಟ್‌ ಬೆಲೆಯು 400 ರಿಂದ 500 ರೂ.ವರೆಗೆ ಬೆಲೆ ಇರಲಿದೆ. ದ್ವಿಚಕ್ರ ವಾಹನಗಳಿಗೆ 250 ರಿಂದ 300 ರೂ. ಇರುತ್ತದೆ.
  3. ವಾಹನ ಉತ್ಪಾದಕ ಕಂಪೆನಿಗಳು ಎಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಶೋ ರೂಂಗಳಿಗೆ ಪೂರೈಸಲು ಅಧಿಕೃತ HSRP ತಯಾರಕರೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಹಳೆ ವಾಹನಗಳಿಗೂ ಸಹ ಅಧಿಕೃತ ಎಚ್‌ಎಸ್‌ಆರ್‌ಪಿ ತಯಾರಕರು ಪ್ಲೇಟ್‌ಗಳನ್ನು ಪೂರೈಸುತ್ತಾರೆ.
  4. HSRP ತಯಾರಕರಿಂದ ಬಂದಿರುವ ನಂಬರ್‌ಪ್ಲೇಟ್‌ಗಳನ್ನು ಶೋರೂಂಗಳಲ್ಲಿ ಅಳವಡಿಸಲಾಗುತ್ತದೆ.
  5. ಇದು ಹೈಸೆಕ್ಯುರಿಟಿ ನಂಬರ್‌ ಪ್ಲೇಟ್‌ ಆಗಿರುವುದರಿಂದ ಶೋರೂಂ ಸಿಬ್ಬಂದಿ ಅಥವಾ ವಾಹನ ತಯಾರಕ ಕಂಪೆನಿಯವರು ವಾಹನ್‌ ಪೋರ್ಟಲ್‌ನಲ್ಲಿ ಲೇಸರ್‌ ಕೋಡಿಂಗ್‌ ನವೀಕರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
  6. ನೋಂದಣಿ ಪ್ರಮಾಣಪತ್ರ ಮತ್ತು ಕಾರ್ಯಕ್ಷಮತೆ ಪ್ರಮಾಣಪತ್ರ (ಎಫ್‌.ಸಿ.) ಹೊಂದಿರದ ವಾಹನಗಳು ಹಾಗೂ ಮಿತಿ ಮೀರಿದ ರಸ್ತೆ ತೆರಿಗೆ ಹೊಂದಿರುವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲಾಗದು.
HSRP Number plates

ಎಚ್‌ಎಸ್‌ಆರ್‌ಪಿ ಯಾಕೆ ಮತ್ತು ವಿಶೇಷತೆ ಏನು?

  1. HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.
  2. ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
  3. ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
  4. ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
  5. ರಸ್ತೆಗಳಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಗುರುತಿಸಲು ಸಹಕಾರಿ.
  6. ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Yuva Nidhi Scheme: ಜನವರಿಯಲ್ಲೇ ಯುವನಿಧಿ ಜಾರಿ; ಅರ್ಹತೆ ಯಾರಿಗಿದೆ? ಈ ದಾಖಲೆ ನಿಮ್ಮಲಿರಲಿ!

Yuva Nidhi Scheme: ರಾಜ್ಯದಲ್ಲಿ ಈಗಾಗಲೇ ಪ್ರಮುಖವಾಗಿ 4 ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ, ಗೃಹಲಕ್ಷ್ಮಿ ಯೋಜನೆಗಳು ಜನರನ್ನು ತಲುಪಿವೆ. ಈಗ ಐದನೇ ಗ್ಯಾರಂಟಿಯಾಗಿರುವ ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಈಚೆಗೆ ಹೇಳಿದ್ದರು. ಬರುವ ಜನವರಿಯಲ್ಲಿ ಯುವ ನಿಧಿ ಜಾರಿಯಾಗಲಿದ್ದು, ಫಲಾನುಭವಿಗಳು ಅಗತ್ಯ ದಾಖಲೆಗಳನ್ನು ಈಗಲೇ ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದು ಹೇಳಲಾಗಿದೆ.

VISTARANEWS.COM


on

Yuva Nidhi Scheme
Koo

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ (Congress Government) ಸಂಪೂರ್ಣ ಬಹುಮತಗಳೊಂದಿಗೆ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಇದಕ್ಕೆ ಮುಖ್ಯ ಕಾರಣ ಗ್ಯಾರಂಟಿ (Congress Guarantee Scheme) ಯೋಜನೆಗಳಾಗಿವೆ. ಘೋಷಣೆ ಮಾಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ನಾಲ್ಕನ್ನು ಅನುಷ್ಠಾನಕ್ಕೆ ತರಲಾಗಿದೆ. ಐದನೇ ಯೋಜನೆಯಾದ “ಯುವ ನಿಧಿ”ಗೆ (Yuva Nidhi Scheme) ಈಗ ಮುಹೂರ್ತ ನಿಗದಿಯಾಗಿದೆ. ಮುಂದಿನ 2024ರ ಜನವರಿಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಆದರೆ, ದಿನಾಂಕ ನಿಗದಿ ಮಾತ್ರ ಬಾಕಿ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಹ ಈಚೆಗೆ ಹೇಳಿದ್ದರು. ಆದರೆ, ಇದಕ್ಕೆ ಯಾರಿಗೆ ಅರ್ಹತೆ ಇದೆ? ಯಾವ ಅರ್ಹತೆ ಉಳ್ಳವರಿಗೆ ಎಷ್ಟು ಹಣ ಸಿಗುತ್ತದೆ? ಯಾವೆಲ್ಲ ದಾಖಲೆಗಳು ಬೇಕು ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

ನಮ್ಮ ಸರ್ಕಾರವು ನುಡಿದಂತೆ ನಡೆಯುತ್ತಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83 ಯೋಜನೆಗಳು ಜಾರಿಯಾಗಿವೆ. ಪ್ರಮುಖವಾಗಿ 4 ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ, ಗೃಹಲಕ್ಷ್ಮಿ ಯೋಜನೆಗಳು ಜನರನ್ನು ತಲುಪಿವೆ. ಈಗ ಐದನೇ ಗ್ಯಾರಂಟಿಯಾಗಿರುವ ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಈಚೆಗೆ ಹೇಳಿದ್ದರು.

ಏನಿದು ಯುವನಿಧಿ ಯೋಜನೆ?

ಕರ್ನಾಟಕದ ನಿರುದ್ಯೋಗಿ ಯುವಕರ ಕಲ್ಯಾಣಕ್ಕಾಗಿ ಯುವ ನಿಧಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಈ ಯೋಜನೆಯಲ್ಲಿ ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ಅಂದರೆ, ಇದು ಅವರಿಗೆ ಈ ಮೂಲಕ ಉದ್ಯೋಗವನ್ನು ಹುಡುಕಲು ನೆರವಾಗುವ ಉದ್ದೇಶವನ್ನು ಯುವ ನಿಧಿ ಯೋಜನೆ ಹೊಂದಿದೆ. ಈ ಸಮಯದಲ್ಲಿ ಸಾಕಷ್ಟು ಖರ್ಚುಗಳು ಇರುತ್ತವೆ. ಈ ನೆರವು ನೀಡುವುದರಿಂದ ನಿರುದ್ಯೋಗಿಗಳ ಕೆಲವೊಂದು ಖರ್ಚುಗಳು ನೀಗುತ್ತವೆ ಎಂಬ ಉದ್ದೇಶದಿಂದ ಜಾರಿಗೆ ತರುತ್ತಿರುವುದಾಗಿ ಕಾಂಗ್ರೆಸ್‌ ಹೇಳಿಕೊಂಡಿದೆ.

ಯುವ ನಿಧಿಯಿಂದ ಯಾರಿಗೆ ಎಷ್ಟು ಹಣ ಸಿಗುತ್ತದೆ?

  • ನಿರುದ್ಯೋಗಿ ಪದವೀಧರ ಯುವಜನತೆಗೆ ಪ್ರತಿ ತಿಂಗಳು 3,000 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ
  • ನಿರುದ್ಯೋಗಿ ಡಿಪ್ಲೊಮಾ ಹೊಂದಿರುವ ಯುವಕರಿಗೆ ಪ್ರತಿ ತಿಂಗಳು 1,500 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ

ಯಾರಿಗೆ ಸಿಗಲ್ಲ ಯುವ ನಿಧಿ?

  • 2022-2023ನೇ ಸಾಲಿಗಿಂತ ಮುಂಚಿತವಾಗಿ ತೇರ್ಗಡೆಯಾಗಿ ಉದ್ಯೋಗ ಹುಡುಕುತ್ತಿರುವವರಿಗೆ
  • ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾದ ನಂತರ ಉನ್ನತ ಶಿಕ್ಷಣಕ್ಕೆ ಸೇರ್ಪಡೆಯಾಗುವವರಿಗೆ
  • ಅಪ್ರೆಂಟಿಸ್ ವೇತನದ ಫಲಾನುಭವಿಗಳಿಗೆ
  • ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವವರಿಗೆ
  • ಸ್ವಯಂ ಉದ್ಯೋಗಿಗಳಾಗಿರುವವರಿಗೆ
  • ಸರ್ಕಾರದ ಇತರೆ ಆರ್ಥಿಕ ನೆರವು ಯೋಜನೆಯ ಫಲಾನುಭವಿ.

ಯುವ ನಿಧಿ ಯೋಜನೆ ಪಡೆಯಲು ಅರ್ಹತೆ ಏನು?

  • ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
  • ಪದವೀಧರರಾಗಿರಬೇಕು ಅಥವಾ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು
  • 2022-2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು
  • ಪದವಿ ಅಥವಾ ಡಿಪ್ಲೊಮಾಗೆ ತೇರ್ಗಡೆಯಾದ ದಿನಾಂಕದ ನಂತರ ಕನಿಷ್ಠ 180 ದಿನಗಳವರೆಗೆ ನಿರುದ್ಯೋಗಿಯಾಗಿರಬೇಕು.

ಯುವ ನಿಧಿಗೆ ಬೇಕಾದ ದಾಖಲೆಗಳ ಪಟ್ಟಿ

  • ಕರ್ನಾಟಕದ ನಿವಾಸಿ ಎಂಬ ಪುರಾವೆ
  • ಆಧಾರ್ ಕಾರ್ಡ್
  • 10ನೇ ತರಗತಿ ಅಂಕಪಟ್ಟಿ
  • ದ್ವಿತೀಯ ಪಿಯುಸಿ ಅಂಕಪಟ್ಟಿ
  • ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ
  • ಡಿಪ್ಲೊಮಾ ಪ್ರಮಾಣಪತ್ರ
  • ಜಾತಿ ಪ್ರಮಾಣ ಪತ್ರ (ಅನ್ವಯವಾದಲ್ಲಿ)
  • ಆದಾಯ ಪ್ರಮಾಣಪತ್ರ
  • ಮೊಬೈಲ್ ನಂಬರ್
  • ಬ್ಯಾಂಕ್ ಖಾತೆ ವಿವರಗಳು
  • ಸೆಲ್ಫ್ ಡಿಕ್ಲೆರೇಷನ್ ಪ್ರತಿ

ಇದನ್ನೂ ಓದಿ: Police Constable: ನಾಳೆ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ; ಈ ದಾಖಲೆ ಮರೆಯಬೇಡಿ!

ಎಲ್ಲಿಯವರೆಗೆ ಸಿಗಲಿದೆ ಯುವ ನಿಧಿ ಭತ್ಯೆ?

ಯುವ ನಿಧಿ ಯೋಜನೆಯಡಿ ಒಮ್ಮೆ ಫಲಾನುಭವಿಗಳಾಗಿ ಆಯ್ಕೆಯಾಗುವ ಯುವ ಜನತೆಗೆ 2 ವರ್ಷಗಳ ಅವಧಿವರೆಗೆ ಭತ್ಯೆಯನ್ನು ಪಡೆದುಕೊಳ್ಳಬಹುದಾಗಿದೆ. ಹೀಗಾಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1500 ರೂಪಾಯಿ ಕೊಡಲಾಗುತ್ತದೆ. ಆದರೆ, ಎರಡು ವರ್ಷಗಳ ಅವಧಿಯೊಳಗೆ ಅವರಿಗೆ ಕೆಲಸ ಸಿಕ್ಕರೆ, ತತ್‌ ಕ್ಷಣವೇ ಈ ಭತ್ಯೆಯನ್ನು ನಿಲ್ಲಿಸಲಾಗುತ್ತದೆ. ಇನ್ನು ಫಲಾನುಭವಿಗೆ 2 ವರ್ಷಗಳ ನಂತರ ಯೋಜನೆಯ ಹಣವನ್ನು ನೀಡಲಾಗುವುದಿಲ್ಲ.

Continue Reading

ಉಡುಪಿ

Karnataka Weather : ಮೈಸೂರು ಸೇರಿ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌!

Rain News : ದಕ್ಷಿಣ ಒಳನಾಡು ಹಾಗೂ ಮಲೆನಾಡು, ಕರಾವಳಿ ಭಾಗದಲ್ಲಿ ವರುಣ (Karnataka weather Forecast) ಸಕ್ರಿಯನಾಗಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ.

VISTARANEWS.COM


on

By

Rain News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ (Karnataka weather Forecast) ಕೆಲವು ಕಡೆಗಳಲ್ಲಿ ಮಳೆಯಾಗಲಿದ್ದು, (Rain News) ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇರಲಿದೆ. ಬಹುತೇಕ ಜಿಲ್ಲೆಗಳಲ್ಲಿ ಉರಿ ಉರಿ ವಾತಾವರಣ ಇರಲಿದೆ.

ಮೈಸೂರಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಸಾಧಾರಣದೊಂದಿಗೆ ಹಗುರ ಮಳೆ ಸಾಧ್ಯತೆ

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ.

ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣವಿರಲಿದೆ. ಮಧ್ಯಾಹ್ನ ಬಿಸಿಲು ಇರಲಿದೆ. ಸಂಜೆ ಅಥವಾ ರಾತ್ರಿಯಂದು ಆಯ್ದ ಕಡೆಗಳಲ್ಲಿ ಮಳೆ ಇರಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: KGF 3 Actor Yash | ಕೆಜಿಎಫ್​ನ ರಾಕಿ ಭಾಯ್​, ಪಾಂಡ್ಯ ಬ್ರದರ್ಸ್​ ಭೇಟಿ; ಕೆಜಿಎಫ್​ 3 ಟ್ರೆಂಡಿಂಗ್​

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -20 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 19 ಡಿ.ಸೆ
ಗದಗ: 31 ಡಿ.ಸೆ – 17 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 31 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

ವಿಸ್ತಾರ ಸಂಪಾದಕೀಯ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಜ್ಞರ ಸೂತ್ರಗಳು ಜಾರಿಯಾಗಲಿ

VISTARANEWS.COM


on

Vistara Editorial, Let the strengthening government schools
Koo

ಸರ್ಕಾರಿ ಶಾಲೆಗಳು ಹಾಗೂ ಆ ಶಾಲೆಗಳಿಗೆ ತೆರಳುವ ಮಕ್ಕಳ ಹಿತದೃಷ್ಟಿಯಿಂದ ಆಗಲೇಬೇಕಾದ ಹಲವಾರು ಕಾರ್ಯಗಳ ಬಗ್ಗೆ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯು ಶಿಕ್ಷಣ ಸಚಿವರ ಗಮನಕ್ಕೆ ತಂದಿದೆ. ಏಕೋಪಾಧ್ಯಾಯ/ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಕಾಯಂ ಶಿಕ್ಷಕರ ನೇಮಕ ಮಾಡಬೇಕು. ಕಾಯಂ ಶಿಕ್ಷಕರನ್ನು ಅತ್ಯಗತ್ಯವಿರುವ ಗ್ರಾಮೀಣ ಪ್ರದೇಶಗಳಿಗೆ ನಿಯೋಜನೆ ಮಾಡುವುದು ಸೇರಿದಂತೆ ಇನ್ನಿತರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪತ್ರ ಬರೆದು ಒತ್ತಾಯ ಮಾಡಿದೆ. ಈ ಸಂಬಂಧ ಹತ್ತು ಸೂತ್ರವನ್ನೂ ನೀಡಿದೆ. ಮಕ್ಕಳ ಶೈಕ್ಷಣಿಕ (Education News) ಪ್ರಗತಿಯ ಹಿತದೃಷ್ಟಿಯಿಂದ ಈ ಕಾರ್ಯಗಳನ್ನು ಮಾಡುವಂತೆ ಒತ್ತಾಯ ಮಾಡಿದೆ. ಇದೇ ಸಂದರ್ಭದಲ್ಲಿ, 8ನೇ ತರಗತಿಯಲ್ಲಿ ಓದುವ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಸೈಕಲ್‌ (Free bicycle) ಕೊಡಲು ಬಜೆಟ್‌ನಲ್ಲಿ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಭರವಸೆ ನೀಡಿದ್ದಾರೆ. ಭರವಸೆಗಳನ್ನು ಆಗುಮಾಡುವುದರ ಜೊತೆಗೆ, ತಜ್ಞರ ಮಾತುಗಳ ಬಗೆಗೂ ಸಚಿವರು ಕಿವಿಗೊಡುವುದು ಅಗತ್ಯವಾಗಿದೆ(Vistara Editorial).

ಶಾಲಾ ಶಿಕ್ಷಣದಲ್ಲಿ ಮಕ್ಕಳು ಕಲಿಕೆಯ ಕೇಂದ್ರ ಬಿಂದು. ಮಕ್ಕಳಿಗಿರುವ ಶಿಕ್ಷಣದ ಮೂಲಭೂತ ಹಕ್ಕಿನ ಭಾಗವಾಗಿ ಒದಗಿಸಬೇಕಾದ ಉತ್ತೇಜಕಗಳು, ಕಲಿಯಲು ಅಗತ್ಯವಾದ ಮೂಲ ಸೌಕರ್ಯ ಹಾಗೂ ಕಲಿಸಲು ಬೇಕಾದ ಅರ್ಹ ಶಿಕ್ಷಕರನ್ನು ಒದಗಿಸುವುದು ಸರ್ಕಾರದ ಮೊದಲ ಆದ್ಯತೆ. ರಾಜ್ಯದಲ್ಲಿ ಹಲವು ವರ್ಷಗಳಿಂದ ಶಾಲೆ ಪ್ರಾರಂಭವಾಗಿ ಹಲವು ತಿಂಗಳು ಕಳೆದರೂ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, ಸಮವಸ್ತ್ರ ಮತ್ತು ಶೂ, ಸಾಕ್ಸ್ ಸಕಾಲಕ್ಕೆ ದೊರೆತಿಲ್ಲ. ಜತೆಗೆ, ಏಳನೇ ತರಗತಿಯಿಂದ ಎಂಟು ಅಥವಾ ಎಂಟರಿಂದ ಒಂಬತ್ತನೇ ತರಗತಿಗೆ ಹೋಗುತ್ತಿರುವ ಮಕ್ಕಳಿಗೆ ಕಳೆದ ಮೂರು ವರ್ಷದಿಂದ ಉಚಿತ ಬೈಸಿಕಲ್ ಸಿಕ್ಕಿಲ್ಲ. ಎಲ್ಲ ಮಕ್ಕಳಿಗೆ ಪರಿಷ್ಕೃತ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, 2 ಜತೆ ಸಮವಸ್ತ್ರ ಮತ್ತು 2 ಜತೆ ಶೂ ಹಾಗೂ ಸಾಕ್ಸ್ ವಿತರಣೆ ಮಾಡಬೇಕು. ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ. ವಿಳಂಬವಾದಲ್ಲಿ ಶಾಲೆ ಪ್ರಾರಂಭದಲ್ಲಿಯೇ ಅತಿಥಿ ಶಿಕ್ಷಕರ ನೇಮಕ. ಏಕೋಪಾಧ್ಯಾಯ/ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಕಾಯಂ ಶಿಕ್ಷಕರ ನೇಮಕ ಮುಂತಾದ ಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲು ತಜ್ಞರ ವೇದಿಕೆ ಆಗ್ರಹಿಸಿದೆ.

ಇವರ ಬೇಡಿಕೆಗಳಲ್ಲಿ ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ/ ವಿಲೀನಗೊಳಿಸುವ ಪ್ರಕ್ರಿಯೆಗಳು ಪೂರ್ಣವಾಗಿ ನಿಲ್ಲಬೇಕು ಎಂಬುದು ಇದೆ. ಇದು ಮುಖ್ಯವಾದುದು. ಇಂಗ್ಲಿಷ್‌ ಶಾಲೆಗಳು ಹಳ್ಳಿಹಳ್ಳಿಗಳಲ್ಲಿ ಹೆಚ್ಚುತ್ತಿರುವುದು ಮತ್ತು ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯಗಳು ಕಡಿಮೆಯಾಗುತ್ತಿರುವುದು ಬಡ ಮಕ್ಕಳ ಶಿಕ್ಷಣಕ್ಕೆ ಚಪ್ಪಡಿಕಲ್ಲು ಎಳೆದಂತೆ. ಹೀಗಾಗಬಾರದು. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಭಾಗವಾಗಿ ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತಿ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು. ಈ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸ್ಥಿತಿಗತಿ ಅರಿಯಲು ಸಿಆರ್‌ಪಿ, ಶಿಕ್ಷಣ ಸಂಯೋಜಕರು, ಬಿಆರ್‌ಸಿ, ಬಿಆರ್‌ಪಿ, ಬಿಇಒ, ಡಿಡಿಪಿಐ ಮತ್ತು ಡಯಟ್ ಸಿಬ್ಬಂದಿ ಶಾಲೆಗಳಿಗೆ ಭೇಟಿ ನೀಡಿ ವಿವರವಾದ ವರದಿ ಸಲ್ಲಿಸಲು ಕ್ರಮ ವಹಿಸಬೇಕು. ಶಿಕ್ಷಣ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಕಾಲಮಿತಿ ಯೋಜನೆ ರೂಪಿಸಬೇಕು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ರಚಿಸಿ ಬಲವರ್ಧನೆಗೊಳಿಸಬೇಕು. ಕನಿಷ್ಠ 12ನೆಯ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗೂ ಶಿಕ್ಷಣ ಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದೂ ವೇದಿಕೆ ಆಗ್ರಹಿಸಿದೆ. ಇವೆಲ್ಲವೂ ಆಗಬೇಕಾದ ವಿಚಾರಗಳೇ. ಸರ್ಕಾರ ಇವುಗಳ ಬಗ್ಗೆ ಶೀಘ್ರ ಗಮನ ಹರಿಸಬೇಕು.

ಇದೇ ಹೊತ್ತಿಗೆ ರಾಜ್ಯ ಸರ್ಕಾರ, ಕೇಂದ್ರವು ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿ ಜಾರಿ ಮಾಡಲು ಮುಂದಾಗಿದೆ. ಶಿಕ್ಷಣ ನೀತಿ ಎಂಬುದು ಒಂದೊಂದು ರಾಜ್ಯಕ್ಕೊಂದೊಂದು ಎಂಬಂತಾಗುವುದರಲ್ಲಿ ಅರ್ಥವಿಲ್ಲ. ಕೇಂದ್ರ ತಂದಿರುವ ಶಿಕ್ಷಣ ನೀತಿಯು ವೃತ್ತಿಪರ ಶಿಕ್ಷಣ, ಮಕ್ಕಳ ಜ್ಞಾನವರ್ಧನೆ ಇತ್ಯಾದಿಗಳ ಕಡೆಗೆ ಹೆಚ್ಚಿನ ಗಮನ ಕೊಟ್ಟು ವೈಜ್ಞಾನಿಕವಾಗಿ ರೂಪುಗೊಂಡಿದೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ರಾಜಕೀಯ ಕಾರಣಗಳಿಗಾಗಿ ಇದನ್ನು ಬದಲಾಯಿಸಲು ಹೊರಟಂತಿದೆ. ರಾಜ್ಯ ನೀತಿ ಒಂದು, ರಾಷ್ಟ್ರದ ನೀತಿಯೇ ಒಂದು ಎಂಬಂತಾಗುವುದರಿಂದ ಮಕ್ಕಳಿಗೆ ಭವಿಷ್ಯದಲ್ಲಿ ಸಮಸ್ಯೆಯೇ ಆಗುತ್ತದೆ ಹೊರತಾಗಿ ಯಾವುದೇ ಪ್ರಯೋಜನವಿಲ್ಲ. ಈ ಬಗ್ಗೆ ಕೂಡ ಸರಿಯಾದ ತಜ್ಞರ ಅಭಿಪ್ರಾಯವನ್ನು ಪಡೆದು ಸರ್ಕಾರ ಒಂದು ಸಮರ್ಪಕ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಂಸದೆಯ ಕೃತ್ಯಕ್ಕೆ ತಕ್ಕ ಶಿಕ್ಷೆ, ಇತರರಿಗೂ ಪಾಠವಾಗಲಿ

Continue Reading

ಕರ್ನಾಟಕ

HD Kumaraswamy: ಕಲ್ಲಡ್ಕ ಪ್ರಭಾಕರ ಭಟ್ ಗುಣಗಾನ ಮಾಡಿದ ಎಚ್‌ಡಿಕೆ; ಶ್ರೀರಾಮ ಶಾಲೆ ಕ್ರೀಡೋತ್ಸವದಲ್ಲಿ ಭಾಗಿ

HD Kumaraswamy: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಭಾಗವಹಿಸಿದ್ದರು.

VISTARANEWS.COM


on

HD Kumaraswamy
Koo

ಮಂಗಳೂರು: ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಶನಿವಾರ ರಾತ್ರಿ ಭಾಗವಹಿಸಿ, ಹೊನಲು ಬೆಳಕಿನಲ್ಲಿ ಮಕ್ಕಳ ಸಾಹಸ ಪ್ರದರ್ಶನವನ್ನು ವೀಕ್ಷಿಸಿದರು. ಬಿಜೆಪಿಯ ಪ್ರಮುಖ ನಾಯಕರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಕ್ಕಳಿಂದ ಸಾಹಸ ಕ್ರೀಡೆಗಳ ಜತೆ ದೇಶ ಪ್ರೇಮದ ಸಂದೇಶ ಸಾರಿದ್ದು ಗಮನ ಸೆಳೆಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀ ರಾಮ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಕ್ರೀಡೋತ್ಸವದಲ್ಲಿ ರಾಷ್ಟ್ರ ಭಕ್ತಿಯ ಜತೆಗೆ ರಾಮ ಭಕ್ತಿಯ ಅನಾವರಣವಾಯಿತು. ನಂತರ ಒಂದೇ ಮಾತರಂ ಘೋಷಣೆಗಳು ಮೊಳಗಿದವು. ಈ ವೇಳೆ ಮೋದಿ ಗೆಟಪ್‌ನಲ್ಲಿ ಕಾಣಿಸಿಕೊಂಡ ವಿದ್ಯಾರ್ಥಿ, ಚಂದ್ರಯಾನ 3 ಉಡಾವಣೆ ಮರುಸೃಷ್ಟಿ ಗಮನ ಸೆಳೆಯಿತು. ನಂತರ ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್‌ಗೆ ಪುಷ್ಪ ನಮನ ಸಲ್ಲಿಸಲಾಯಿತು.

ಮಕ್ಕಳ ಸಾಹಸ ಹಾಗೂ ನೃತ್ಯ ವೀಕ್ಷಿಸಿದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಕ್ರೀಡೋತ್ಸವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ, ಪ್ರಭಾಕರ ಭಟ್ ಅವರ ಗುಣಗಾನ ಮಾಡಿದರು. ಪ್ರಭಾಕರ್ ಭಟ್ ಅವರ ಬಗ್ಗೆ ನನಗೆ ಈ ಹಿಂದೆ ಹೆಚ್ಚಿನ ಮಾಹಿತಿ ಇರಲಿಲ್ಲ. ಇಂದು ಇಲ್ಲಿ ಭಾಗವಹಿಸಿರುವುದು ನನ್ನ ಭಾಗ್ಯ. ಉತ್ತಮ ಶಿಕ್ಷಣ ನೀಡುವಲ್ಲಿ ಭಟ್ ಅವರ ಕೊಡುಗೆ ಸ್ಮರಿಸಬೇಕು. ಇಂತಹ ಕಾರ್ಯಕ್ರಮ ಮಾಡಲು ಸುಲಭವಲ್ಲ. ಅದೇ ರೀತಿ ಈ ಶಾಲೆ ಕಟ್ಟಿರುವುದು ಸಾಮಾನ್ಯ ವಿಚಾರವಲ್ಲ. ಜ್ಞಾನ ವಿಕಾಸದ ಜತೆ ಎಲ್ಲಾ ರೀತಿಯ ವಿಕಾಸ ಇಲ್ಲಿ ಆಗುತ್ತಿದೆ. ಪ್ರಭಾಕರ್ ಭಟ್ ಇಂದು ನನ್ನ ಕಣ್ಣು ತೆರೆಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ | JDS Karnataka: ಪಕ್ಷ ವಿರೋಧಿ ಚಟುವಟಿಕೆ; ಸಿ.ಎಂ.ಇಬ್ರಾಹಿಂ, ಕೇರಳದ ಸಿ.ಕೆ. ನಾನು ಉಚ್ಚಾಟನೆ

ನಮ್ಮ ಶಾಲಾ ದಿನಗಳಲ್ಲಿ ಮಾಡುತ್ತಿದ್ದ ರಾಮ ಭಜನೆ ಮತ್ತೆ ನೆನಪಿಸಿದ್ದಾರೆ. ಸರ್ಕಾರಕ್ಕೆ ಕಣ್ಣು ತೆರೆಸುವ ರೀತಿಯಲ್ಲಿ ಅವರು ಶಾಲೆ ನಡೆಸುತ್ತಿದ್ದಾರೆ. ನಾನು ಈ ಹಿಂದೆ ಅವರ ಬಗ್ಗೆ ಮಾಡಿದ್ದ ಟೀಕೆ ಬೇರೆ, ಈಗಿನ ಹೊಗಳಿಕೆ ಬೇರೆ. ಇಲ್ಲಿಗೆ ಬಂದ ಮೇಲೆ ನನಗೆ ನಿಜ ವಿಚಾರ ಗೊತ್ತಾಗಿದೆ. ಅಂದು ದಾರಿ ತಪ್ಪಿದ್ದೆ ಎನ್ನುವುದನ್ನು ಪ್ರಾಮಾಣಿಕವಾಗಿ ಒಪ್ಪುತ್ತೇನೆ. ಕೆಲವರು ನನ್ನ ದಾರಿ ತಪ್ಪಿಸಿದ್ದ ಕಾರಣ ಕೆಲ ಹೇಳಿಕೆ ನೀಡಿದ್ದೆ ಎಂದು ತಿಳಿಸಿದರು.

Continue Reading
Advertisement
sextortion
ಅಂಕಣ9 mins ago

ಸೈಬರ್‌ ಸೇಫ್ಟಿ ಅಂಕಣ: ‘ಡೀಪ್ ಫೇಕ್’ ತಂತ್ರಜ್ಞಾನದಿಂದ ಸೆಕ್ಸ್‌ಟಾರ್ಷನ್

Yuva Nidhi Scheme
ಕರ್ನಾಟಕ9 mins ago

Yuva Nidhi Scheme: ಜನವರಿಯಲ್ಲೇ ಯುವನಿಧಿ ಜಾರಿ; ಅರ್ಹತೆ ಯಾರಿಗಿದೆ? ಈ ದಾಖಲೆ ನಿಮ್ಮಲಿರಲಿ!

kaivara tatayya
ಅಂಕಣ24 mins ago

ತಾತಯ್ಯ ತತ್ವಾಮೃತಂ: ಭಕ್ತಿತತ್ವದಿಂದ ಮೋಕ್ಷ ಸಾಧನೆ

Madhu Bangarappa Beluru Gopalakrishna
ಅಂಕಣ39 mins ago

ಮೊಗಸಾಲೆ ಅಂಕಣ: ಒಣಗಿದ ಜಿಲ್ಲೆಯಲ್ಲಿ ಜೋಗದ ಬದಲು ಕಚ್ಚಾಟದ ರೋಗ

Rain News
ಉಡುಪಿ39 mins ago

Karnataka Weather : ಮೈಸೂರು ಸೇರಿ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌!

Vistara Editorial, Let the strengthening government schools
ಕರ್ನಾಟಕ54 mins ago

ವಿಸ್ತಾರ ಸಂಪಾದಕೀಯ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಜ್ಞರ ಸೂತ್ರಗಳು ಜಾರಿಯಾಗಲಿ

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Sphoorti Salu
ಸುವಚನ2 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

HD Kumaraswamy
ಕರ್ನಾಟಕ7 hours ago

HD Kumaraswamy: ಕಲ್ಲಡ್ಕ ಪ್ರಭಾಕರ ಭಟ್ ಗುಣಗಾನ ಮಾಡಿದ ಎಚ್‌ಡಿಕೆ; ಶ್ರೀರಾಮ ಶಾಲೆ ಕ್ರೀಡೋತ್ಸವದಲ್ಲಿ ಭಾಗಿ

Car accident
ಕರ್ನಾಟಕ8 hours ago

Car Accident: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ನಾಲ್ವರ ದುರ್ಮರಣ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ1 day ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema1 day ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema1 day ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ2 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ3 days ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ3 days ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ಟ್ರೆಂಡಿಂಗ್‌