Site icon Vistara News

Hubballi accident | ಕಾರು ಪಲ್ಟಿಯಾಗಿ ಮೂವರ ದುರ್ಮರಣ, ಒಬ್ಬ ಮಹಿಳೆ ಗಂಭೀರ

hubballi accident

ಹುಬ್ಬಳ್ಳಿ: ತಾಲೂಕಿನ ವರೂರು ಬಳಿ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ದಾವಣಗೆರೆಯಿಂದ ಹುಬ್ಬಳ್ಳಿಯ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

ಮೃತಪಟ್ಟವರನ್ನು ದಾವಣಗೆರೆ ಮೂಲದ ಮೂಲದ ಶಾರುಖ್, ಸೋಹೆಲ್, ಚಿಕ್ಕಮಗಳೂರು ಮೂಲದ ಸುಶೀಲಾ ಎಂದು ಗುರುತಿಸಲಾಗಿದೆ. ಇವರು ಪ್ರಯಾಣಿಸುತ್ತಿದ್ದ ಕಾರು ಅತಿವೇಗವಾಗಿ ಸಾಗುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಫಾರುಕಾ ಎಂಬ ಮಹಿಳೆಗೆ ಕಿಮ್ಸ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident Case |ಬೈಕ್‌-ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

Exit mobile version