Site icon Vistara News

ಆನೆ ದಂತ ಕಲಾಕೃತಿ ಮಾರಾಟಕ್ಕೆ ಯತ್ನ; ಐವರ ಬಂಧನ

#image_title

ಹುಬ್ಬಳ್ಳಿ: ಆನೆ ದಂತದಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೆಳಗಾವಿ ಹಾಗೂ ಮಹಾರಾಷ್ಟ್ರ ಮೂಲದ ಐವರು ಆರೋಪಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಸಿಐಡಿ ವಿಶೇಷ ಅರಣ್ಯ ಸಂಚಾರಿ ದಳದ ತಂಡ ಯಶಸ್ವಿಯಾಗಿದೆ.

ಕೊಲ್ಹಾಪುರ ಮೂಲದ ಸಾತ್ ಜಮಾದಾರ್, ವಿಜಯ ಕುಂಬಾರ, ಸಾಗರ ಪುರಾಣಿಕ, ನಿಪ್ಪಾಣಿಯ ವಿನಾಯಕ ಕಾಂಬ್ಳೆ, ದಾನಾಜಿ ಪಾಟೀಲ್ ಬಂಧಿತ ಆರೋಪಿಗಳಾಗಿದ್ದಾರೆ.‌ ಬಂಧಿತರಿಂದ ಆನೆ ದಂತದಿಂದ ತಯಾರಿಸಿದ್ದ 384 ಗ್ರಾಂ ತೂಕದ ಅಲಂಕಾರ ಪೆಟ್ಟಿಗೆ, 112 ಗ್ರಾಂ ತೂಕದ ಕೈಕಡಗ, 350 ಗ್ರಾಂ ಆಯತಾಕಾರದ ಪೆಟ್ಟಿಗೆ, 279 ಗ್ರಾಂ ಮೊಟ್ಟೆ ಆಕಾರದ ಪೆಟ್ಟಿಗೆಗಳನ್ನು ವಶಕ್ಕೆ ಪಡೆದಿದ್ದಾರೆ. ಇವುಗಳ ಮೌಲ್ಯ ಕೋಟ್ಯಂತರ ರೂಪಾಯಿ ಎನ್ನಲಾಗಿದೆ.

ಸಿಐಡಿ ಅರಣ್ಯ ಸಂಚಾರದಳ ತಂಡ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದ ಬಳಿ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ, ರಾಜಸ್ಥಾನದ ಒಂದು ಸಂತೆಯಲ್ಲಿ ಸಾಧು ಸಂತರ ಬಳಿ ಖರೀದಿಸಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದೇಗುಲ ಅಲಂಕಾರಕ್ಕೆ ಬರೀ ಕೇಸರಿ ಬಣ್ಣದ ಬಂಟಿಂಗ್ಸ್​ ಬಳಸಬೇಡಿ; ಭದ್ರಕಾಳಿ ದೇವಸ್ಥಾನದ ಆಡಳಿತ ಮಂಡಳಿಗೆ ಪೊಲೀಸರ ಸೂಚನೆ

ಈ ಪ್ರಕರಣವನ್ನು ಹುಬ್ಬಳ್ಳಿಯ ಸಿಐಡಿ ವಿಭಾಗದ ಪೊಲೀಸ್ ಉಪಾಧೀಕ್ಷಕ ಮುತ್ತಣ ಸರವಗೋಳ, ಸಬ್ ಇನ್ಸ್‌ಪೆಕ್ಟರ್‌ ಪ್ರಸಾದ್ ಪಣೇಕರ್, ಎಮ್.ಎ.ಪಾಠಕ್, ಅಶೋಕ ನಾಗರಳ್ಳಿ, ರವೀಂದ್ರ ಗೋನೇನವರ, ಎಸ್.ಎಚ್.ಹುಲಗೇರ, ದಿವ್ಯ ನಾಯಕ ತಂಡ ಪತ್ತೆ ಮಾಡಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Exit mobile version