Site icon Vistara News

Hubballi News | ಪ್ರೀತಿ ನಾಟಕವಾಡಿ ಅಪ್ರಾಪ್ತೆಯ ಅತ್ಯಾಚಾರ: ಆರೋಪಿ ಬಂಧನ

Rape

ಹುಬ್ಬಳ್ಳಿ: ಪ್ರೀತಿ ನಾಟಕವಾಡಿದ್ದ ಯುವಕನೊಬ್ಬ ಅಪ್ರಾಪ್ತೆಯನ್ನು ನಂಬಿಸಿ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸೆಗಿರುವ ಪ್ರಕರಣ ಹುಬ್ಬಳ್ಳಿಯಲ್ಲಿ (Hubballi News) ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಅಪ್ರಾಪ್ತತೆಯ ಮೇಲೆ ಅತ್ಯಾಚಾರ ಎಸೆಗಿರುವ ಆರೋಪಿದ ಮೇಲೆ ಕಾರವಾರ ಮೂಲದ ಶ್ರೀನಿಧಿ ಕೊಲ್ವೇಕರ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

17 ವರ್ಷದ ಬಾಲಕಿ ಜತೆ ಆರೋಪಿ ಶ್ರೀನಿಧಿ ಸಲುಗೆ ಬೆಳೆಸಿಕೊಂಡಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೆ ಬಾಲಕಿಯನ್ನು ಆಲಂಗಿಸಿ ಪೋಟೊವನ್ನು ತೆಗೆದುಕೊಂಡಿದ್ದ. ಪೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಸಿ ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಬಳಿಯ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸೆಗಿದ್ದಾನೆ ಎನ್ನಲಾಗಿದೆ. ನಂತರ ಅಪ್ರಾಪ್ತೆಯ ಪಾಲಕರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಆರೋಪಿ ನಿಂದಿಸಿದ್ದಾನೆ.

ಇದನ್ನೂ ಓದಿ | Bilkis Bano Case | ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ಬಾಲಕಿ ತಾಯಿಯಿಂದ ಪೊಲೀಸರಿಗೆ ದೂರು ನೀಡಲಾಗಿದ್ದು, ಗೋಕುಲ ರಸ್ತೆ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ಕಾರ್ಯಾಚರಣೆ ಮಾಡಿದ್ದರು. ನಂತರ ಕಾರವಾರದಲ್ಲಿದ್ದ ಆರೋಪಿ ಶ್ರೀನಿಧಿ ಕೊಲ್ವೇಕರನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ | Court Verdict | ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ 65ರ ಮುದುಕನಿಗೆ ಜೀವಾವಧಿ ಶಿಕ್ಷೆ

Exit mobile version