Site icon Vistara News

Hubli to Pune Flight: ಫೆ.2ರಿಂದ ಹುಬ್ಬಳ್ಳಿ-ಪುಣೆ ವಿಮಾನಯಾನ ಸೇವೆ ಪುನರಾರಂಭ

Indigo Flight

ಹುಬ್ಬಳ್ಳಿ: ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ ಫೆಬ್ರವರಿ 2 ರಿಂದ ವಿಮಾನಯಾನ ಸೇವೆ ಪುನರಾರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ (Hubli to Pune Flight) ವಿಮಾನಯಾನ ಸೇವೆ ಪುನರಾರಂಭಕ್ಕೆ ನಾಗರಿಕ ವಿಮಾನಯಾನ ಸಚಿವಾಲಯ ಅನುಮತಿ ನೀಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು, ನನ್ನ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ – ಪುಣೆ – ಹುಬ್ಬಳ್ಳಿ ಮಾರ್ಗದಲ್ಲಿ ವಿಮಾನಗಳ ಸಂಚಾರ ಪುನರಾರಂಭವಾಗಿದೆ. ಫೆಬ್ರವರಿ 2 ರಿಂದ ವಾರಕ್ಕೆ 4 ವಿಮಾನಗಳು ನಿರಂತರವಾಗಿ ಸಂಚರಿಸಲಿವೆ. ನಮ್ಮ ಪ್ರಸ್ತಾವನೆಯನ್ನು ಕಾರ್ಯರೂಪಕ್ಕೆ ತರಲು ಸಹಕರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ ಆಡಳಿತ ವರ್ಗದವರಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ | PM Modi: ಜನವರಿ 19ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ; ಸ್ವಾಗತಕ್ಕೆ ಬಿಜೆಪಿ ಕಾರ್ಯಕರ್ತರಿಗೆ ಅವಕಾಶ?

ಅರ್ಜೆಂಟೀನಾದಲ್ಲಿ ಲಿಥಿಯಂ ಗಣಿಗಾರಿಕೆಗೆ ಭಾರತ ಸಹಿ: ಪ್ರಲ್ಹಾದ್ ಜೋಶಿ ಮಾಹಿತಿ

ನವದೆಹಲಿ: ಭಾರತ ಮತ್ತು ಅರ್ಜೆಂಟೀನಾ (India ands Argentina) ನಡುವೆ ಐದು ಲಿಥಿಯಂ ಬ್ಲಾಕ್‌ಗಳ (Lithium Mining) ಪರಿಶೋಧನೆ ಹಾಗೂ ಗಣಿಗಾರಿಕೆಗೆ ಒಪ್ಪಂದ ಏರ್ಪಟ್ಟಿದೆ. ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದಲ್ಲಿ 5 ಲಿಥಿಯಂ ಬ್ಲಾಕ್‌ಗಳ ಪರಿಶೋಧನೆ ಮತ್ತು ಗಣಿಗಾರಿಕೆ ಒಪ್ಪಂದಕ್ಕೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ (Union Minister Pralhad Joshi) ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಅರ್ಜೆಂಟೀನಾದಲ್ಲಿ 5 ಲಿಥಿಯಂ ಬ್ಲಾಕ್ ಗಳಲ್ಲಿ ಗಣಿಗಾರಿಕೆ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಹಿ ಹಾಕುವ ಮೂಲಕ ಭಾರತ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಖನೀಜ್ ಬಿಡೇಶ್ ಇಂಡಿಯಾ ಲಿಮಿಟೆಡ್ ಮತ್ತು CAMYEN, ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದ ಸರ್ಕಾರಿ ಸ್ವಾಮ್ಯದ ಕಂಪನಿ ನಡುವೆ ಒಪ್ಪಂದ ಏರ್ಪಟ್ಟಿದೆ. ಈ ಯೋಜನೆ ಭಾರತಕ್ಕೆ ಲಿಥಿಯಂ ಪೂರೈಕೆಯನ್ನು ಬಲಪಡಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ | BJP Karnataka: ಬಿಜೆಪಿಯ ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನೇಮಕ

ಈ ಒಪ್ಪಂದದಿಂದ ಎರಡೂ ದೇಶಗಳ ಲಿಥಿಯಂ ಗಣಿಗಾರಿಕೆ ಮತ್ತು ಡೌನ್‌ಸ್ಟ್ರೀಮ್ ವಲಯಗಳನ್ನು ಅಭಿವೃದ್ಧಿಪಡಿಸುತ್ತದೆ. ಇದು ಜಾಗತಿಕ ನಿವ್ವಳ ಶೂನ್ಯ ಗುರಿಗಳನ್ನು ಸಾಧಿಸಲು ನಿರ್ಣಾಯಕ ವಸ್ತುಗಳಿಗೆ ಪೂರೈಕೆ, ವೈವಿಧ್ಯೀಕರಣವನ್ನು ಸಹ ಸುಗಮಗೊಳಿಸುತ್ತದೆ ಎಂದಿದ್ದಾರೆ.

Exit mobile version