ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮದುವೆ ನಿಶ್ಚಿತಾರ್ಥ ಮುಗಿಸಿ ಮರಳುತ್ತಿದ್ದ ವೇ:ಳೆ ಅವರು ಪ್ರಯಾಣಿಸುತ್ತಿದ್ದ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಏಳೂ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 6 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆನಕಟ್ಟಿ ಗ್ರಾಮದ ಯುವಕನ ಮದುವೆಯನ್ನು ಭಾರಿ ಮಳೆ ಹಿನ್ನೆಲೆಯಲ್ಲಿ ರೇವಣಸಿದ್ಧೇಶ್ವರ ಮಠಕ್ಕೆ ಸ್ಥಳಾಂತರ ಮಾಡಲಾಗಿತ್ತು. ಶನಿವಾರ ಮದುವೆ ನಡೆಯಲಿದ್ದು, ಶುಕ್ರವಾರ ಅದರ ಸಂಬಂಧ ನಿಶ್ಚಿತಾರ್ಥ ವ್ಯವಸ್ಥೆಗೊಳಿಸಲಾಗಿತ್ತು. ನಿಶ್ಚಿತಾರ್ಥ ಮುಗಿಸಿದ ಬಳಿಕ ಯುವಕನ ಸಂಬಂಧಿಕರು ಬೆನಕಟ್ಟಿ ಗ್ರಾಮಕ್ಕೆ ಮರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ 13 ಮಂದಿ ಇದ್ದು, ಅವರಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಆರು ಮಂದಿ ಗಾಯಗೊಂಡಿದ್ದಾರೆ.
ಮೃತಪಟ್ಟವರನ್ನು ಧಾರವಾಡ ತಾಲೂಕಿನ ಬೆನಕಟ್ಟಿ ಗ್ರಾಮದ ಅನನ್ಯ(14), ಹರೀಶ(13), ಶಿಲ್ಪಾ (34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ (11), ಶಂಭುಲಿಂಗಯ್ಯ (35) ಎಂದು ಗುರುತಿಸಲಾಗಿದೆ.
ಗಾಯಗೊಂಡ 6 ಜನರನ್ನು ಕೂಡಲೇ ಜಿಲ್ಲೆಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.
ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಸ್ಥಳಕ್ಕೆ ಸ್ಥಳಕ್ಕೆ ಎಸ್ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತದಲ್ಲಿ ಇಬ್ಬರ ಸಾವು