Site icon Vistara News

ಅರವಿಂದ್ ಲಿಂಬಾವಳಿ ಹೇಳಿಕೆಗೆ ತೀವ್ರ ಆಕ್ರೋಶ; ಹುಬ್ಬಳ್ಳಿಯಲ್ಲಿ ಜೆಡಿಎಸ್ ಪ್ರತಿಭಟನೆ

ಜೆಡಿಎಸ್

ಹುಬ್ಬಳ್ಳಿ: ಮಹಿಳೆ ಬಗ್ಗೆ ಶಾಸಕ ಅರವಿಂದ್ ಲಿಂಬಾವಳಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಜ್ಯಾತ್ಯತೀತ ಜನತಾದಳದ ಮಹಿಳಾ ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಅರವಿಂದ್ ಲಿಂಬಾವಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆ ಎದುರು ದರ್ಪ ತೋರಿರುವ ಲಿಂಬಾವಳಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಲವಾಯಿ, ಪೂರ್ಣಿಮಾ ಸವದತ್ತಿ, ಸರಸ್ವತಿ ಕಟ್ಟಿಮನಿ, ತುಳಸಿಕಾಂತ ಖೋಡೆ, ಗಂಗಾಧರ ಪೆರೂರ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ | Rain News | ಮಳೆ ಬಂದಾಗ ಬಿಲ ಸೇರುವ ಬೆಂಗಳೂರಿನ ಸಚಿವರು ಸಾವರ್ಕರ್‌ ಅಂದ್ರೆ ಓಡಿ ಬರ್ತಾರೆ: ಕಾಂಗ್ರೆಸ್‌ ವ್ಯಂಗ್ಯ

Exit mobile version