Site icon Vistara News

Hubli | ಹಳೆ ದ್ವೇಷದ ಹಿನ್ನೆಲೆ, ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ

Road Accident

ಹುಬ್ಬಳ್ಳಿ : ಹಳೆ ದ್ವೇಷದ ಹಿನ್ನೆಲೆಯಲ್ಲಿ ಚೂರಿಯಿಂದ ಇರಿದು ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ (Hubli ) ನಡೆದಿದೆ.

ಹುಬ್ಬಳ್ಳಿಯ ದುರ್ಗದಬೈಲ್ ಸರ್ಕಲ್ ಬಳಿ ಘಟನೆ ನಡೆದಿದೆ. ಸಂತೋಷ ಮುರಗೋಡ (40) ಹತ್ಯೆಗೀಡಾಗಿದ್ದಾರೆ.

ಹೊಟ್ಟೆ ಹಾಗೂ ಎದೆ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಗಾಯಾಳು ಸಂತೋಷ ಮುರಗೋಡ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಕೊಲೆ ಆರೋಪಿ ಜಂಗ್ಲಿಪೇಟೆ ಶಿವುನನ್ನು ಪೊಲೀಸರು ಬಂಧಿಸಿದ್ದಾರೆ. ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version