Basavaraja Bommai : ಮಹಾದಾಯಿ ಯೋಜನೆಗೆ ಗೋಡೆ ಕಟ್ಟಿದ್ದೇ ಕಾಂಗ್ರೆಸ್‌; ಬೊಮ್ಮಾಯಿ ಆರೋಪ - Vistara News

ಹುಬ್ಬಳ್ಳಿ

Basavaraja Bommai : ಮಹಾದಾಯಿ ಯೋಜನೆಗೆ ಗೋಡೆ ಕಟ್ಟಿದ್ದೇ ಕಾಂಗ್ರೆಸ್‌; ಬೊಮ್ಮಾಯಿ ಆರೋಪ

Basavaraja Bommai : ನಾವು ಮಹಾದಾಯಿ ಯೋಜನೆಗೆ ಕಾಲುವೆ ಮಾಡಿದೆವು, ಆದರೆ, ಕಾಂಗ್ರೆಸ್‌ನವರು ಅದಕ್ಕೆ ಗೋಡೆ ಕಟ್ಟಿದರು. ಯೋಜನೆಗೆ ಹಿನ್ನಡೆಯಾಗಲು ಕಾರಣರಾದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಪಾದಿಸಿದರು.

VISTARANEWS.COM


on

Basavaraja Bommai Mahadayi river
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ (Mahadayi Project) ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್‌ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಆರೋಪಿಸಿದ್ದಾರೆ. ನಗರದ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೆ ಅದಕ್ಕೆ ನೇರ ಕಾರಣ ಕಾಂಗ್ರೆಸ್‌ (Congress Party) ಎಂದು ಹೇಳಿದರು.

ಈ ಹಿಂದೆ ಮೊಟ್ಟಮೊದಲ ಟ್ರಿಬ್ಯೂನಲ್‌ಗೆ ಹೋಗುವ ಅವಶ್ಯಕತೆ ಇರಲಿಲ್ಲ, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ, ಅದರಿಂದ 8-10 ವರ್ಷ ವಿಳಂಬವಾಯಿತು. ಅತ್ಯಂತ ದೊಡ್ಡ ತಪ್ಪು ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಆರೋಪಿಸಿದರು.

ಟ್ರಿಬ್ಯೂನಲ್’ನಲ್ಲಿ ಮುಂದೆ ಬರೆದುಕೊಡುವ ಮೂಲಕ ಮಹದಾಯಿಯಿಂದ ಮಲಪ್ರಭಾ ಇಂಟರ್ ಲಿಂಕಿಂಗ್ ಜೋಡಣೆಗೆ ಕಾಂಗ್ರೆಸ್‌ನವರು ಗೋಡೆ ಕಟ್ಟಿದ್ದರು. ನೀರಾವರಿ ಯೋಜನೆಗೆ ಗೋಡೆ ಕಟ್ಟಿದ ಅಪಖ್ಯಾತಿ ಇದ್ದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಇದೆ. ನಾವು ಕಾಲುವೆ ಮಾಡಿದರೆ ಕಾಂಗ್ರೆಸ್‌ನವರು ಗೋಡೆ ಕಟ್ಟಿದರು ಎಂದರು.

ದಾಖಲೆ ಕೊಟ್ಟರೆ ಪರಿಸರ ಇಲಾಖೆ ಅನುಮೋದನೆ ಕೊಡಿಸುತ್ತೇವೆ ಎಂದ ಬೊಮ್ಮಾಯಿ

ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಸಂಪೂರ್ಣವಾಗಿ ವಿರೋಧ ಮಾಡತ್ತ ಬಂದರು. ನಮ್ಮ ಸರ್ಕಾರ ಗೋವಾದಲ್ಲಿದ್ದಾಗ ಬಿಜೆಪಿ ಯೋಜನೆಯ ಡಿಪಿಆರ್ ಅನುಮೋದನೆ ಕೊಟ್ಟಿದೆ. ಇವರ ಕೈಯಲ್ಲಿ ಅಧಿಕಾರದಲ್ಲಿದ್ದಾಗ ಡಿಪಿಆರ್ ಅನುಮೋದನೆ ಮಾಡಿಸಲು ಆಗಿರಲಿಲ್ಲ, ಇದೀಗ ಪರಿಸರ ಇಲಾಖೆಯಲ್ಲಿ ಅನುಮೋದನೆ ಬಾಕಿ ಇದೆ. ಅವರು ಕೆಲವು ದಾಖಲೆಗಳನ್ನು ಕೇಳಿದ್ದಾರೆ. ಇವರು ಸರಿಯಾದ ದಾಖಲೆಗಳನ್ನು ನೀಡಿದರೆ, ನಾವು ಕೇಂದ್ರದ ಮೇಲೆ ಒತ್ತಡ ತ‌ಂದು ಪರಿಸರ ಇಲಾಖೆಯಿಂದ ಅನುಮೋದನೆ ಕೊಡಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಪರಿಸರ ಇಲಾಖೆಯ ಅನುಮೋದನೆ ಪಡೆಯದೇ ಟೆಂಡರ್ ಮಾಡುವ ಕೆಲಸ ಮಾಡಿದೆ. ಇದರಿಂದ ಕೆಲಸ ಮಾಡಲು ಸಾಧ್ಯವೇ? ಹಾಗಾಗಿ ಗೋವಾ ಸರ್ಕಾರ ಕೋರ್ಟ್’ಗೆ ಹೋಗಿದ್ದಾರೆ ಎಂದು ತಿಳಿಸಿದರು.

ರಾಜ್ಯದ ನೀರಾವರಿ ಯೋಜನೆಗಳಾದ ಕೃಷ್ಣ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಕೋರ್ಟ್’ನಲ್ಲಿ ಸಮರ್ಥವಾಗಿ ವಾದ ಮಾಡಬೇಕು. ಈ ಹಿಂದೆ ಕೃಷ್ಣ ಯೋಜನೆಗೆ 2010ರ ಡಿಸೆಂಬರ್ ಟ್ರಿಬ್ಯೂನಲ್‌ನಲ್ಲಿ ಆದೇಶ ಬಂದಿದೆ. ಆದರೂ ಕಾಂಗ್ರೆಸ್ ಅದನ್ನು ವಿರೋಧಿಸಿ ಕೋರ್ಟ್ ಗೆ ಒಂದು ಅರ್ಜಿಯನ್ನೂ ಹಾಕಲಿಲ್ಲ. ಮಹಾರಾಷ್ಟ್ರದವರು ಹಾಕಿದ ಅರ್ಜಿಯ ಹಿಂದೆ ಬಾಲಂಗೋಚಿಯ ಥರ ಹೋದರು. ನಾವು ಅಧಿಕಾರದಲ್ಲಿದ್ದಾಗ 5000 ಕೋಟಿ ರೂ. ಹಣ ಮೀಸಲಿಟ್ಟು ರೈತರಿಗೆ ಪರಿಹಾರ ಕೊಡುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ಪ್ರಲ್ಹಾದ್ ಜೋಶಿ, ಬಸವರಾಜ ಬೊಮ್ಮಾಯಿ ರಾಜ್ಯದ ಜನತೆಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರು ಸುಳ್ಳು ಹೇಳುತ್ತಾರೆ? ಯಾರು ಸತ್ಯ ಹೇಳುತ್ತಾರೆ ಎನ್ನುವುದು ಜನರಿಗೆ ಗೊತ್ತಿದೆ. ಕಾಂಗ್ರೆಸ್’ನವರು ಸತ್ಯ ಹರಿಶ್ಚಂದ್ರರಾ ಎಂದು ಕಿಡಿಕಾರಿದರು.

ಇದನ್ನೂ ಓದಿ: Basavaraja Bommai : ಸಿದ್ದರಾಮಯ್ಯಗೆ ಉತ್ತರ ಕೊಡಲು ಬಿಜೆಪಿ ಐಟಿ ಸೆಲ್‌ ಹುಡುಗ್ರು ಸಾಕು ಎಂದ ಬೊಮ್ಮಾಯಿ!

ತೆರಿಗೆ ಪಾಲು ಹೆಚ್ಚಿಸಿದ ಮೋದಿ ನುಡಿದಂತೆ ನಡೆದಿದ್ದಾರೆ

ಪ್ರಧಾನಿ ನರೇಂದ್ರ ಮೋದಿಯವರು ನುಡಿದಂತೆ ನಡೆದಿದ್ದಾರೆ. ಅವರು ಕೇಂದ್ರದ ಅನುದಾನ ಹಂಚಿಕೆ ಕುರಿತು ಮುಖ್ಯಮಂತ್ರಿಯಾಗಿದ್ದಾಗ ಏನು ಆಗ್ರಹ ಮಾಡಿದ್ದರೋ ಅದನ್ನು ಪ್ರಧಾನಿಯಾದ ಮೂರೇ ತಿಂಗಳಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಬರುವ ತೆರಿಗೆ ಪಾಲಿನಲ್ಲಿ ಶೇ. 32ರಿಂದ ಶೇ. 42ಕ್ಕೆ ಹೆಚ್ಚಳ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆಯೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನವರು ಕೇಂದ್ರದ ವಿರುದ್ಧ ನಿರ್ಣಯ ಮಂಡಿಸಿದರೆ, ನಾವೂ ಕೇಂದ್ರದ ಪರ ನಿರ್ಣಯ ಮಂಡಿಸಿದ್ದೇವೆ ಎರಡೂ ಜನರ ಮುಂದೆ ಹೋಗುತ್ತವೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ; ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ

Karnataka Weather Forecast : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather Forecast Cloudy weather in Bengaluru Moderate rainfall in coastal and Malnad regions
Koo

ಬೆಂಗಳೂರು: ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ (Karnataka Weather Forecast) ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಶುಕ್ರವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲೂ ಸಾಧಾರಣವಾಗಿರಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಒಣ ಹವಾಮಾನ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಲಿದೆ.

Continue Reading

ಮಳೆ

Karnataka Weather : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

Karnataka Weather Forecast : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ (Rain News) ಸಾಧಾರಣವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ಸೆ.11ರಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ವೇಗದಲ್ಲಿ ಸಂಭವಿಸುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಹಲವೆಡೆ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಘಳಿಗೆಗೊಂದು ವಾತಾವರಣ ಇರಲಿದೆ. ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಭಾರಿ ಮಳೆ ಎಚ್ಚರಿಕೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಸಿಂಚನ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

Karnataka Weather : ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಸಿಂಚನವಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (RainNews) ಸಾಮಾನ್ಯವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿಯ ಉಡುಪಿ, ಉತ್ತರ ಕನ್ನಡ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

karnataka Weather Forecast : ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ (rain News) ಸಾಧ್ಯತೆ ಇದ್ದು, 9 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಹೀಗಾಗಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಮಲೆನಾಡು ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲೂ ಸಾಧಾರಣವಾಗಿರಲಿದೆ.

ಗುಡುಗು ಸಹಿತ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆ ಅಬ್ಬರ

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Weather Forecast Cloudy weather in Bengaluru Moderate rainfall in coastal and Malnad regions
ಮಳೆ13 mins ago

Karnataka Weather : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ; ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ

Dina bhavishya
ಭವಿಷ್ಯ43 mins ago

Dina Bhavishya : ಈ ರಾಶಿಯವರಿಗೆ ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿಯಿಂದ ಸಂತೋಷ ದುಪ್ಪಟ್ಟು

Prosecution against Siddaramaiah Hc reserves verdict after hearing arguments
ಕೋರ್ಟ್11 hours ago

CM Siddaramaiah : ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್;​ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿಸಿರಿದ ಹೈಕೋರ್ಟ್, ಮಧ್ಯಂತರ ತಡೆ ಮುಂದುವರಿಕೆ

Colon cancer is on the rise‌ Those above 50 years of age are targeted
ಆರೋಗ್ಯ12 hours ago

Colon cancer : ಕರುಳಿನ ಕ್ಯಾನ್ಸರ್ ವಯಸ್ಸಾದವರಿಗೆ ಕಂಟಕ! ಈ ಆಹಾರಗಳನ್ನು ತಿನ್ನಲೇಬೇಡಿ

Suvarna Celebrity League a reality show launched on Star Suvarna
ಸಿನಿಮಾ13 hours ago

Suvarna Celebrity League : ವಾರಾಂತ್ಯದಲ್ಲಿ ಸೆಲೆಬ್ರಿಟಿಗಳ ಸಮರ; ಕಿರುತೆರೆಯಲ್ಲಿ ಶುರುವಾಗಲಿದೆ ಸುವರ್ಣ ಸೆಲೆಬ್ರಿಟಿ ಲೀಗ್

Self harming
ಬೆಂಗಳೂರು15 hours ago

Self Harming : ಅಮ್ಮ ಬೈಕ್‌ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ

Actor darshan
ಸಿನಿಮಾ15 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಗ್ಯಾಂಗ್‌ಗೆ ಮತ್ತೊಂದು ದಿನ ಸೆರೆವಾಸ; ನಾಳೆಗೆ ವಿಚಾರಣೆ ಮುಂದೂಡಿದ ಕೋರ್ಟ್‌

CM Siddaramaiah
ರಾಜಕೀಯ16 hours ago

CM Siddaramaiah : ಸಿದ್ದರಾಮಯ್ಯ ವಿಷ್ಯದಲ್ಲಿ ಆತುರದ ನಿರ್ಣಯ; ರಾಜ್ಯಪಾಲರಿಂದ ಸಂವಿಧಾನಕ್ಕೆ ಅಪಚಾರ- ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ

Road Accident
ಪ್ರಮುಖ ಸುದ್ದಿ18 hours ago

Road Accident : ಏರ್‌ಪೋರ್ಟ್‌ ರೋಡ್‌ನಲ್ಲಿ ಡೆಡ್ಲಿ ಹಿಟ್‌ ಆ್ಯಂಡ್‌ ರನ್‌; ಲಾಂಗ್‌ ಡ್ರೈವ್‌‌ ಬಂದಿದ್ದ ಮೂವರು ವಿದ್ಯಾರ್ಥಿಗಳು ಬಲಿ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರ ಅನುಮಾನವೇ ಸಂಬಂಧಗಳನ್ನು ಹಾಳು ಮಾಡುತ್ತೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌