Site icon Vistara News

Constable Death : ಹುಬ್ಬಳ್ಳಿಯಲ್ಲಿ ರೈಲಿಗೆ ತಲೆ ಕೊಟ್ಟ ಕಾನ್ಸ್‌ಟೇಬಲ್‌; ಆತ್ಮಹತ್ಯೆಗೆ ಕಾರಣ ಇನ್ನೂ ನಿಗೂಢ

Constable Death commits suicide by hanging himself from train

ಹುಬ್ಬಳ್ಳಿ : ಹುಬ್ಬಳ್ಳಿ ಉತ್ತರ ಸಂಚಾರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ವೊಬ್ಬರು ಆತ್ಮಹತ್ಯೆ (Constable Death) ಮಾಡಿಕೊಂಡಿದ್ದಾರೆ. ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಾಜ ಹಂಚಿನಮನಿ (48) ಮೃತಪಟ್ಟವರು.

ಹುಬ್ಬಳ್ಳಿ ತಾಲೂಕಿನ ಉಣಕಲ್ ಹತ್ತಿರ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಾಜ ಹಂಚಿನಮನಿ ಅವರು ಹುಬ್ಬಳ್ಳಿಯ ಲಿಂಗರಾಜ ನಗರದ ಟ್ರಾಫಿಕ್ ಪೊಲೀಸ್ ಆಗಿದ್ದರು. ಸ್ಥಳೀಯರ ಮಾಹಿತ ಮೇರೆಗೆ ಸ್ಥಳಕ್ಕಾಗಮಿಸಿದ ಹುಬ್ಬಳ್ಳಿ ರೈಲ್ವೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಹುಬ್ಬಳ್ಳಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

ಶಿವಮೊಗ್ಗ: ಮೇಲಧಿಕಾರಿಗಳ ಕಿರುಕುಳ (harassment) ಸಹಿಸಲಾಗುತ್ತಿಲ್ಲ ಎಂದು ಆರೋಪಿಸಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಎಂಬವರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಶಿವಮೊಗ್ಗದ (Shivamogga news) ತಮ್ಮ ಮನೆಯಲ್ಲಿ ಅವರು ನೇಣು ಹಾಕಿಕೊಂಡಿದ್ದಾರೆ.

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (karnataka state valmiki development corporation) ನಡೆದಿರುವ 187 ಕೋಟಿ ರೂಪಾಯಿ ಮೊತ್ತದ ಹಗರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್ ಒಂದು ಸಿಕ್ಕಿದ್ದು, ಅದರಲ್ಲಿ ತಮ್ಮ ಮೇಲಧಿಕಾರಿಗಳನ್ನು ತಮ್ಮ ಸಾವಿಗಾಗಿ ದೂರಿದ್ದಾರೆ. 6 ಪುಟಗಳ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಪದ್ಮನಾಭ, ಪರಶುರಾಮ್, ಶುಚಿಸ್ವತ ಎಂಬ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version