ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ಪರಿಷ್ಕರಿಸಲಾಗಿದ್ದು, ಈ ರೈಲುಗಳ (Hubballi Train) ಬದಲಾವಣೆಯು ಯಾವ ದಿನಾಂಕದಿಂದ ಜಾರಿ ಬರಲಿದೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.
ಜೂನ್ 21ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16532 ಕೆಎಸ್ಆರ್ ಬೆಂಗಳೂರು-ಅಜ್ಮೀರ್ ಗರೀಬ್ ನವಾಜ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.
ಇದನ್ನೂ ಓದಿ: LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ
ಜೂ.22ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16506 ಕೆಎಸ್ಆರ್ ಬೆಂಗಳೂರು-ಗಾಂಧಿ ಧಾಮ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.
ಜೂ. 23 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16534 ಕೆಎಸ್ಆರ್ ಬೆಂಗಳೂರು-ಜೋಧಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.
ಜೂ.24 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16508 ಕೆಎಸ್ಆರ್ ಬೆಂಗಳೂರು-ಜೋಧಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.
ಇದನ್ನೂ ಓದಿ: KSET Results 2024: ಕೆ-ಸೆಟ್ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ
ಜೂ.25 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16210 ಮೈಸೂರು-ಅಜ್ಮೀರ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ ಎಂದು ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದೆ.