Site icon Vistara News

Lok Sabha Election 2024: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ಛಲವಾದಿ ನಾರಾಯಣಸ್ವಾಮಿ

MLC Chalavadi Narayanaswamy latest Statement in Hubballi

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು (State Congress Government) ನುಡಿದಂತೆ ನಡೆದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ (Lok Sabha Election 2024) ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದ ಸರ್ಕಾರವೇ ಅಲ್ಲ. ಅದು ಹೇಳಿದ್ದು ಒಂದು, ಮಾಡಿದ್ದು ಮತ್ತೊಂದು. ಗ್ಯಾರಂಟಿ ಕಾರ್ಯಕ್ರಮ ಕೊಟ್ಟರು. ಆದರೆ ಅವುಗಳು ಜನರಿಗೆ ತಲುಪಿಸುವ ಕುರಿತು ಗ್ಯಾರಂಟಿ ನೀಡಲಿಲ್ಲ ಎಂದು ಟೀಕಿಸಿದರು.

ದಲಿತ ಸಮುದಾಯಗಳಿಗೆ ಕಾಂಗ್ರೆಸ್ ಸರ್ಕಾರವು ಯಾವುದೇ ಗ್ಯಾರಂಟಿ ನೀಡಲಿಲ್ಲ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ 25,386 ಕೋಟಿ ರೂ.ಗಳನ್ನು ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿ ದಲಿತರಿಗೆ ದ್ರೋಹ ಎಸಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ

ಈ ಪ್ರಶ್ನೆಗೆ ಮುಖ್ಯಮಂತ್ರಿಯಾಗಲೀ, ಉಳಿದವರಾಗಲೀ ಉತ್ತರ ಕೊಡಲು ಸಿದ್ಧರಿಲ್ಲ. ದಲಿತರನ್ನು ಬಡವರನ್ನಾಗಿಯೇ ಉಳಿಸುವ, ಬರೀ ವೋಟ್‌ಗೆ ಮಾತ್ರ ಬಳಕೆ ಮಾಡಿ, ಗುಲಾಮರನ್ನಾಗಿಸುವುದು ಕಾಂಗ್ರೆಸ್‌ನ ಕುತಂತ್ರವಾಗಿದೆ. ಇದು ದಲಿತರಿಗೆ ಮಾಡಿದ ಮೋಸ ಎಂದು ದೂರಿದರು.

ಇದು ಲೋಕಸಭೆ ಚುನಾವಣೆ. ಇಲ್ಲಿ ದೇಶ ಮತ್ತು ಅಂತಾರಾಷ್ಟ್ರೀಯ ವಿಚಾರಗಳು ಚರ್ಚೆಗೆ ಬರಬೇಕು. ಆದರೆ ಸಿದ್ಧರಾಮಯ್ಯ ಈ ಚುನಾವಣೆಯನ್ನು ರಾಜ್ಯದ ಚುನಾವಣೆ ಎಂದು ಭಾವಿಸಿದ್ದಾರೆ. ದೇಶದ ಬಗ್ಗೆ ಚಕಾರವೆತ್ತದೇ, ಬರೀ ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ ಅಲ್ಲದೇ ಮುಂಜಾನೆಯಿಂದ ಸಂಜೆವರೆಗೂ ಬರೀ ಸುಳ್ಳು ಹೇಳುತ್ತಾರೆ. ಪ್ರಧಾನಿ ಮೋದಿ ವಿರುದ್ಧ ಬರೀ ಅಪಪ್ರಚಾರ ಮಾಡುತ್ತಾರೆ. ಕಾಂಗ್ರೆಸ್‌ನವರು ದೇಶಕ್ಕಾಗಿ ಏನು ಮಾಡಿದ್ದಾರೆ ಹೇಳಬೇಕು. ಈ ಬಗ್ಗೆ ಮಾತನಾಡದೇ ಕ್ಷುಲ್ಲಕ ವಿಚಾರಗಳನ್ನು ಪ್ರಸ್ತಾಪಿಸಿ, ಬರೀ ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್‌ನವರಿಗೆ ಬಿಜೆಪಿಯನ್ನಾಗಲೀ, ಮೋದಿಯನ್ನಾಗಲೀ ಟೀಕಿಸಲು ನೈತಿಕ ಹಕ್ಕಿಲ್ಲ ಎಂದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ಆರೋಪಿಸುತ್ತಾರೆ. ಆದರೆ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.

ಮಾಜಿ ಸಚಿವ ಎನ್.ಮಹೇಶ ಮಾತನಾಡಿದರು.

ಇದನ್ನೂ ಓದಿ: Chandrayaan 3: ಇತಿಹಾಸ ಸೃಷ್ಟಿಸಿ ಚಂದ್ರನ ಮಡಿಲಲ್ಲಿ ಮಲಗಿದ ವಿಕ್ರಮ್‌ ಲ್ಯಾಂಡರ್‌, ಪ್ರಜ್ಞಾನ್‌ ರೋವರ್; ಇಲ್ಲಿವೆ Photos

ಈ ಸಂದರ್ಭದಲ್ಲಿ ಮುಖಂಡರಾದ ಮಹೇಂದ್ರ ಕೌತಾಳ, ಬಸವರಾಜ ಅಮ್ಮಿನಭಾವಿ, ಗುರು ಪಾಟೀಲ, ಪರಶುರಾಮ ಪೂಜಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version