Site icon Vistara News

Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Murder Case in hubballi

ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕೊಲೆಯಾಗಿ (Murder case) ಹೋಗಿದ್ದಾನೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಹುಬ್ಬಳ್ಳಿ (Hubballi News) ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಶರೀಫ್‌ಸಾಬ್ ಕಮಡೊಳ್ಳಿ ಎಂಬಾತ ಹತ್ಯೆಯಾದವನು. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲೆ ಶರೀಪ್‌ಸಾಬ್‌ನ ಕೊಲೆಯಾಗಿದೆ. ಶಶಿಧರ ಚೆನ್ನೋಜಿ ಎಂಬಾತ ಕೊಲೆ ಆರೋಪಿ ಎಂದು ಶಂಕಿಸಲಾಗಿದೆ.

ಸದ್ಯ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದರು.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆ‌ಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version